ಭಾನುವಾರ, ಮೇ 10, 2015

ನುಡಿಮುತ್ತು 22

ಇವತ್ತಿನ ಹಾರೈಕೆ, ನಾಳಿನ ಪೂರೈಕೆ, ಇಂದಿನ ಕನಸು, ನಾಳೆಯ ನನಸು
ಕುವೆಂಪು

ನಮಗಾದ ಆಘಾತಗಳನ್ನು ಮತ್ತು ಗಾಯಗಳನ್ನು ತಿರಸ್ಕರಿಸಿದರೆ, ಅವು ತಾವಾಗಿಯೇ ಮಾಯವಾಗುತ್ತವೆ.
ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ.

ನೀವು ಹಣಕ್ಕಾಗಿ ಕೆಲಸಮಾಡುವುದಿಲ್ಲ ಎಂಬ ಗುರಿಯನ್ನು ಖಂಡಿತಾ ಮುಟ್ಟಬಹುದು.
ವಾಲ್ಟ್ ಡಿಸ್ನಿ

ನನ್ನ ಮನಸ್ಸಿನ ಅನುಭವಗಳಿಂದ ನಾನು ಬರೆಯುತ್ತೇನೆ, ಅದರೆ ಅನುಭವಗಳ ಬಗ್ಗೆ ಬರೆಯುವುದಿಲ್ಲ, ಅನುಭವಗಳಿಂದಾಗಿ ಬರೆಯುತ್ತೇನೆ. 
ಜಾನ್ ಅಶ್‌ಬೆರಿ

ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.
ಮನುಸ್ಮೃತಿ

ಮನಸೇ ಮನಸ್ಸಿನ ಮನಸ ನಿಲ್ಲಿಸುವುದು ಮನಸಿನ ಮನ ತಿಳಿಯುವ ಮನ ಬ್ಯಾರೆಲೋ ಮನಸೆ
ಶಿಶುನಾಳ ಷರೀಫ್

ಬಾಗಿಲನ್ನು ತಟ್ಟದ ಎಷ್ಟೋ ಜನ ತಮ್ಮ ಅವಕಾಶಗಳನ್ನು ಕಳೆದುಕೊಂಡಿದ್ದಾರೆ.
- ಬಲ್ಗೇರಿಯ ಗಾದೆ

ಹೆಂಡತಿ ಒಂದು ಕನ್ನಡಿ ಇದ್ದಂತೆ ,ಅದರಲ್ಲಿ ಕಾಣುವ ಪ್ರತಿಬಿಂಬವೇ ಪತಿ.
ತ್ರಿವೇಣಿ

ಮ೦ಗಳವೆ೦ಬೆನು ಜಗಕಿದಕೆಲ್ಲಕುಹಿ೦ಗಲಿ ಭವ ತಾಪ೦ ದೋಷ೦ತ೦ಗಲಿ ಮನ ಶಮದೊಳು ನಿರ್ವೈರ್ಯ೦ಅ೦ಗವಿಸಲಿ ಸದ್ರಸತೋಷ೦.
ಪು ತಿ


ಮನುಷ್ಯನ ಉತ್ತಮ ಅಭ್ಯಾಸವೆಂದರೆ ತಮ್ಮ ಅತ್ಮಸಾಕ್ಷಿಯೊಡನೆ ಪ್ರಾಮಾಣಿಕತೆ.
ಸಿಗ್ಮಂಡ್ ಫ್ರಾಯ್ಡ್

ಕಾಮೆಂಟ್‌ಗಳಿಲ್ಲ: