fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಮಂಗಳವಾರ, ಮೇ 03, 2016

ವಿಶ್ವದ ಟಾಪ್ 10 ವಿಮಾನ ನಿಲ್ದಾಣಗಳು

ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳ ಪಟ್ಟಿ ಮಾಡಲಾಗಿದ್ದು, 10 ವಿಮಾನ ನಿಲ್ದಾಣಗಳ ಪೈಕಿ 4 ನಿಲ್ದಾಣಗಳು ಅಮೆರಿಕಾದಲ್ಲೇ ಇವೆ ಎಂಬುದು ಗಮನಾರ್ಹ. ಈ ಪಟ್ಟಿಯಲ್ಲಿ ಭಾರತದ ಯಾವುದೇ ವಿಮಾನ ನಿಲ್ದಾಣಗಳು ಸ್ಥಾನ ಪಡೆದಿಲ್ಲ.
1. ಹಾರ್ಟ್ಸ್ ಫೀಲ್ಡ್- ಜಾಕ್ಸನ್ ಅಟ್ಲಾಂಟಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ವಿಶ್ವದ ಜನನಿಬಿಡ ವಿಮಾನ ನಿಲ್ದಾಣಗಳ ಪೈಕಿ ಮೊದಲ ಸ್ಥಾನದಲ್ಲಿರುವ ಇಲ್ಲಿಂದ 96 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸುತ್ತಾರೆ. ದಿನವಹಿ ವಿಮಾನ ಹಾರಾಟದಲ್ಲೂ ಇದು ಮೊದಲ ಸ್ಥಾನದಲ್ಲಿದೆ.
2. ಬೀಜಿಂಗ್ ಕ್ಯಾಪಿಟಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ಜನನಿಬಿಡ ವಿಮಾನ ನಿಲ್ದಾಣಗಳ ಪೈಕಿ ಏಷ್ಯಾದಲ್ಲಿ ಪ್ರಥಮ ಸ್ಥಾನದಲ್ಲಿರುವ ಇದು, ವಿಶ್ವದಲ್ಲಿ ಎರಡನೇ ಸ್ಥಾನ ಪಡೆದಿದೆ. ಇಲ್ಲಿಂದ 86 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸುತ್ತಾರೆ.
3. ಲಂಡನ್ ಹೀಥ್ರೋ ವಿಮಾನ ನಿಲ್ದಾಣ: ಯುನೈಟೆಡ್ ಕಿಂಗ್ಡಮ್ ನಲ್ಲಿ ಪ್ರಥಮ ಸ್ಥಾನದಲ್ಲಿರುವ ಈ ವಿಮಾನ ನಿಲ್ದಾಣ ವಿಶ್ವ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಇಲ್ಲಿಂದ 73 ಮಿಲಿಯನ್ ಪ್ರಯಾಣಿಕರು ಪ್ರಯಾಣ ಬೆಳೆಸುತ್ತಾರೆ.
4. ಟೋಕಿಯೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ಬೀಜಿಂಗ್ ವಿಮಾನ ನಿಲ್ದಾಣದ ನಂತರ ಏಷ್ಯಾದಲ್ಲಿ ಎರಡನೇ ಸ್ಥಾನದಲ್ಲಿರುವ ಈ ವಿಮಾನ ನಿಲ್ದಾಣ, ವಿಶ್ವ ಕ್ರಮಾಂಕದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ. ಇಲ್ಲಿಂದ 73 ಮಿಲಿಯನ್ ಮಂದಿ ಪ್ರಯಾಣಿಸುತ್ತಾರೆ.
5. ಲಾಸ್ ಏಂಜೆಲೀಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ವಿಶ್ವ ಕ್ರಮಾಂಕದಲ್ಲಿ 5 ನೇ ಸ್ಥಾನದಲ್ಲಿರುವ ಇಲ್ಲಿಂದ 70.66 ಮಿಲಿಯನ್ ಪ್ರಯಾಣಿಕರು ಪ್ರಯಾಣ ಬೆಳೆಸುತ್ತಾರೆ.
6. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ಜನನಿಬಿಡ ವಿಮಾನ ನಿಲ್ದಾಣಗಳ ಪೈಕಿ ವಿಶ್ವ ಕ್ರಮಾಂಕದಲ್ಲಿ ಆರನೇ ಸ್ಥಾನದಲ್ಲಿರುವ ಇಲ್ಲಿಂದ 70.47 ಮಿಲಿಯನ್ ಪ್ರಯಾಣಿಕರು ಪ್ರಯಾಣ ಬೆಳೆಸುತ್ತಾರೆ.
7. ಚಿಕಾಗೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ವಿಶ್ವ ಕ್ರಮಾಂಕದಲ್ಲಿ ಏಳನೇ ಸ್ಥಾನದಲ್ಲಿರುವ ಈ ವಿಮಾನ ನಿಲ್ದಾಣದಿಂದ 69.99 ಮಿಲಿಯನ್ ಪ್ರಯಾಣಿಕರು ಪ್ರಯಾಣ ಬೆಳೆಸುತ್ತಾರೆ.
8. ಪ್ಯಾರೀಸ್ ಚಾರ್ಲ್ಸ್ ಡಿ ಗಾಲೆ ವಿಮಾನ ನಿಲ್ದಾಣ: ಎಂಟನೇ ಸ್ಥಾನದಲ್ಲಿರುವ ಈ ವಿಮಾನ ನಿಲ್ದಾಣದಿಂದ 63.81 ಮಿಲಿಯನ್ ಮಂದಿ ಪ್ರಯಾಣಿಸುತ್ತಾರೆ.
9. ಡಲ್ಲಾಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ವಿಶ್ವ ಪಟ್ಟಿಯಲ್ಲಿ 9 ನೇ ಕ್ರಮಾಂಕದಲ್ಲಿರುವ ಈ ವಿಮಾನ ನಿಲ್ದಾಣದಿಂದ 63.55 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸುತ್ತಾರೆ.
10. ಹಾಂಕಾಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣಗಳ ಪೈಕಿ ಒಂದೆಂದು ಪರಿಗಣಿಸಲಾಗಿರುವ ಇದು ವಿಶ್ವ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದು, 63.12 ಮಿಲಿಯನ್ ಮಂದಿ ಪ್ರಯಾಣಿಸುತ್ತಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು