ಅಂಕಿತ ನಾಮ:
ಸದಾಶಿವ ಮೂರ್ತಿಲಿಂಗ
ಕಾಲ: 1160
ದೊರಕಿರುವ ವಚನಗಳು: 309 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ:
ಪರಿಚಯ: ಕಾಲ, ಸು. 1160. ಅರಿವಿನ ಸ್ವರೂಪದ ಚರ್ಚೆ ಈತನ ಮುಖ್ಯ ಆಸಕ್ತಿ. ಈತನ 309 ವಚನಗಳು ದೊರೆತಿವೆ. ಗುರು, ಲಿಂಗ, ಜಂಗಮ ಮೊದಲಾದ ಪಾರಿಭಾಷಿಕಗಳ ಅರ್ಥವನ್ನು ಕುರಿತ ಚಿಂತನೆ ಈತನಲ್ಲಿದೆ. ಅನೇಕ ರಚನೆಗಳು ಬೆಡಗಿನ ವಚನಗಳ ರೂಪದಲ್ಲಿವೆ.

ಅನುವನರಿವನ್ನಕ್ಕ ಅರ್ಚನೆ, ಪುಣ್ಯವನರಿವನ್ನಕ್ಕ ಪೂಜೆ,
ಶರೀರವುಳ್ಳನ್ನಕ್ಕ ಸುಖದುಃಖವ ಸಂತಾಪಿಸಬೇಕು.
ತೆಪ್ಪದಲ್ಲಿ ನಿಂದು ಒತ್ತಿ ಹೊಳೆಯ ದಾಟುವಂತೆ.
ಕ್ರೀಶುದ್ಧವಾದಲ್ಲಿ ಜ್ಞಾನದ ಗೊತ್ತು,
ಸದಾಶಿವಮೂರ್ತಿಲಿಂಗವನರಿವುದಕ್ಕೆ.
ಶರೀರವುಳ್ಳನ್ನಕ್ಕ ಸುಖದುಃಖವ ಸಂತಾಪಿಸಬೇಕು.
ತೆಪ್ಪದಲ್ಲಿ ನಿಂದು ಒತ್ತಿ ಹೊಳೆಯ ದಾಟುವಂತೆ.
ಕ್ರೀಶುದ್ಧವಾದಲ್ಲಿ ಜ್ಞಾನದ ಗೊತ್ತು,
ಸದಾಶಿವಮೂರ್ತಿಲಿಂಗವನರಿವುದಕ್ಕೆ.
ಅಂಧಕಾರವೆಂಬ ಮನೆಯ ಬಾಗಿಲಲ್ಲಿ ಆರಂಗದ ಕರಡಿ ಕಟ್ಟಿ
ಮೂರಂಗದ ಕೋಡಗ ಏಡಿಸಿ ಕಾಡುತ್ತಿದೆ.
ಮೀರಿದೆನೆಂಬವರೆಲ್ಲರು ಕರಡಿಯ ಗಿಲಗಿನಲ್ಲಿ ಸತ್ತು, ಕೋಡಗದ ಚೇಷ್ಟೆಯಲ್ಲಿ
ಸಿಕ್ಕಿ,
ಬೇಡ ನಿಮಗೆ ಆರೂಢದ ಮಾತು.
ಇಂತಿವ ಮೀರಿ ಅರಿದವಂಗಲ್ಲದೆ ಸದಾಶಿವಮೂರ್ತಿಲಿಂಗವಿಲ್ಲ.
ಮೂರಂಗದ ಕೋಡಗ ಏಡಿಸಿ ಕಾಡುತ್ತಿದೆ.
ಮೀರಿದೆನೆಂಬವರೆಲ್ಲರು ಕರಡಿಯ ಗಿಲಗಿನಲ್ಲಿ ಸತ್ತು, ಕೋಡಗದ ಚೇಷ್ಟೆಯಲ್ಲಿ
ಸಿಕ್ಕಿ,
ಬೇಡ ನಿಮಗೆ ಆರೂಢದ ಮಾತು.
ಇಂತಿವ ಮೀರಿ ಅರಿದವಂಗಲ್ಲದೆ ಸದಾಶಿವಮೂರ್ತಿಲಿಂಗವಿಲ್ಲ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.