fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶನಿವಾರ, ಮಾರ್ಚ್ 01, 2014

ವಿಶ್ವಗುರು ಬಸವಣ್ಣ

ಬಸವೇಶ್ವರ
ಗುರು ಬಸವಣ್ಣ
ಜನನ೧೧೩೪ CE
ಬಿಜಾಪುರ ಜಿಲ್ಲೆಕರ್ನಾಟಕಭಾರತ
ಮರಣ೧೧೯೬ CE
ಕೂಡಲಸಂಗಮಕರ್ನಾಟಕಭಾರತ
ತತ್ವಶಾಸ್ತ್ರಲಿಂಗಾಯತ ಧರ್ಮಮಾನವತ್ವ
ಸಾಹಿತ್ಯದ ಕೆಲಸಗಳುವಚನಗಳು
ನುಡಿಕಾಯಕವೇ ಕೈಲಾಸ
ಯೋಗಿ
ಶ್ರೀ ಬಸವೇಶ್ವರ (ಶ್ರೀ ಬಸವ ಅಥವಾ ಬಸವಣ್ಣನವರು) ಲಿಂಗಾಯತ ಧರ್ಮದ ಸ್ಥಾಪಕರು. ಬಸವಣ್ಣನವರು ೧೨ ನೆಯ ಶತಮಾನದ ಭಕ್ತಿ ಪಂಥದ ಪ್ರಮುಖರಲ್ಲಿ ಒಬ್ಬರು. ಬಸವಣ್ಣನವರು ಮತ್ತು ಶಿವಶರಣರಾದ ಅಲ್ಲಮಪ್ರಭುಅಕ್ಕಮಹಾದೇವಿಚೆನ್ನಬಸವಣ್ಣ ವೊದಲಾದ ನೂರಾರು ಶರಣರು ವಚನಗಳ ಮೂಲಕ ಭಕ್ತಿಪಥ ಮತ್ತು ಜೀವನದ ಬಗ್ಗೆ ಹೊಸ ದೃಷ್ಟಿ ಬೀರಿದರು.
ಬಸವಣ್ಣನವರು ೧೧೩೪ ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾನೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ.
ವಿಶ್ವಗುರು ಬಸವಣ್ಣನವರು ಪರಮಾತ್ಮನ ಕರುಣೆಯ ಕಂದರಾಗಿ ಅವತರಿಸಿ, ಲೋಕಕ್ಕೆ ಹೊಸ ಧರ್ಮವೊಂದನ್ನು ಕೊಟ್ಟರು. ಇಂಗಳೇಶ್ವರ ಬಾಗೇ ವಾಡಿಯಲ್ಲಿ ಶೈವ ಬ್ರಾಹ್ಮಣ ದಂಪತಿಗಳಾದ ಮಾದರಸ-ಮಾದಲಾಂಬಿಕೆಯರ ಮಗನಾಗಿ ಆನಂದನಾಮ ಸಂವತ್ಸರದಲ್ಲಿ ವೈಶಾಖಮಾಸದ ಅಕ್ಷಯ ತೃತೀಯದಂದು (ದಿ. ಎಪ್ರಿಲ್ ೩೦ ೧೧೩೪) ರೋಹಿಣಿ ನಕ್ಷತ್ರದಲ್ಲಿ ಜನಿಸಿ ಯಾವುದೇ ಅಂಧಶ್ರದ್ಧೆ ಜಡ ಸಂಪ್ರದಾಯಗಳನ್ನೊಪ್ಪದ ಸತ್ಯಾನ್ವೇಷಕರಾಗಿ ಹೆತ್ತವರನ್ನು, ಬಂಧು ಬಾಂಧವರನ್ನು ತೊರೆದು ವಿದ್ಯಾಕಾಂಕ್ಷಿಯಾಗಿ ಕೂಡಲ ಸಂಗಮದ ಗುರುಕುಲಕ್ಕೆ ಬಂದರು. ಶಾಸ್ತ್ರಾಧ್ಯಯನ, ಯೋಗಾಭ್ಯಾಸಗಳಲ್ಲಿ ಬಾಲ್ಯವನ್ನು ಕಳೆದು ತಾರುಣ್ಯಕ್ಕೆ ಕಾಲಿರಿಸಿದರು. ಜನರಲ್ಲಿ ಮನೆ ಮಾಡಿಕೊಂಡಿದ್ದ ಮೌಢ್ಯತೆ, ಕಂದಾಚಾರ, ಜಾತೀಯತೆಗಳನ್ನು ಕಂಡು ಮನನೊಂದು ಪರಿಹಾರವನ್ನು ಅರಸತೊಡಗಿದರು. ಒಂದು ದಿನ (ದಿ. ೧೪ನೇ ಜನವರಿ ೧೧೫೫) ಪರಮಾತ್ಮನ ದಿವ್ಯ ದರ್ಶನವಾಯಿತು; ಅನುಗ್ರಹಿತರಾದರು. ಬ್ರಹ್ಮ-ವಿಷ್ಣು-ಮಹೇಶ್ವರರೆಂಬ ತ್ರಿಮೂರ್ತಿಗಳನ್ನು ಮೀರಿದ ಸೃಷ್ಟಿಕರ್ತನೇ ಶ್ರೇಷ್ಠವೆಂದು ಘೋಷಿಸಿ ಆ ದೇವನನ್ನು ಲಿಂಗದೇವ ಎಂದು ಕರೆದರು. ನಿರಾಕಾರ ದೇವನಿಗೆ ಮನುಷ್ಯರ, ಪ್ರಾಣಿಗಳ ಆಕಾರ ಕೊಡುವುದು ಸರಿಯಲ್ಲ ಎಂಬ ಭಾವ ತಳೆದು, ದೇವನ ಸಾಕಾರ ಕೃತಿಯೇ ಬ್ರಹ್ಮಾಂಡ, ಇದು ಗೋಲಾಕಾರದಲ್ಲಿದೆ. ಆದ್ದರಿಂದ ಲಿಂಗದೇವನನ್ನು ವಿಶ್ವದಾಕಾರದಲ್ಲಿ ಪೂಜಿಸುವುದು ಸರಿ ಎಂದು ಇಷ್ಟಲಿಂಗದ ಪರಿಕಲ್ಪನೆ ಕೊಟ್ಟರು. ದೇವರ ಕುರುಹಾದ ಇಷ್ಟಲಿಂಗವು ಮಾನವನ ಜಾತಿ, ವರ್ಣ, ವರ್ಗ ಭೇದಗಳನ್ನು ಕಳೆದು ಶರಣನನ್ನಾಗಿ ಮಾಡುವ ಸಾಧನವಾಗಬೇಕೆಂದು ಅದನ್ನು ಗಣ ಲಾಂಛನವನ್ನಾಗಿ ಮಾಡಿದರು. ಪರಮಾತ್ಮನ ದಿವ್ಯಾನುಭವ ಪಡೆದು, ನವ ಸಮಾಜ ನಿರ್ಮಾಣದ ರೂಪುರೇಷೆಗಳನ್ನು ತಮ್ಮ ಮನದಲ್ಲಿ ಹೊಂದಿ ಕಲ್ಯಾಣದ ಕಾರ್ಯಕ್ಷೇತ್ರವನ್ನು ಪ್ರವೇಶಿಸಿದರು. ಸೋದರ ಮಾವನ ಮಗಳು ನೀಲಾ೦ಬಿಕೆಯನ್ನು ವಿವಾಹವಾಗಿ ಕರಣಿಕ ಕಾಯಕ ಕೈಗೊಂಡರು. ಅಲ್ಲಿಂದ ಮುಂದೆ ಭಂಡಾರಿಯಾಗಿ, ಪ್ರಧಾನಿ(ದಂಡನಾಯಕ)ಯಾಗಿ ಕಾಯಕ ನಿರ್ವಹಿಸಿದರು. ಅನುಭವ ಮಂಟಪ ಸ್ಥಾಪಿಸಿ ಧರ್ಮ ಪ್ರಚಾರ ಮಾಡಿದರು. ಎಲ್ಲರ ಮನೆ, ಮನಗಳ ಬಾಗಿಲಿಗೂ ಧರ್ಮಗಂಗೆ ಹರಿಯುವಂತೆ ಮಾಡಿದರು. ಇಷ್ಟಲಿಂಗವೆಂಬ ಗಣಲಾಂಛನವನ್ನು ಧರಿಸಿ ಲಿಂಗಾಯತರಾದ ಎಲ್ಲ ಶರಣ ಬಂಧುಗಳನ್ನು ಸಮಾನ ಭಾವದಿಂದ ಕಂಡರು. ಹುಟ್ಟಿನಿಂದ ಬ್ರಾಹ್ಮಣರಾಗಿ, ಸಂಸ್ಕಾರದಿಂದ ಶರಣರಾದ ಮಧುವರಸರ ಮಗಳನ್ನು ಹುಟ್ಟಿನಿಂದ ಸಮಗಾರರಾಗಿ ಸಂಸ್ಕಾರದಿಂದ ಶರಣರಾದ ಹರಳಯ್ಯನವರ ಮಗನಿಗೆ ಕೊಟ್ಟು ವಿವಾಹ ಮಾಡಲು ಪ್ರೇರಣೆ ನೀಡಿದರು. ಈ ವಿವಾಹದಿಂದ ಸಂಪ್ರದಾಯವಾದಿಗಳು ಸಿಡಿದೆದ್ದು ಬಿಜ್ಜಳ ಮಹಾರಾಜನನ್ನು ಬಸವಣ್ಣನವರ ವಿರುದ್ದ ಪ್ರೇರೇಪಿಸಿ ಧರ್ಮಗುರು ಬಸವಣ್ಣನವರಿಗೆ ಗಡಿಪಾರು ಶಿಕ್ಷೆ ನೀಡುವಂತೆ ಮಾಡಿದರು. ಧರ್ಮಪಿತರು ಗಡಿಪಾರು ಶಿಕ್ಷೆ ಸ್ವೀಕರಿಸಿ ಕಲ್ಯಾಣದಿಂದ ಹೊರಟ ನಂತರ ಹರಳಯ್ಯ, ಮಧುವರಸ, ಶೀಲವಂತರ ಬಂಧನವಾಗಿ ಅವರು ವರ್ಣಾಂತರ ವಿವಾಹದಲ್ಲಿ ಭಾಗಿಯಾದುದ ಕ್ಕಾಗಿ ಕಣ್ಣು ಕೀಳಿಸುವ ಶಿಕ್ಷೆ, ಎಳೆ ಹೊಟ್ಟೆ ಶಿಕ್ಷೆಗೆ ಒಳಗಾಗಿ ಪ್ರಾಣ ಬಿಡಬೇಕಾಯಿತು. ಜಾತಿವಾದಿಗಳು ವಚನ ಸಾಹಿತ್ಯವನ್ನು ನಾಶಮಾಡಲು ಸನ್ನದ್ಧರಾದಾಗ ವೀರಮಾತೆ ಅಕ್ಕನಾಗಲಾಂಬಿಕೆ , ಚಿನ್ಮಯಜ್ಞಾನಿ ಚೆನ್ನಬಸವಣ್ಣ, ವೀರ ಗಣಾಚಾರಿ ಮಡಿವಾಳ ಮಾಚಯ್ಯನವರು ವೀರಾಗ್ರಣಿಗಳಾಗಿ ಕಾದಾಡಿ ವಚನ ವಾಙ್ಮಯ ನಿಧಿಯನ್ನು ಉಳಿಸಿಕೊಟ್ಟರು. ಅದಿಂದು ನಮ್ಮೆಲ್ಲರ, ಕರ್ನಾಟಕದ, ಭಾರತದ, ವಿಶ್ವದ ಹೆಮ್ಮೆಯ ಆಸ್ತಿಯಾಗಿದೆ. ಇಂತಹ ಮಹಾನ್ ನೇತಾರರಾದ ಬಸವಣ್ಣನವರು ಲಿಂಗಾಯತ ಧರ್ಮದ ಸಂಸ್ಥಾಪಕರು; ಧರ್ಮಪಿತರು, ಮಂತ್ರಪುರುಷರು. ೬೨ ವರ್ಷ ೩ ತಿಂಗಳು ೨ ದಿವಸಗಳ ಕಾಲ ಇಳೆಯಲ್ಲಿ ಬಾಳಿದ ಬಸವಣ್ಣನವರು ನಳನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು (ದಿ. ಜುಲೈ ೭ ೧೧೯೬) ಉರಿಯುಂಡ ಕರ್ಪುರದಂತೆ ಲಿಂಗೈಕ್ಯರಾದರು.
ಮಂಗಳವೇಡದ ರಾಜ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾದ ಬಸವಣ್ಣ ಹಲವಾರು ಜನಪರ ಮತ್ತು ಸಮಾಜ ಸುಧಾರಣೆ ಕ್ರಮಗಳನ್ನು ಕೈಗೊಂಡರು. ಕಾಯಕವೇ ಕೈಲಾಸ ವೆಂದು ಸಾರಿ, ಜನರನ್ನು ದುಡಿದು ಬದುಕುವ ಪಥದಲ್ಲಿ ಮುನ್ನೆಡೆಸಿದರು. ಜಾತಿ, ಲಿಂಗ, ಭಾಷೆ ಭೇದವಿಲ್ಲದೆ, ಶರಣ ತತ್ವದಲ್ಲಿ, ಸಮಾನತೆಯಲ್ಲಿ ಮತ್ತು ಕಾಯಕ ನಿಷ್ಠೆಯಲ್ಲಿ ನಂಬಿಕೆಯುಳ್ಳವರನ್ನು ನಿಜವಾದ " ಶಿವಶರಣ " ರೆಂದು ಕರೆದರು.
" ಇವನಾರವ, ಇವನಾರವ ಎಂದೆನ್ನದಿರಯ್ಯ ಇವ ನಮ್ಮವ, ಇವ ನಮ್ಮವ ಎಂದೆನ್ನಿರಯ್ಯ"
ಎಂದು, ಸಮಾಜದ ಎಲ್ಲ ವರ್ಗದ ಜನರನ್ನು ಒಂದುಗೂಡಿಸಿದ ಬಸವಣ್ಣ, ಜಾತೀಯತೆಯ ವಿರುದ್ಧ ಸಮರ ಸಾರಿದರು.
"ಹೊಲೆಯನೆಂಬುವವನು ಊರ ಹೊರಗಿಹನೇ? ಊರ ಒಳಗಿಲ್ಲವೆ? ಎಂದು ಪ್ರಶ್ನಿಸಿ,
ಅಸ್ಪ್ರಶ್ಯತೆಯ ಹೆಸರಿನಲ್ಲಿ ಊರ ಹೊರಗೆ ಇರಿಸಲಾದ ದಲಿತರನ್ನು ಕರೆತಂದು ಸಮಾಜದ ಭಾಗವನ್ನಾಗಿ ಮಾಡಿದರು. ದೇವಾಲಯ, ಕುಡಿಯುವ ನೀರಿನ ಭಾವಿ-ಕೆರೆಗಳನ್ನು ಬಳಸಲು ಇವರಿಗೂ ಸಮಾನ ಹಕ್ಕಿದೆಯಂದು ತೋರಿಸಿದರು.
" ಉಳ್ಳವರು ಶಿವಾಲಯ ಮಾಡುವವರು ನಾನೇನು ಮಾಡಲಿ ಬಡವನಯ್ಯ ಎನ್ನ ಕಾಲೇ ಕಂಭ, ದೇಹವೇ ದೇಗುಲ ಶಿರವೇ ಹೊನ್ನ ಕಲಶವಯ್ಯ ಕೂಡಲ ಸಂಗಮ ದೇವ ಕೇಳಯ್ಯ ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ" ಎಂದ ಬಸವಣ್ಣ ಪುರೋಹಿತಶಾಹಿ ವ್ಯವಸ್ಥೆ ಮತ್ತು ಧರ್ಮದ ಹೆಸರಿನಲ್ಲಿ ಜನಸಾಮಾನ್ಯರ ಶೋಷಣೆಯನ್ನು ಖಂಡಿಸಿದ್ದಾರೆ.
ಬಸವ ಕಲ್ಯಾಣದಲ್ಲಿ ಬಸವಣ್ಣನವರು ಶರಣರ ಜೊತೆ ಸೇರಿ ಅನುಭವ ಮಂಟಪ ಸ್ಥಾಪಿಸಿದರು. ಅನುಭವ ಮಂಟಪವು ವಿಶ್ವ ಮಾನವ ಸಂದೇಶ ಮತ್ತು ವಿಚಾರಗಳ ಬಗೆಗೆ ಮುಕ್ತವಾಗಿ ಚರ್ಚಿಸಬಹುದಾದ ವೇದಿಕೆಯಾಗಿದ್ದು, ಭಾರತದಾದ್ಯಂತ ಅನೇಕೆ ಕಡೆಗಳಿಂದ ಜನರನ್ನು ಸೆಳೆಯಿತು. ಇದೇ ಸಮಯದಲ್ಲೇ ಕನ್ನಡ ಭಾಷೆಯಲ್ಲಿ ಜನಸಾಮಾನ್ಯರಿಗಾಗಿ ವಚನಗಳ ರಚನೆ ಆರಂಭವಾಯಿತು. ಸಾಮಾಜ ಸುಧಾರಣೆ ಮತ್ತು ಧಾರ್ಮಿಕ ವಿಷಯಗಳ ಬಗೆಗೆ ಸುಂದರ ಮತ್ತು ಸರಳ ಬೋಧನೆಗಳುಳ್ಳ ಸಣ್ಣ ಪದ್ಯಗಳಿಗೆ ವಚನಗಳೆಂದು ಹೆಸರು. ಉದಾಹರಣೆಗೆ:
"ದಯವಿಲ್ಲದ ಧರ್ಮ ಯಾವುದಯ್ಯ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿ ದಯವೇ ಧರ್ಮದ ಮೂಲವಯ್ಯ.."
ಮಹಿಳಾ ಶಿಕ್ಷಣಕ್ಕೆ ನಾಂದಿಯಾದರು. ಹಲವಾರು ಶರಣೆಯರು, ಕನ್ನಡದಲ್ಲಿ ವಚನಗಳನ್ನು ರಚಿಸಿ ಪ್ರಸಿದ್ಧರಾಗಿದ್ದಾರೆ.
ಆದರೆ ಬಿಜ್ಜಳನ ಆಸ್ಥಾನದ ಸಂಪ್ರದಾಯವಾದಿಗಳು ಬಸವಣ್ಣನವರ ಬಗ್ಗೆ ದೂರಿಟ್ಟಾಗ, ಮಂತ್ರಿ ಸ್ಥಾನವನ್ನು ಬಸವಣ್ಣನವರು ತ್ಯಜಿಸಿದರು. ಆನಂತರ ಶರಣರಾದ ಮಧುವರಸನ ಮಗಳು ಲಾವಣ್ಯ ಮತ್ತು ಹರಳಯ್ಯನ ಮಗ ಶೀಲವಂತನ ಮದುವೆಯನ್ನು ವಿರೋಧಿಸಿದ ಬಿಜ್ಜಳನು, " ಮಿತಾಕ್ಷರ" ವೆಂಬ ಪೊಳ್ಳು ಗ್ರಂಥದ ಆಧಾರದ ಮೇಲೆ, ವಿಲೋಮ ವಿವಾಹ ನಡೆದಿದೆಯಂದು ನಿರ್ಣಯಿಸಿ, ಬಸವಣ್ಣನವರನ್ನು ಗಡಿಪಾರು ಶಿಕ್ಷೆ ವಿಧಿಸಿದನು. ಮಧುವರಸ, ಹರಳಯ್ಯ ದಂಪತಿಗಳನ್ನು ಮತ್ತು ನವ ವಧುವರಾರಾದ ಶೀಲವಂತ-ಲಾವಣ್ಯರನ್ನು ಆನೆಯ ಕಾಲಿಗೆ ಕಟ್ಟಿಸಿ, ಊರ ತುಂಬಾ ನೆಲದ ಮೇಲೆ ಎಳೆಸಿ ಕೊಲ್ಲುವ ಕ್ರೂರವಾದ ಎಳೆಹೂಟೆ ಶಿಕ್ಷೆಗೆ ಗುರಿಪಡಿಸಿ, ಕೊಲ್ಲುತ್ತಾನೆ. ಬಿಜ್ಜಳನ ಸೇನೆ ಶಿವಶರಣರನ್ನು ಕಂಡಲ್ಲಿ ಕೊಲ್ಲ ತೊಡಗಿ, ರಕ್ತದ ಹೊಳೆ ಹರಿಸುತ್ತದೆ.
ಬಸವಣ್ಣನವರು ೧೧೯೬ ರಲ್ಲಿ ಕೂಡಲಸಂಗಮಕ್ಕೆ ಮರಳಿ ಅಲ್ಲೇ ಲಿಂಗೈಕ್ಯರಾದರು. ಅವರ ಸಮಾಧಿಯು ಅಲ್ಲಿಯೇ ಇದೆ. ಅವರ ಸಮಾಧಿಯನ್ನು ಕರ್ನಾಟಕ ಸರಕಾರದಿಂದ ಬಸವ ಸಾಗರ ಹಿನ್ನಿರಿನಲ್ಲಿ ಮುಳಗದಂತೆ ರಕ್ಷಿಸಿಲ್ಪಟ್ಟಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು