ಅಂಕಿತ ನಾಮ:
ಚೆನ್ನಮಲ್ಲಿಕಾರ್ಜುನ
ಕಾಲ: ಹನ್ನೆರಡನೆಯ ಶತಮಾನ
ದೊರಕಿರುವ ವಚನಗಳು: 434 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ: ನಿರ್ಮಲಶೆಟ್ಟಿ ಮತ್ತು ಸುಮತಿ
ಹುಟ್ಟಿದ ಸ್ಥಳ:
ಕಾಲ: ಹನ್ನೆರಡನೆಯ ಶತಮಾನ
ದೊರಕಿರುವ ವಚನಗಳು: 434 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ: ನಿರ್ಮಲಶೆಟ್ಟಿ ಮತ್ತು ಸುಮತಿ
ಹುಟ್ಟಿದ ಸ್ಥಳ:
ಪರಿಚಯ:
ಹನ್ನೆರಡನೆಯ ಶತಮಾನದಲ್ಲಿದ್ದ ಅಕ್ಕಮಹಾದೇವಿ, ನಿರ್ಮಲಶೆಟ್ಟಿ ಮತ್ತು
ಸುಮತಿಯರ ಮಗಳು. ತಂದೆ ತಾಯಿಯರ ಹೆಸರು ಕವಿ ಕಲ್ಪನೆ ಇದ್ದೀತು ಅನ್ನುವುದು ಕೆಲವು
ವಿದ್ವಾಂಸರ ಅನುಮಾನ. ಹರಿಹರನ ಮಹದೇವಿಯಕ್ಕಗಳ ರಗಳೆಯ ಪ್ರಕಾರ ಊರಿನ ಮುಖ್ಯಸ್ಥ ಕೌಶಿಕ
ಮಹದೇವಿಯನ್ನು ಮದುವೆಯಾಗಲು ಬಯಸಿ ಒತ್ತಾಯಿಸಿದ. ಅಕ್ಕ ಶರತ್ತುಗಳನ್ನು ವಿಧಿಸಿ ಮದುವೆಗೆ
ಒಪ್ಪಿದರೂ ಕೌಶಿಕ ವಚನ ಭಂಗ ಮಾಡಿದಾಗ ಉಡುಗೆಯನ್ನೂ ತೊರೆದು ಮನೆ ಬಿಟ್ಟು
ಹೊರಟುಬಿಡುತ್ತಾಳೆ. ಇನ್ನು ಕೆಲವು ಕಥನಪರಂಪರೆಗಳಲ್ಲಿ ಅಕ್ಕ ಎಳವೆಯಲ್ಲೇ
ಚನ್ನಮಲ್ಲಿಕಾರ್ಜುನನನ್ನು ವರಿಸಿದವಳು ಅನ್ನುವುದೂ ಉಂಟು. ಉರಕ್ಕೆ ಜವ್ವನಗಳು ಬಾರದ
ಮುನ್ನ ಎಂದು ಆರಂಭವಾಗುವ ಅಕ್ಕನ ವಚನ ನೋಡಿ. ಪರ್ಯಟನೆ ಮಾಡುತ್ತ ಮಹದೇವಿ ಕಲ್ಯಾಣಕ್ಕೆ
ಹೋದಳು, ಅಲ್ಲಿಂದ ಶ್ರೀಶೈಲದ ಕದಳಿಯಲ್ಲಿ ಐಕ್ಯಳಾದಳು ಎಂಬ ವಿವರಗಳಿವೆ. ಅಲ್ಲಮ ಮತ್ತು
ಅಕ್ಕಮಹಾದೇವಿ ಒಂದೇ ಪ್ರಾಂತದವರು, ಅವರ ಬದುಕಿನ ಕಥೆಗಳಲ್ಲೂ ವೈಚಾರಿಕ ನಿಲುವುಗಳಲ್ಲೂ
ಅನೇಕ ಸಾಮ್ಯಗಳಿವೆ. ಈಕೆಯ 434 ವಚನಗಳು ಮತ್ತು ಹಲವು ಹಾಡುಗಳು ದೊರೆತಿವೆ. ಯೋಗಾಂಗ
ತ್ರಿವಿಧಿ, ಸೃಷ್ಟಿಯ ವಚನ ಮತ್ತು ಮಂತ್ರಗೋಪ್ಯ ಮಹಾದೇವಿಯ ಇತರ ಕೃತಿಗಳು ಎಂದು
ಹೇಳುವುದುಂಟು. ಆದರೆ ಇವುಗಳ ರಚನೆಯನ್ನು ನೋಡಿದರೆ ವಚನಗಳನ್ನು ಸೃಷ್ಟಿಸಿದ ಮನಸ್ಸೇ ಈ
ಕೃತಿಗಳನ್ನೂ ರಚಿಸಿತು ಎಂದು ನಂಬುವುದು ಕಷ್ಟವಾಗುವಂತಿದೆ. ಭಾವಗಳ ತೀವ್ರತೆ ಈಕೆಯ
ರಚನೆಗಳ ಮುಖ್ಯ ಲಕ್ಷಣ.
ಅಯ್ಯಾ, ಪರಾತ್ಪರ ಸತ್ಯ ಸದಾಚಾರ
ಗುರುಲಿಂಗಜಂಗಮದ ಶ್ರೀಚರಣವನು
ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ
ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ
ಅರ್ಥಪ್ರಾಣಾಬ್ಥಿಮಾನವ ಸಮರ್ಪಿಸಿ,
ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ
ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು
ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ
ಕೊಟ್ಟು ಕೊಂಬುವಂತಹದೆ ಇದಿರಿಟ್ಟು
ಜಂಗಮ ಪಾದೋದಕ ಪ್ರಸಾದವ ಕೊಂಬ
ಆಚರಣೆಯ ನಿಲುಗಡೆ ನೋಡಾ.
ಆಮೇಲೆ ಒಪ್ಪತ್ತು ಸಂಬಂಧವಿಟ್ಟು
ಆಚರಿಸುವ ನಿಲುಕಡೆ ಎಂತೆಂದಡೆ
ಅಯ್ಯಾ, ನಿನ್ನ ಷಟ್ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ
ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ
ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ
ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ.
ಇಂತು ಷೋಡಶಕಳಾಸ್ವರೂಪವಾದ
ಚಿದ್ಘನ ಮಹಾಲಿಂಗದೇವನ
ನಿರಂಜನ ಜಂಗಮದೋಪಾದಿಯಲ್ಲಿ
ಸಗುಣ ನಿರ್ಗುಣ ಪೂಜೆಗಳ ಮಾಡಿ
ಜಂಗಮಚರಣಸೋಂಕಿನಿಂ ಬಂದ
ಗುರುಪಾದೋದಕವಾದಡೂ ಸರಿಯೆ,
ಅದು ದೊರೆಯದಿದ್ದಡೆ,
ಲಿಂಗಾಣತಿಯಿಂ ಬಂದೊದಗಿದ
ಪರಿಣಾಮೋದಕವಾದಡೂ ಸರಿಯೆ,
ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ
ಆ ಉದಕದೊಳಗೆ ಹಸ್ತೋದಕ
ಮಂತ್ರೋದಕ ಭಸ್ಮೋದಕವ ಮಾಡಿ,
ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ
ಅಖಂಡಜ್ಯೋತಿಪ್ರಣವ, ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ,
ಶುದ್ಧಾದಿಯಾದ ಪೂರ್ಣಭಕ್ತಿಯಿಂದ
ಮಹಾಚಿದ್ಘನತೀರ್ಥವೆಂದು ಭಾವಿಸಿ
ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ
ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ,
ಮೂರು ವೇಳೆ ಪ್ರದಕ್ಷಿಣವ ಮಾಡಿ,
ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ
ಇಷ್ಟ ಮಹಾಲಿಂಗ ಜಂಗಮಕ್ಕೆ
ಅಷ್ಟವಿಧಮಂತ್ರ ಸಕೀಲಂಗಳಿಂದ
ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ
ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ
ಅಷ್ಟವಿಧೋದಕವಾಗುವುದಯ್ಯಾ.
ಆ ಇಷ್ಟಮಹಾಲಿಂಗ ಜಂಗಮವೆತ್ತಿ
ಅಷ್ಟಾದಶಮಂತ್ರ ಸ್ಮರಣೆಯಿಂದ
ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ.
ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ
ಮುಕ್ತಾಯವ ಮಾಡಿದಲ್ಲಿಗೆ
ದಶವಿಧೋದಕವೆನಿಸುವುದಯ್ಯಾ.
ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ
ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ
ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ
ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ.
ಸಹಜಲಿಂಗಭಕ್ತರಾದಡೆ
ಮುಖ ಮಜ್ಜನವ ಮಾಡಿಸಿ ತಾ ಧರಿಸುವ
ವಿಭೂತಿಧಾರಣವ ಮಾಡಿಸಿ
ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ
ಎಡೆಮಾಡಿಸಿಕೊಂಬುವುದಯ್ಯಾ.
ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು,
ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ
ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು
ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು
ಬಂದ ಕ್ರಿಯಾಭಸಿತವ ಲೇಪಿಸಿ,
ಮೂಲಪ್ರಣವ ಪ್ರಸಾದಪ್ರಣವದೊಳಗೆ
ಗೋಳಕಪ್ರಣವ ಅಖಂಡಗೋಳಕಪ್ರಣವ
ಅಖಂಡ ಮಹಾಗೋಳಕಪ್ರಣವ,
ಜ್ಯೋತಿಪ್ರಣವ ಧ್ಯಾನದಿಂದ
ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ,
ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ,
ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ,
ಪದಾ ರ್ಥದ ಪೂರ್ವಾಶ್ರಯವ ಕಳೆದು
ಶುದ್ಧಪ್ರಸಾದವೆಂದು ಭಾವಿಸಿ,
ಆ ಇಷ್ಟ ಮಹಾಲಿಂಗ ಜಂಗಮಕ್ಕೆ
ಅಷ್ಟಾದಶ ಮಂತ್ರಸ್ಮರಣೆಯಿಂದ
ಮೂರುವೇಳೆ ರೂಪ ಸಮರ್ಪಿಸಿ, ಎರಡು ವೇಳೆ ರೂಪ ತೋರಿ,
ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು
ಆರನೆಯ ವೇಳೆಗೆ ಭೋಜ್ಯಗಟ್ಟಿ
ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ,
ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ
ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ
ಗುರುಲಿಂಗಜಂಗಮದ ಶ್ರೀಚರಣವನು
ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ
ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ
ಅರ್ಥಪ್ರಾಣಾಬ್ಥಿಮಾನವ ಸಮರ್ಪಿಸಿ,
ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ
ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು
ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ
ಕೊಟ್ಟು ಕೊಂಬುವಂತಹದೆ ಇದಿರಿಟ್ಟು
ಜಂಗಮ ಪಾದೋದಕ ಪ್ರಸಾದವ ಕೊಂಬ
ಆಚರಣೆಯ ನಿಲುಗಡೆ ನೋಡಾ.
ಆಮೇಲೆ ಒಪ್ಪತ್ತು ಸಂಬಂಧವಿಟ್ಟು
ಆಚರಿಸುವ ನಿಲುಕಡೆ ಎಂತೆಂದಡೆ
ಅಯ್ಯಾ, ನಿನ್ನ ಷಟ್ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ
ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ
ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ
ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ.
ಇಂತು ಷೋಡಶಕಳಾಸ್ವರೂಪವಾದ
ಚಿದ್ಘನ ಮಹಾಲಿಂಗದೇವನ
ನಿರಂಜನ ಜಂಗಮದೋಪಾದಿಯಲ್ಲಿ
ಸಗುಣ ನಿರ್ಗುಣ ಪೂಜೆಗಳ ಮಾಡಿ
ಜಂಗಮಚರಣಸೋಂಕಿನಿಂ ಬಂದ
ಗುರುಪಾದೋದಕವಾದಡೂ ಸರಿಯೆ,
ಅದು ದೊರೆಯದಿದ್ದಡೆ,
ಲಿಂಗಾಣತಿಯಿಂ ಬಂದೊದಗಿದ
ಪರಿಣಾಮೋದಕವಾದಡೂ ಸರಿಯೆ,
ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ
ಆ ಉದಕದೊಳಗೆ ಹಸ್ತೋದಕ
ಮಂತ್ರೋದಕ ಭಸ್ಮೋದಕವ ಮಾಡಿ,
ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ
ಅಖಂಡಜ್ಯೋತಿಪ್ರಣವ, ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ,
ಶುದ್ಧಾದಿಯಾದ ಪೂರ್ಣಭಕ್ತಿಯಿಂದ
ಮಹಾಚಿದ್ಘನತೀರ್ಥವೆಂದು ಭಾವಿಸಿ
ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ
ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ,
ಮೂರು ವೇಳೆ ಪ್ರದಕ್ಷಿಣವ ಮಾಡಿ,
ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ
ಇಷ್ಟ ಮಹಾಲಿಂಗ ಜಂಗಮಕ್ಕೆ
ಅಷ್ಟವಿಧಮಂತ್ರ ಸಕೀಲಂಗಳಿಂದ
ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ
ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ
ಅಷ್ಟವಿಧೋದಕವಾಗುವುದಯ್ಯಾ.
ಆ ಇಷ್ಟಮಹಾಲಿಂಗ ಜಂಗಮವೆತ್ತಿ
ಅಷ್ಟಾದಶಮಂತ್ರ ಸ್ಮರಣೆಯಿಂದ
ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ.
ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ
ಮುಕ್ತಾಯವ ಮಾಡಿದಲ್ಲಿಗೆ
ದಶವಿಧೋದಕವೆನಿಸುವುದಯ್ಯಾ.
ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ
ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ
ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ
ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ.
ಸಹಜಲಿಂಗಭಕ್ತರಾದಡೆ
ಮುಖ ಮಜ್ಜನವ ಮಾಡಿಸಿ ತಾ ಧರಿಸುವ
ವಿಭೂತಿಧಾರಣವ ಮಾಡಿಸಿ
ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ
ಎಡೆಮಾಡಿಸಿಕೊಂಬುವುದಯ್ಯಾ.
ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು,
ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ
ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು
ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು
ಬಂದ ಕ್ರಿಯಾಭಸಿತವ ಲೇಪಿಸಿ,
ಮೂಲಪ್ರಣವ ಪ್ರಸಾದಪ್ರಣವದೊಳಗೆ
ಗೋಳಕಪ್ರಣವ ಅಖಂಡಗೋಳಕಪ್ರಣವ
ಅಖಂಡ ಮಹಾಗೋಳಕಪ್ರಣವ,
ಜ್ಯೋತಿಪ್ರಣವ ಧ್ಯಾನದಿಂದ
ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ,
ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ,
ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ,
ಪದಾ ರ್ಥದ ಪೂರ್ವಾಶ್ರಯವ ಕಳೆದು
ಶುದ್ಧಪ್ರಸಾದವೆಂದು ಭಾವಿಸಿ,
ಆ ಇಷ್ಟ ಮಹಾಲಿಂಗ ಜಂಗಮಕ್ಕೆ
ಅಷ್ಟಾದಶ ಮಂತ್ರಸ್ಮರಣೆಯಿಂದ
ಮೂರುವೇಳೆ ರೂಪ ಸಮರ್ಪಿಸಿ, ಎರಡು ವೇಳೆ ರೂಪ ತೋರಿ,
ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು
ಆರನೆಯ ವೇಳೆಗೆ ಭೋಜ್ಯಗಟ್ಟಿ
ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ,
ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ
ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ
ಅಂಗಸಂಗದಲ್ಲಿ ಲಿಂಗಸಂಗಿಯಾದೆನು.
ಲಿಂಗಸಂಗದಲ್ಲಿ ಅಂಗಸಂಗಿಯಾದೆನು.
ಉಭಯಸಂಗವನೂ ಅರಿಯದೆ ಪರಿಣಾಮಿಯಾದೆನು.
ನುಡಿಯ ಗಡಣವ ಮರೆದು ತೆರಹಿಲ್ಲದಿದ್ದೆನು.
ಎನ್ನ ದೇವ ಚೆನ್ನಮಲ್ಲಿಕಾರ್ಜುನನ ಬೆರಸಿದ ಬಳಿಕ
ಎನ್ನ ನಾನು ಏನೆಂದೂ ಅರಿಯೆನಯ್ಯಾ.
ಲಿಂಗಸಂಗದಲ್ಲಿ ಅಂಗಸಂಗಿಯಾದೆನು.
ಉಭಯಸಂಗವನೂ ಅರಿಯದೆ ಪರಿಣಾಮಿಯಾದೆನು.
ನುಡಿಯ ಗಡಣವ ಮರೆದು ತೆರಹಿಲ್ಲದಿದ್ದೆನು.
ಎನ್ನ ದೇವ ಚೆನ್ನಮಲ್ಲಿಕಾರ್ಜುನನ ಬೆರಸಿದ ಬಳಿಕ
ಎನ್ನ ನಾನು ಏನೆಂದೂ ಅರಿಯೆನಯ್ಯಾ.
ಅಕ್ಕನ ತ್ರಿವಿಧಾಂಗ ಯೋಗದ ಬಗ್ಗೆ ತಿಳಿಸಿರುವ ತಮಗೆ ಅನಂತಾನಂತ ಧನ್ಯವಾದಗಳು.ಇದರ ಕುರಿತು ಇನ್ನಷ್ಟು ವಿವರವನ್ನು ಪ್ರಕಟಿಸಬೇಕಾಗಿ ವಿನಂತಿ.
ಪ್ರತ್ಯುತ್ತರಅಳಿಸಿ