ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಶುಕ್ರವಾರ, ಜುಲೈ 10, 2015

ನುಡಿಮುತ್ತು 24

ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.
— ಮಹಾತ್ಮ ಗಾಂಧಿ

ಮೊದಲು ಕನಸಿರಬೇಕು, ಅದೊಂದಿದ್ದರೆ ಎಲ್ಲವೂ ಸಾಧ್ಯವಾಗುವುದು.
— ಉಪನಿಷತ್ತುಗಳು

ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ
ಟಿ.ಪಿ.ಕೈಲಾಸಂ

ಮಾಡುವುದರಿಂದಲೇ ಏನಾದರೂ ಆಗುತ್ತದೆ. ಆದುದರಿಂದ ಕರ್ಮ ಮಾಡಲೇಬೇಕು. ಪ್ರಯತ್ನವನ್ನೇ ಪರಮೇಶ್ವರನೆಂದು ತಿಳಿಯಬೇಕು.
ಸಮರ್ಥ ರಾಮದಾಸ

ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.
ಮನುಸ್ಮೃತಿ

ಬೇರೆಯವರಿಗೆ ಕೆಡುಕನ್ನು ಬಯಸದಿರುವುದೇ ನ್ಯಾಯ.
ಮನು

ಕಹಿ ನೆನಪು ಹಾಗೂ ನೋವುಗಳು ಮಾಯವಾಗದೇ ನಮ್ಮನ್ನು ಸದಾ ಕಾಡುತ್ತಿರುತ್ತವೆ
— ಮಾಕೃಮ

ಉಪ್ಪಿಗಿಂತ ರುಚಿಯಿಲ್ಲ ತಾಯಿಗಿಂತ ಬಂಧುವಿಲ್ಲ


ನೀವು ಮಾಡುವ ಕರ್ಮ (ಕೆಲಸ) ಮುಖ್ಯವಾಗಿಲ್ಲದೇ ಇರಬಹುದು, ಆದರೆ ಕರ್ಮ ಮಾಡುವುದು ಅತ್ಯಂತ ಅಗತ್ಯ.
ಮಹಾತ್ಮ ಗಾಂಧಿ

ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.
ವಿನೋಬಾ ಭಾವೆ


                                                                    ಕೃಪೆ : ಮಾ.ಕೃ.ಮಂಜು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು