fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಸೋಮವಾರ, ಏಪ್ರಿಲ್ 14, 2014

ಬೇಸಿಗೆಯ ಪಾನೀಯಗಳು

ಬೇಸಿಗೆಯ ಆರೋಗ್ಯಕರ ಪಾನೀಯಗಳು 

1. ಸಿಹಿ ಲಸ್ಸಿ:
ಸಿಹಿ ಮೊಸರಿಗೆ ಕಲ್ಲುಸಕ್ಕರೆ ಬೆರೆಸಿ ಮಿಕ್ಸರ್ ನಲ್ಲಿ ತಿರುವಿ ಲಸ್ಸಿ ತಯಾರಿಸಬೇಕು.

2. ಕಬ್ಬಿನ ಹಾಲು :
ಇದಕ್ಕೆ ನಿಂಬೆರಸ ಬೆರೆಸಿ ಸೇವಿಸಬೇಕು. ಇದು ಬೇಸಿಗೆಯಲ್ಲಿ ಮಾತ್ರ. ಬೇರೆ ಕಾಲಗಳಲ್ಲಿ
ಬರೀ ಕಬ್ಬಿನ ರಸ ಸೇವಿಸಬೇಕು. ಅದಕ್ಕೆ ಸಕ್ಕರೆ, ಬೆಲ್ಲ, ಜೇನುತುಪ್ಪ ಇತ್ಯಾದಿಗಳನ್ನು ಬೆರೆಸಬಾರಾದು.

3. ಕಲ್ಲಂಗಡಿ ಜ್ಯೂಸ್:
ಕಲ್ಲಂಗಡಿ ಹಣ್ಣಿನ ತಿರುಳಿಗೆ ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಕಾಳುಮೆಣಸಿನಪುಡಿ ಬೆರೆಸಿ ಮಿಕ್ಸಿ ಯಲ್ಲಿ ತಿರುವಬೇಕು.

4. ರಾಗಿ ಪಾನೀಯ:
ಮೊಳಕೆ ಬರಿಸಿದ ರಾಗಿ ರುಬ್ಬಿ ಸೋಸಿ, ಅದಕ್ಕೆ ಬೆಲ್ಲ ಹಾಕಿ ತಣ್ಣಗೆ ಅಥವಾ ಬಿಸಿ ಮಾಡಿ ಸೇವಿಸಬಹುದು.

5. ಟೊಮೇಟೋ ಪಾನೀಯ:
ಮೂರು ಟೋಮೇಟೋಗಳನ್ನು ಹೆಚ್ಚಿ ರುಬ್ಬಿ, ಅದಕ್ಕೆ ಕಿತ್ತಳೆ, ನಿಂಬೆ ಅಥವಾ ಮೋಸಂಬಿ ರಸ ಬೆರೆಸಿ.

6. ಹೆಸರಿನ ಪೇಯ:
ಹೆಸರು ಕಾಳನ್ನು ಹುರಿದು ಪುಡಿ ಮಾಡಿ, ನೀರು ಹಾಗೂ ಬೆಲ್ಲ ಸೇರಿಸಿ ಸೇವಿಸಿ.

7. ಕಿತ್ತಳೆ ಲಸ್ಸಿ:
ಸಿಹಿ ಮೊಸರು ೧ ಕಪ್, ಕಿತ್ತಳೆ ರಸ ೧ ಕಪ್, ಸ್ವಲ್ಪ ಸಕ್ಕರೆ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ ಕುಡಿಯಿರಿ.

8. ರಸಾಯನ:
ಸಿಹಿ ಮಾವಿನಹಣ್ಣನ್ನು ಕತ್ತರಿಸಿ ಸಕ್ಕರೆ ಜೊತೆ ಬೆರೆಸಿ ಮಿಕ್ಸರ್ ನಲ್ಲಿ ರುಬ್ಬಿ ನೀರಿನ ಬದಲು ಹಾಲು ಬೆರೆಸಿದರೆ ಮಾವಿನ ರಸಾಯನ ಅಥವಾ ಮಿಲ್ಕ್ ಶೇಕ್ ಸಿದ್ಧ. ಮಾವಿನ ಹಣ್ಣಿನ ಬದಲು ಬಾಳೆಹಣ್ಣಿನಿಂದಲೂ ತಯಾರಿಸಬಹುದು.

9. ಎಳ್ಳಿನ ನೀರು:
ಬಿಳಿ ಎಳ್ಳನ್ನು ಹುರಿದು ಪುಡಿ ಮಾಡಿ ಅದಕ್ಕೆ ನೀರು, ಬೆಲ್ಲ, ಚಿಟಿಕೆ ಏಲಕ್ಕಿ ಪುಡಿ ಬೆರೆಸಬೇಕು.

ಈ ಮೇಲಿನ ಪಾನೀಯಗಳು ದೇಹವನ್ನು ತಂಪಾಗಿಡುತ್ತವೆ. ಬಾಯಾರಿಕೆ,
ಸುಸ್ತು ನೀಗಿಸುತ್ತದೆ. ಅಗತ್ಯ ಪೋಷಕಾಂಶಗಳು, ನೀರಿನ ಅಂಶವನ್ನು ದೇಹಕ್ಕೆ ಪೂರೈಸುತ್ತದೆ.
                                                                                                                            =>

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು