fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ _____ ಕೂ ವಿಸ್ಮಯ
🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಭಾರತ

ಪರಿವಿಡಿ

 
ಭಾರತ ಗಣರಾಜ್ಯ                                  भारत गणराज्य
Republic of India

ಭಾರತ ದೇಶದ ಧ್ವಜ ಭಾರತ ದೇಶದ ಭಾರತದ ರಾಷ್ಟ್ರೀಯ ಚಿಹ್ನೆ
ಧ್ವಜ ಭಾರತದ ರಾಷ್ಟ್ರೀಯ ಚಿಹ್ನೆ
ಧ್ಯೇಯ: "ಸತ್ಯಮೇವ ಜಯತೇ" (ಸಂಸ್ಕೃತ)
सत्यमेव जयते  (ದೇವನಾಗರಿ)
"ಸತ್ಯವೇ ಜಯಿಸುತ್ತದೆ"
ರಾಷ್ಟ್ರಗೀತೆ: ಜನ ಗಣ ಮನ

Location of ಭಾರತ
ರಾಜಧಾನಿ ನವದೆಹಲಿ
) 28°34′N 77°12′E
ಅತ್ಯಂತ ದೊಡ್ಡ ನಗರ ಮುಂಬೈ
ಅಧಿಕೃತ ಭಾಷೆ(ಗಳು)
ಸರಕಾರ ಸಂಯುಕ್ತ ಗಣತಂತ್ರ
ಸಂಸದೀಯ ಪ್ರಜಾತಂತ್ರ
 - ರಾಷ್ಟ್ರಪತಿ ಪ್ರಣಬ್ ಮುಖರ್ಜಿ
 - ಭಾರತದ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ
 - ಪ್ರಧಾನಮಂತ್ರಿ ನರೇಂದ್ರ ಮೋದಿ
 - ಮುಖ್ಯ ನ್ಯಾಯಾಧೀಶ ಎಸ್ ಎಚ್ ಕಪಾಡಿಯ
ಸ್ವಾತಂತ್ರ ಯುನೈಟೆಡ್ ಕಿಂಗ್‌ಡಂನಿಂದ 
 - ಘೋಷಿತ ೧೫ ಆಗಸ್ಟ್ ೧೯೪೭ 
 - ಗಣರಾಜ್ಯ ೨೬ ಜನವರಿ ೧೯೫೦ 
ವಿಸ್ತೀರ್ಣ
 - ಒಟ್ಟು ವಿಸ್ತೀರ್ಣ 3,287,240 ಚದರ ಕಿಮಿ ;  (೭ನೆಯ)
1,269,210 ಚದರ ಮೈಲಿ 
 - ನೀರು (%) 9.56
ಜನಸಂಖ್ಯೆ
 - ೨೦೦೮ರ ಅಂದಾಜು 1,147,995,904 (೨ನೆಯ)
 - ೨೦೦೧ರ ಜನಗಣತಿ 1,028,610,328
 - ಸಾಂದ್ರತೆ 349 /ಚದರ ಕಿಮಿ ;  (೩೨ನೆಯ)
904 /ಚದರ ಮೈಲಿ 
ರಾಷ್ಟ್ರೀಯ ಉತ್ಪನ್ನ (PPP) ೨೦೦೮ರ ಅಂದಾಜು
 - ಒಟ್ಟು $3.288 ಟ್ರಿಲಿಯನ್ ()
 - ತಲಾ $2,762 (೧೧೮)
ಮಾನವ ಅಭಿವೃದ್ಧಿ
ಸೂಚಿಕ
(2008)
0.609 (132) – ಮಧ್ಯಮ
ಕರೆನ್ಸಿ ಭಾರತದ ರೂಪಾಯಿ ಭಾರತೀಯ ರೂಪಾಯಿ₹ (Rs) (INR)
ಕಾಲಮಾನ IST (UTC+5:30)
 - ಬೇಸಿಗೆ (DST) ಆಚರಣೆಯಲ್ಲಿ ಇಲ್ಲ (UTC+5:30)
ಅಂತರ್ಜಾಲ TLD .in
ದೂರವಾಣಿ ಕೋಡ್ +91

 

ಹೆಸರಿನ ಉಗಮ
ಚರಿತ್ರೆ
  ಭೂಗೋಳ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಆರ್ಥಿಕ ವ್ಯವಸ್ಥೆ
ಜನಸಂಖ್ಯಾ ಅಂಕಿ ಅಂಶಗಳು


ಹೆಸರಿನ ಉಗಮ

ಭಾರತ ಎಂಬ ಹೆಸರು "ಭರತವರ್ಷ" ಎಂಬ ಹೆಸರಿನಿಂದ ಉಗಮಗೊಂಡದ್ದು. ಪುರಾತನ ಪೌರಾಣಿಕ ಆಕರಗಳಿಂದಲೂ ಈ ಹೆಸರು ಭಾರತಕ್ಕೆ ಸೂಚಿತವಾಗಿದೆ. ಋಷಭದೇವನ ಮಗ ಭರತ ಚಕ್ರವರ್ತಿಯಿಂದ ಅಥವಾ ಮಹಾರಾಜ ದುಶ್ಯಂತನ ಪುತ್ರನಾದ ಭರತ ಮಹಾರಾಜನ ಹೆಸರಿನಿಂದ ಬಂದದ್ದು. "ಇಂಡಿಯಾ" ಎಂಬ ಹೆಸರು ಸಿಂಧೂ ನದಿಯ ಇದರ ಪರ್ಷಿಯನ್ ರೂಪಾಂತರ "ಇಂಡಸ್" ಎಂಬುದರಿಂದ ಬಂದದ್ದು. ಭಾರತವನ್ನು ನಿರ್ದೇಶಿಸಲು ಉಪಯೋಗಿಸಲಾಗಿರುವ ಇತರ ಹೆಸರುಗಳಲ್ಲಿ ಒಂದು ಹಿಂದುಸ್ತಾನ.

ಚರಿತ್ರೆ

ಮುಖ್ಯ ಲೇಖನ: ಭಾರತದ ಇತಿಹಾಸ
ಭಾರತದಲ್ಲಿ ಜನವಸತಿಯ ವೊದಲ ಕುರುಹುಗಳೆಂದರೆ ಈಗಿನ ಮಧ್ಯ ಪ್ರದೇಶ ರಾಜ್ಯದ ಬಿಂಭೇಟ್ಕಾದಲ್ಲಿ ದೊರೆತಿರುವ ಶಿಲಾಯುಗದ ಪಳೆಯುಳಿಕೆಗಳು. ಸುಮಾರು ೯೦೦೦ ವರ್ಷಗಳ ಹಿಂದೆ ನಾಗರೀಕತೆಯ ಕುರುಹುಗಳು ಕಂಡು ಬಂದು ಕ್ರಿ.ಪೂ ೨೬೦೦ ರಿಂದ ಕ್ರಿ.ಪೂ. ೧೯೦೦ ರ ವರೆಗೆ ಸಿಂಧೂ ಕಣಿವೆ ನಾಗರೀಕತೆ ಅಸ್ತಿತ್ವದಲ್ಲಿತ್ತು. ನಂತರ ವೇದಗಳನ್ನು ಆಧರಿಸಿ ಹಿಂದೂ ಧರ್ಮ ಬೆಳೆಯಿತು. ಆ ಸಂದರ್ಭದಲ್ಲಿ ಬೌದ್ಧ ಧರ್ಮ ಮತ್ತು ಜೈನ ಧರ್ಮಗಳು ಸಹ ಉಗಮಗೊಂಡವು. ಕ್ರಿ.ಪೂ ೫೦೦ ರ ನಂತರ ಅನೇಕ ಸ್ವತಂತ್ರ ರಾಜ್ಯಗಳು ತಲೆಯೆತ್ತಲಾರಂಭಿಸಿದವು. ಮೌರ್ಯ ಸಾಮ್ರಾಜ್ಯ ಭಾರತವನ್ನು ಸರಿ ಸುಮಾರಾಗಿ ಒಗ್ಗೂಡಿಸಿದ ವೊದಲ ಸಾಮ್ರಾಜ್ಯ. ನಂತರ ಗುಪ್ತ ಸಾಮ್ರಾಜ್ಯ ಭಾರತದ "ಸುವರ್ಣ ಯುಗ"ದಲ್ಲಿ ಆಡಳಿತ ನಡೆಸಿತು. ಈ ಕಾಲದಲ್ಲಿ ಸಾಹಿತ್ಯ, ವಿಜ್ಞಾನ, ತತ್ವಶಾಸ್ತ್ರ ವೊದಲಾದ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಭಾರತ ಸಾಧಿಸಿತು. ಎರಡನೆಯ ಸಹಸ್ರಮಾನದ ಆರಂಭದಲ್ಲಿ ಅನೇಕ ಮುಸ್ಲಿಮ್ ರಾಜರ ದಾಳಿ ಆರಂಭವಾಗಿ ೧೨ ನೆಯ ಶತಮಾನದಿಂದ ಮುಂದಕ್ಕೆ ಉತ್ತರ ಭಾರತದ ಅನೇಕ ಭಾಗಗಳು ಮತ್ತು ದಕ್ಷಿಣ ಭಾರತದ ಕೆಲ ಭಾಗಗಳು ಮುಸ್ಲಿಮ್ ಆಡಳಿತಕ್ಕೆ ಒಳಪಟ್ಟವು. (ಉದಾಹರಣೆಗೆ ದೆಹಲಿ ಸುಲ್ತಾನೇಟ್, ಬಹಮನಿ ಸುಲ್ತಾನರು, ಮೊಘಲ್ ಸಾಮ್ರಾಜ್ಯ). ೧೭ ನೆಯ ಶತಮಾನದಿಂದ ಮುಂದಕ್ಕೆ ಪೋರ್ಚುಗೀಸ್, ಫ್ರೆಂಚ್ ಮತ್ತು ಬ್ರಿಟಿಷ್ ವ್ಯಾಪಾರಿಗಳು ಭಾರತಕ್ಕೆ ಬರಲಾರಂಭಿಸಿದರು. ಹಂಚಿಹೋಗಿದ್ದ ಭಾರತದ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಭಾರತದ ಅನೇಕ ಪ್ರದೇಶಗಳನ್ನು ಇವರು ವಶಪಡಿಸಿಕೊಳ್ಳಲಾರಂಭಿಸಿದರು. ಎಲ್ಲರಿಗಿಂತ ಪ್ರಬಲವಾಗಿ ಬೆಳೆದ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿ ಹೆಚ್ಚು ಕಡಿಮೆ ಸಂಪೂರ್ಣ ಭಾರತದ ಮೇಲೆ ಅಧಿಪತ್ಯ ಸ್ಥಾಪಿಸಿತು. ೧೮೫೭ ರಲ್ಲಿ ಭಾರತದ ಅನೇಕ ರಾಜ್ಯಗಳು ಬ್ರಿಟಿಷರ ವಿರುದ್ಧ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡವು. ಇದರ ನಂತರ ನೇರ ಬ್ರಿಟಿಷ್ ಆಡಳಿತಕ್ಕೆ ಭಾರತ ಸಾಗಿತು. ಸ್ವಲ್ಪ ಕಾಲದಲ್ಲಿಯೇ ಭಾರತ ಸ್ವಾತಂತ್ರ್ಯ ಚಳುವಳಿ ಆರಂಭವಾಗಿ ಆಗಸ್ಟ್ ೧೫, ೧೯೪೭ ರಲ್ಲಿ ಭಾರತ ಸ್ವಾತಂತ್ರ್ಯ ಪಡೆಯಿತು. ಸ್ವಾತಂತ್ರ್ಯಾ ನಂತರ ನೆರೆಯ ದೇಶಗಳೊಂದಿಗೆ ಒಟ್ಟು ನಾಲ್ಕು ಯುದ್ಧಗಳು ನಡೆದಿವೆ. ೧೯೭೪ ರಲ್ಲಿ ಭಾರತ ಅಣುಶಕ್ತಿ ಉತ್ಪಾದನಾ ಸಾಮರ್ಥ್ಯವನ್ನು ಪಡೆಯಿತು. ೧೯೭೫ ರಿಂದ ೭೭ ರ ವರೆಗೆ ಇಂದಿರಾ ಗಾಂಧಿಯವರ ಸರ್ಕಾರದಲ್ಲಿ ತುರ್ತು ಪರಿಸ್ಥಿತಿ ಏರ್ಪಟ್ಟಿತ್ತು. ೯೦ ರ ದಶಕದಿಂದ ಆರ್ಥಿಕ ಉದಾರೀಕರಣ ನೀತಿಯನ್ನು ಭಾರತ ಪಾಲಿಸುತ್ತಾ ಬಂದಿದೆ.

ಭೂಗೋಳ


ಭಾರತದ ಭೌಗೋಳಿಕ ಭಾಗಗಳಲ್ಲಿ ಮುಖ್ಯವಾದವು:
ಭಾರತದಲ್ಲಿ ಹರಿಯುವ ಮುಖ್ಯವಾದ ನದಿಗಳಲ್ಲಿ ಕೆಲವೆಂದರೆ ಸಿಂಧೂ, ಗಂಗಾ, ಬ್ರಹ್ಮಪುತ್ರ, ಯಮುನಾ, ನರ್ಮದಾ, ಗೋದಾವರಿ, ಕೃಷ್ಣಾ, ಕಾವೇರಿ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

ಭಾರತವನ್ನು ಕೆಳಗಿನ ಮುಖ್ಯ ಭಾಗಗಳಾಗಿ ವಿಂಗಡಿಸಲಾಗಿದೆ:
  • ೨೯ ರಾಜ್ಯಗಳು
  • ೬ ಕೇಂದ್ರಾಡಳಿತ ಪ್ರದೇಶಗಳು
  • ರಾಷ್ಟ್ರೀಯ ರಾಜಧಾನಿ: ನವದೆಹಲಿ

ಭಾರತದ ರಾಜ್ಯಗಳು
ರಾಜ್ಯಗಳು
  1. ಆಂಧ್ರ ಪ್ರದೇಶ
  2. ಅರುಣಾಚಲ ಪ್ರದೇಶ
  3. ಅಸ್ಸಾಮ್
  4. ಬಿಹಾರ್
  5. ಚತ್ತೀಸ್‍ಗಢ
  6. ಗೋವ
  7. ಗುಜರಾತ್
  8. ಹರ್ಯಾಣಾ
  9. ಹಿಮಾಚಲ ಪ್ರದೇಶ
  10. ಜಮ್ಮು ಮತ್ತು ಕಾಶ್ಮೀರ
  11. ಜಾರ್ಖಂಡ್
  12. ಕರ್ನಾಟಕ
  13. ಕೇರಳ
  14. ಮಧ್ಯ ಪ್ರದೇಶ
  1. ಮಹಾರಾಷ್ಟ್ರ
  2. ಮಣಿಪುರ
  3. ಮೇಘಾಲಯ
  4. ಮಿಝೋರಾಮ್
  5. ನಾಗಾಲ್ಯಾಂಡ್
  6. ಒರಿಸ್ಸಾ
  7. ಪಂಜಾಬ್
  8. ರಾಜಸ್ಥಾನ
  9. ಸಿಕ್ಕಿಮ್
  10. ತಮಿಳುನಾಡು
  11. ತ್ರಿಪುರ
  12. ಉತ್ತರಾಂಚಲ
  13. ಉತ್ತರ ಪ್ರದೇಶ
  14. ಪಶ್ಚಿಮ ಬಂಗಾಳ
  15. ತೆಲಂಗಾಣ

ಕೇಂದ್ರಾಡಳಿತ ಪ್ರದೇಶಗಳು:

ಆರ್ಥಿಕ ವ್ಯವಸ್ಥೆ

ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ವ್ಯವಸ್ಥೆಯನ್ನು ಭಾರತ ಹೊಂದಿದ್ದು,[೯] ಒಟ್ಟು ರಾಷ್ಟ್ರೀಯ ಉತ್ಪಾದನೆಯ ದೃಷ್ಟಿಯಿಂದ ಪ್ರಪಂಚದಲ್ಲಿ ಹನ್ನೆರಡನೆಯ ಸ್ಥಾನವನ್ನು ಹೊಂದಿದೆ. ಕೊಳ್ಳುವ ಶಕ್ತಿಯ ಮೇರೆಗೆ ನಾಲ್ಕನೆಯ ಸ್ಥಾನವನ್ನು ಹೊಂದಿದೆ. ಆದರೆ ಭಾರತದ ಜನಸಂಖ್ಯೆಯನ್ನು ಗಮನಿಸಿ ಸರಾಸರಿ ಒಬ್ಬ ವ್ಯಕ್ತಿಯ ಆದಾಯ ಸುಮಾರು ವರ್ಷಕ್ಕೆ ೧೧,೦೦೦ ರೂಪಾಯಿಗಳಷ್ಟು. ಮಾಹಿತಿ ತಂತ್ರಜ್ಞಾನ ಸಂಸ್ಥೆಗಳು ಬೆಳೆದ ನಂತರ ಭಾರತೀಯ ಮಧ್ಯಮ ವರ್ಗ ಹೆಚ್ಚುತ್ತಾ ಬಂದಿದೆ. ಭಾರತದ ಮುಖ್ಯ ವೃತ್ತಿಗಳಲ್ಲಿ ಕೆಲವೆಂದರೆ ಕೃಷಿ, ಬಟ್ಟೆಗಳ ತಯಾರಿಕೆ, ಪೆಟ್ರೋಲಿಯಮ್ ಉತ್ಪನ್ನಗಳು, ಮಾಹಿತಿ ತಂತ್ರಜ್ಞಾನ, ಚಲನ ಚಿತ್ರಗಳು ಹಾಗೂ ಕುಶಲ ಕೈಗಾರಿಕೆ. ವಾರ್ಷಿಕವಾಗಿ ಸುಮಾರು ೨೦ ಲಕ್ಷ ಅಂತರರಾಷ್ಟ್ರೀಯ ಪ್ರವಾಸಿಗಳು ಭಾರತಕ್ಕೆ ಬರುತ್ತಾರೆ. ಭಾರತದೊಂದಿಗೆ ಹೆಚ್ಚಾಗಿ ಅಂತಾರಾಷ್ಟ್ರೀಯ ವ್ಯಾಪಾರ ನಡೆಸುವ ದೇಶ-ಸಂಸ್ಥೆಗಳೆಂದರೆ ಅಮೆರಿಕದ ಸಂಯುಕ್ತ ಸಂಸ್ಥಾನ, ರಷ್ಯಾ, ಯುರೋಪಿಯನ್ ಒಕ್ಕೂಟ, ಚೀನಾ ಮತ್ತು ಜಪಾನ್.

ಜನಸಂಖ್ಯಾ ಅಂಕಿ ಅಂಶಗಳು

ಭಾರತ ಪ್ರಪಂಚದಲ್ಲಿ ಎರಡನೆ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಭಾರತೀಯ ಸಮಾಜದಲ್ಲಿ ಭಾಷೆ, ಧರ್ಮ, ಜಾತಿ ವೊದಲಾದ ಅನೇಕ ಅಂಶಗಳು ವಿವಿಧ ಪಾತ್ರಗಳನ್ನು ವಹಿಸುತ್ತವೆ. ಭಾರತದ ನಾಲ್ಕು ಅತಿ ದೊಡ್ಡ ನಗರಗಳೆಂದರೆ ಮುಂಬೈ, ದೆಹಲಿ, ಕೋಲ್ಕಟಾ (ಕಲ್ಕತ್ತೆ) ಮತ್ತು ಚೆನ್ನೈ. ಭಾರತದ ಸಾಕ್ಷರತಾ ಪ್ರಮಾಣ ಶೇ. ೬೪.೮. ಧರ್ಮದ ದೃಷ್ಟಿಯಿಂದ, ಜನಸಂಖ್ಯೆಯ ವಿಂಗಡಣೆ ಹೀಗಿದೆ: ಹಿಂದೂ (೮೦.೫ %), ಮುಸ್ಲಿಮ್ (೧೩.೪ %), ಕ್ರೈಸ್ತ (೨.೩೩ %), ಸಿಖ್ (೧.೮೪ %), ಬೌದ್ಧ (೦.೭೬ %), ಜೈನ (೦.೪ %). ಭಾರತದಲ್ಲಿರುವ ಇತರ ಧಾರ್ಮಿಕ ವರ್ಗಗಳಲ್ಲಿ ಕೆಲವೆಂದರೆ ಯಹೂದಿ, ಪಾರ್ಸಿ, ಅಹ್ಮದಿ ಮತ್ತು ಬಹಾ-ಈ. ಭಾರತದಲ್ಲಿರುವ ಎರಡು ಮುಖ್ಯ ಭಾಷಾ ಬಳಗಗಳೆಂದರೆ ಉತ್ತರ ಭಾರತದ ಇಂಡೋ-ಆರ್ಯನ್ ಭಾಷಾ ಬಳಗ ಮತ್ತು ದಕ್ಷಿಣ ಭಾರತದ ದ್ರಾವಿಡ ಭಾಷಾ ಬಳಗ. ಭಾರತ ೨೨ ಅಧಿಕೃತ ಭಾಷೆಗಳನ್ನು ಹೊಂದಿದೆ.

ಪುಟ - 2   ಪುಟ - 3
 
 ಕೃಪೆ : ವಿಕಿಪೀಡಿಯ

1 ಕಾಮೆಂಟ್‌:

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.