fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶುಕ್ರವಾರ, ಫೆಬ್ರವರಿ 10, 2017

ನುಡಿಮುತ್ತು 43

  • "ಜೀವನದಲ್ಲಿ ಎಂದೂ ಯಾರಿಂದಲೂ ಸಹಾಯದ ಅಪೇಕ್ಷೆಯನ್ನ ಇಡಬಾರದು. ಯಾಕೆಂದರೆ ನಾವು ಕಷ್ಟದಲ್ಲಿ ಇದ್ದಾಗ ಯಾರಾದರೂ ಸಹಾಯ ಮಾಡದಿದ್ದರೆ ಅದಕ್ಕಿಂತ ದೊಡ್ಡ ಯಾತನೆ ಬೇರೊಂದಿಲ್ಲ."
  • "ದೇವರಲ್ಲಿ ಎಂದಿಗೂ ಕೇವಲ ಸ್ವಂತದ ಏಳಿಗೆಯಾಗಲಿ ಅಂತ ಬೇಡಿಕೊಳ್ಳದೆ ಹತ್ತು ಜನರ ಏಳಿಗೆಯಾಗಲಿ ಅಂತ ಬೇಡಿಕೊಳ್ಳಿ. ದೇವರ ಕೊಡುವ ವರಕ್ಕಿಂತ ಆ ಹತ್ತು ಜನರನ್ನ ಉದ್ಧಾರ ಮಾಡಿದ ಪುಣ್ಯ ಎಷ್ಟೋ ದೊಡ್ಡದು"
  • "ಮನುಷ್ಯನಿಗೆ ಯಾವಾಗ ಒಂದು ವಸ್ತು ಸುಲಭವಾಗಿ ಸಿಗುವ ಹಾಗೆ ಇರುತ್ತೋ ಆಗ ಅದರ ಬೆಲೆ ಗೊತ್ತಿರುವುದಿಲ್ಲ, ಆದರೆ ಯಾವಾಗ ಆ ವಸ್ತುವಿನ ಬೆಲೆ ತಿಳಿಯುತ್ತದೋ ಆಗ ಅದು ಸುಲಭವಾಗಿ ಸಿಗುವುದಿಲ್ಲ."
  • ಸರಸ್ವತಿಯೇ, ನಿನ್ನ ಬಳಿ ವಿದ್ಯೆಯೆಂಬ ಅಪರೂಪದ ಭಂಡಾರವೊಂದಿದೆ.
  • ಬೇರೆಲ್ಲ ಸಂಪತ್ತುಗಳೂ ಹಂಚಿಕೊಂಡಷ್ಟೂ ಕ್ಷೀಣಿಸುತ್ತವೆ.
  • ಆದರೆ (ನಿನ್ನ ಬಳಿಯಿರುವ) ವಿದ್ಯೆಯೆಂಬ ಸಂಪತ್ತು ಮಾತ್ರ
  • ಹಂಚಿಕೊಂಡಷ್ಟೂ ವೃದ್ಧಿಸುತ್ತದೆ ಮತ್ತು ಗೋಪ್ಯವಾಗಿಟ್ಟಷ್ಟೂ ಕ್ಷೀಣಿಸುತ್ತದೆ!
  • - ಸಂಸ್ಕೃತ ಸುಭಾಷಿತ
  • ಕಾದ ಕಾವಲಿಯ ಮೇಲೆ ಬಿದ್ದ ನೀರ ಹನಿಯೊಂದು ಆವಿಯಾಗಿ ತನ್ನ ಸ್ವರೂಪವನ್ನೇ ಕಳೆದುಕೊಳ್ಳುತ್ತದೆ.
  • ಕಮಲದೆಲೆಯ ಮೇಲೆ ಬಿದ್ದ ಅದೇ ನೀರ ಹನಿಯು ಸೂರ್ಯನ ಬೆಳಕಿನಲ್ಲಿ ಮುತ್ತಿನಂತೆ ಕಂಗೊಳಿಸುತ್ತದೆ.
  • ಸ್ವಾತಿ ನಕ್ಷತ್ರದಲ್ಲಿ ಕಪ್ಪೆಚಿಪ್ಪನ್ನು ಪ್ರವೇಶಿಸಿದ ಅದೇ ನೀರ ಹನಿಯು ಅನರ್ಘ್ಯವಾದ ಮುತ್ತೇ ಆಗುತ್ತದೆ.
  • ಹೀಗೆ ಉತ್ತಮ, ಮಧ್ಯಮ ಮತ್ತು ಅಧಮವೆಂಬ ಮೂರು ಗುಣಗಳೂ ಸಹವಾಸದಿಂದ ಉಂಟಾಗುತ್ತವೆ!
  • - ಭರ್ತೃಹರಿಯ ನೀತಿಶತಕ
  • ಕಾಗೆ ಕಪ್ಪು. ಕೋಗಿಲೆ ಕೂಡಾ ಕಪ್ಪು. ಹಾಗಾದರೆ ಕಾಗೆ-ಕೋಗಿಲೆಗಳ ನಡುವಣ ವ್ಯತ್ಯಾಸ ತಿಳಿಯುವುದು ಹೇಗೆ?
  • ಬಹಳ ಸುಲಭ; ವಸಂತಮಾಸ ಬಂದೊಡನೆ ಕಾಗೆ ಕಾಗೆಯೇ, ಕೋಗಿಲೆ ಕೋಗಿಲೆಯೇ!
  • (ವಸಂತಮಾಸದಲ್ಲಿ ಮಾವು ಚಿಗುರುವುದರಿಂದ ಕೋಗಿಲೆ ಇಂಪಾದ ದನಿಯಲ್ಲಿ ಹಾಡುತ್ತದೆ. ಕಾಗೆಗದು ಅಸಾಧ್ಯ ಎಂಬರ್ಥದಲ್ಲಿ)
  • - ಸಂಸ್ಕೃತ ಸುಭಾಷಿತ
  • ಲಕ್ಷ್ಮಣ, ಲಂಕೆಯು ಸುವರ್ಣಮಯ ರಾಜ್ಯವೇ ಆದರೂ ಅದು ನನ್ನನ್ನು ಆಕರ್ಷಿಸುತ್ತಿಲ್ಲ.
  • (ಏಕೆಂದರೆ) ತಾಯಿ ಮತ್ತು ತಾಯ್ನಾಡು ಸ್ವರ್ಗಕ್ಕಿಂತಲೂ ಕೂಡಾ ಮಿಗಿಲಾದುವು!
  • - ವಾಲ್ಮೀಕಿ ರಾಮಾಯಣ (ರಾಮನು ರಾವಣನನ್ನು ಸಂಹರಿಸಿದ ಬಳಿಕ ಲಕ್ಷ್ಮಣನಿಗೆ ಹೇಳುವ ಮಾತು)

  • ಹೇಗೆ ಹಾಲು, ಮೊಸರುಗಳಿಗಿಂತ ತಡವಾಗಿ ಹುಟ್ಟಿದರೂ ತುಪ್ಪವು ಹಾಲು, ಮೊಸರುಗಳಿಗಿಂತ ಶ್ರೇಷ್ಠ ಎನಿಸಿಕೊಳ್ಳುವುದೋ,
  • ಹಾಗೆಯೇ ಹಿರಿತನವೆನ್ನುವುದು ಉತ್ತಮ ಗುಣಗಳಿಂದಾಗಿ ಲಭ್ಯವಾಗುವುದೇ ಹೊರತು ಕೇವಲ ವಯಸ್ಸಿನಿಂದಲ್ಲ.
  • - ಸಂಸ್ಕೃತ ಸುಭಾಷಿತ
  • ನಮ್ಮಲ್ಲಿ ನಾವು ವಿಶ್ವಾಸ ಕಳೆದುಕೊಳ್ಳದಿರುವುದು ಮತ್ತು ನಮ್ಮನ್ನು ನಾವು ದ್ವೇಷಿಸದಿರುವುದೇ ನಮ್ಮ ಮೊದಲ ಕರ್ತವ್ಯ. ಮೊದಲು ನಮ್ಮ ಬಗ್ಗೆ ನಮಗೆ ನಂಬಿಕೆಯಿದ್ದಲ್ಲಿ ಮಾತ್ರ ಭಗವಂತನಲ್ಲಿ ನಂಬಿಕೆಯಿಡಲು ಸಾಧ್ಯ. ತನ್ನನ್ನೇ ನಂಬದವನು ಭಗವಂತನನ್ನು ಹೇಗೆ ತಾನೇ ನಂಬಲು ಸಾಧ್ಯ?!
  • - ಸ್ವಾಮಿ ವಿವೇಕಾನಂದ
  • ಒಂದು ಆದರ್ಶವನ್ನು, ಗುರಿಯನ್ನು ಕೈಗೆತ್ತಿಕೊಳ್ಳಿ. ಕೇವಲ ಆ ಗುರಿಯ ಬಗ್ಗೆ ಮಾತ್ರ ಯೋಚಿಸಿ, ಚಿಂತಿಸಿ. ನಿಮ್ಮ ಬದುಕನ್ನೇ ಅದಕ್ಕಾಗಿ ಮುಡಿಪಾಗಿಡಿ. ಆ ಗುರಿಯು ನಿಮ್ಮ ಬುದ್ಧಿ, ಮನಸ್ಸು, ಇಂದ್ರಿಯಗಳು, ನರ-ನಾಡಿಗಳನ್ನೆಲ್ಲ ವ್ಯಾಪಿಸಲಿ. ಬೇರೆಲ್ಲ ಆಲೋಚನೆಗಳನ್ನು ಬದಿಗಿಡಿ. ಇದೇ ಯಶಸ್ಸಿನ ಏಕಮಾತ್ರ ಸೂತ್ರ! - ಸ್ವಾಮಿ ವಿವೇಕಾನಂದ                                                                      ಕೃಪೆ : ಮಾ.ಕೃ.ಮಂಜು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು