fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಮಂಗಳವಾರ, ಜುಲೈ 14, 2015

ಸಿಂಹ ವಾಹಿನಿ ನೆಲೆಸಿಹ ಬನಶಂಕರಿ

ಬಾಗಲಕೋಟೆ ಜಿಲ್ಲೆಯ ಸುಂದರ ತಾಣ
ಟಿ.ಎಂ. ಸತೀಶ್
Banashankari Godess, ಬನಶಂಕರಿ ದೇವಾಲಯ ಕನ್ನಡರತ್ನ.ಕಾಂ, kannadaratna.com, ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿರುವ ಪವಿತ್ರ ಪುಣ್ಯ ಕ್ಷೇತ್ರ ಬನಶಂಕರಿ. ಸಿಂಹ ವಾಹಿನಿಯಾದ ಪಾರ್ವತಿ ಬನಶಂಕರಿಯಾಗಿ ನೆಲೆಸಿಹ ಈ ಊರಿಗೆ ಬನಶಂಕರಿ ಎಂದೇ ಹೆಸರು ಬಂದಿದೆ.
ಈ ಪ್ರದೇಶ ಸಂಪೂರ್ಣ ಬನಗಳಿಂದ ಕೂಡಿರುವ ಕಾರಣ ಇಲ್ಲಿ ನೆಲೆಸಿಹ ತಾಯಿಗೂ ಬನಶಂಕರಿ ಎನ್ನುತ್ತಾರೆ. ಈ ತಾಯಿಗೆ ಸ್ಥಳೀಯರು ಬಾಳವ್ವ, ಬನದವ್ವ, ಸುಂಕವ್ವ, ಶಾಕಾಂಬರಿ, ಶಿರಿವಂತಿ, ಚೌಡಮ್ಮ, ವನದುರ್ಗೆ ಎಂತಲೂ ಕರೆಯುತ್ತಾರೆ. ಬನಶಂಕರಿ ನವದುರ್ಗೆಯರದಲ್ಲಿ 6ನೇ ಅವತಾರವೆಂದೂ ಹೇಳಲಾಗುತ್ತದೆ. ಈ ಪ್ರದೇಶದಲ್ಲಿ ಭೀಕರ ಕ್ಷಾಮ ತಲೆದೋರಿದಾಗ ತಾಯಿ ತನ್ನ ತನುವಿನಿಂದ ಕಾಯಿಪಲ್ಲೆ ಸೃಷ್ಟಿಸಿ ಜನರ ಸಂಕಷ್ಟ ನೀಗಿಸಿದಳಂತೆ ಹೀಗಾಗೇ ಶಾಕಾಂಬರಿ ಎನ್ನುವ ಹೆಸರು ತಾಯಿಗೆ ಬಂತೆಂದೂ ಅರ್ಚಕರು ಹೇಳುತ್ತಾರೆ. ಈ ಪ್ರದೇಶದ ಜನರು ಪ್ರತಿವರ್ಷ ಮಾಗಿ ಕಾಲದಲ್ಲಿ ನಡೆಯುವ ರಥೋತ್ಸವದ ಮುನ್ನಾ ದಿನ ತಾಯಿಗೆ 108 ತರಕಾರಿಗಳಿಂದ ಖಾದ್ಯ ತಯಾರಿಸಿ ಸಮರ್ಪಿಸುವ ಮೂಲಕ ಕೃತಜ್ಞತೆ ಅರ್ಪಿಸುತ್ತಾರೆ. ಈ Banashankari Temple, ಬನಶಂಕರಿ ದೇವಾಲಯ ಕನ್ನಡರತ್ನ.ಕಾಂ, kannadaratna.com, ಋಣ ಸಂದಾಯ ಪಲ್ಲೇದ ಹಬ್ಬ ಎಂದೇ ಖ್ಯಾತವಾಗಿದೆ. ದೇವಿ ಶಾಂಕಾಂಬರಿ ಆದ ಬಗ್ಗೆ ಸ್ಕಂದ ಪುರಾಣ, ಪದ್ಮಪುರಾಣಗಳಲ್ಲಿ ಉಲ್ಲಖವಿದೆಯೆಂತಲೂ ಹಿರೀಕರು ಹೇಳುತ್ತಾರೆ. ಈ ಊರಿನ ಸುತ್ತ ಅರಣ್ಯವಿದೆ, ತೆಂಗು, ಬಾಳೆ, ವೀಳೆಯದೆಲೆಯ ಬನಗಳಿವೆ. ಸನಿಹದಲ್ಲೇ ಸರಸ್ವತಿ ಹೊಳೆಯೂ ಹರಿಯುತ್ತದೆ.
ಸುಂದರ ಕೋಟೆಯಂತೆ ಭಾಸವಾಗುವ ಪ್ರವೇಶ ದ್ವಾರ ದಾಟಿ ಒಳಹೊಕ್ಕರೆ ದೇವಾಲಯ ಕಾಣಸಿಗುತ್ತದೆ. ದೇವಾಲಯದ ಎದುರು ಸುಂದರವಾದ ಕೊಳವಿದೆ. 360 ಅಡಿಗಳ ಚಚ್ಚೌಕಾಕಾರದ ಈ ಕಲ್ಯಾಣಿಯ ಸೌಂದರ್ಯ ನೋಡಲು ಎರಡು ಕಣ್ಣು ಸಾಲದು. ಈ ಕೊಳ ಬನಶಂಕರಿಯಲ್ಲಿ ನೋಡಲೇ ಬೇಕಾದ ರಮಣೀಯ ತಾಣ.
Banashankari, ಬನಶಂಕರಿ ದೇವಾಲಯ ಗೋಪುರ, ಕಲ್ಯಾಣಿ ಕನ್ನಡರತ್ನ.ಕಾಂ, kannadaratna.com, ಕಲ್ಯಾಣಿಯ ಸೊಬಗನ್ನು ಕಣ್ತುಂಬಿಕೊಂಡು ದೇವಾಲಯ ಪ್ರವೇಶಿಸಿದರೆ ದ್ರಾವಿಡ ಶೈಲಿಯಲ್ಲಿರುವ ಮನೋಹರವಾದ ದೇವಾಲಯದ ಸೌಂದರ್ಯ ಕಣ್ಮನ ಸೆಳೆಯುತ್ತದೆ. ಕಲ್ಯಾಣ ಚಾಲುಕ್ಯರ ದೊರೆ 1ನೇ ಜಗದೇಕಮಲ್ಲನ ಕಾಲದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ, ಕ್ರಿ.ಶ.603ರಲ್ಲಿ ದೇವಿಯ ಪ್ರತಿಷ್ಠಾಪನೆ ಮಾಡಲಾಗಿದೆ ಎಂಬುದನ್ನು ಇಲ್ಲಿರುವ ಶಾಸನಗಳು ಸಾರುತ್ತವೆ.
ದೇವಾಲಯದ ಆವರಣದಲ್ಲಿರುವ ಸ್ತಂಭಗಳು ನಯನ ಮನೋಹರವಾಗಿವೆ. ಗರ್ಭಗುಡಿಯಲ್ಲಿ ಗರ್ಜಿಸುತ್ತಿರುವ ಸಿಂಹದ ಮೇಲೆ ವಿರಾಜಮಾನಳಾದ ಪಾರ್ವತಿಯ ಸುಂದರ ಮೂರ್ತಿಯಿದೆ. ದೇವಿಗೆ ಶರಣು ಹೋದರೆ ಸಕಲ ಅಭಿಷ್ಟಗಳೂ ಈಡೇರುತ್ತವೆ ಎಂಬುದು ಭಕ್ತರ ನಂಬಿಕೆ.  ವರ್ಷಕ್ಕೊಮ್ಮೆ ನಡೆಯುವ ಬನಶಂಕರಿ ಜಾತ್ರೆ ಜಗದ್ವಿಖ್ಯಾತವಾಗಿದೆ. ಅಂದು ಊರಿಗೆ ಊರೇ ತಳಿರು ತೋರಣಗಳಿಂದ ಅಲಂಕೃತವಾಗುತ್ತದೆ. ದೂರದೂರುಗಳಿಂದ ಆಗಮಿಸುವ ಭಕ್ತರು ಇಲ್ಲಿ ಬಂದು ಬಿಡಾರ ಹೂಡಿ ದೇವಿಯನ್ನು ಪೂಜಿಸುತ್ತಾರೆ. ಬನಶಂಕರಿ ನವದುರ್ಗೆಯರ 6ನೇ ಅವತಾರವಾಗಿದೆ.
ಬನಶಂಕರಿ ಬೆಂಗಳೂರಿನಿಂದ 425 ಕಿಲೋ ಮೀಟರ್ ದೂರದಲ್ಲಿದೆ. 
ಸಂಪರ್ಕ: ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಖನಿಜ ಭವನ, ರೇಸ್‌ಕೋರ್ಸ್ ರಸ್ತೆ, ಬೆಂಗಳೂರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು