ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ.
ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಉಪಾಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ.
ಈ ದಿನಕ್ಕೆ ಮತ್ತೊಂದು ವಿಶೇಷವಿದೆ.. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ 'ರಕ್ಷಾಬಂಧನ' ಅಥವಾ 'ರಾಖಿ' ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಾರೆ.ಆದರೆ ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನನ್ನ ಮನದಲ್ಲಿ ಮೂಡಿಸುತ್ತದೆ.ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ.ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ.
ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.