ರಿಯೋ ಡಿ ಜನೈರೋ:
ರಿಯೋ ಒಲಿಂಪಿಕ್ಸ್ ನ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು
ಸ್ಪೇನ್ ನ ಕ್ಯಾರೊಲಿನಾ ಮರಿನ್ ವಿರುದ್ಧ ಪರಾಭವಗೊಂಡಿದ್ದಾರೆ.
ಫೈನಲ್ ಪಂದ್ಯದಲ್ಲಿ ಭಾರತದ 10ನೇ ಶ್ರೇಯಾಂಕಿತೆ ಪಿವಿ
ಸಿಂಧು ಮೊದಲ ಸೆಟ್ ನ ಜಿದ್ದಾಜಿದ್ದಿನ ಹೋರಾಟದಲ್ಲಿ 21-19 ಅಂಕಗಳ ಅಂತರದಲ್ಲಿ ಮಣಿಸಿದರು.
ಎರಡನೇ ಸೆಟ್ ನಲ್ಲಿ ಆಕ್ರಮಣಕಾರಿ ಆಟವಾಡಿದ ಮರಿನ್ 21-12 ಅಂಕಗಳಿಂದ ಸಿಂಧುರನ್ನು ಮಣಿಸಿದರು.
ಮೂರನೇ ಸೆಟ್ ನಲ್ಲಿ ಸಿಂಧು ವಿರುದ್ಧ ಮತ್ತೆ ಆಕ್ರಮಣ ಆಟವಾಡಿದ ಮರಿನ 21-15 ಅಂಕಗಳಿಂದ ಸೋಲಿಸಿ
ಸ್ವರ್ಣಕ್ಕೆ ಮುತ್ತಿಟ್ಟರು. ಇದರೊಂದಿಗೆ ಸಿಂಧು ಬೆಳ್ಳಿಗೆ ತೃಪ್ತಿಪಡಬೇಕಾಯಿತು.
ಸಾಂಬಾ ನಾಡಲ್ಲಿ ನಡೆಯುತ್ತಿರುವ ರಿಯೋ ಒಲಿಂಪಿಕ್ಸ್ ನ
ವನಿತೆಯರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ತಲುಪಿದ್ದ ಪಿವಿ ಸಿಂಧು ಭಾರತದ ಪರ ಬೆಳ್ಳಿ ಪದಕಕ್ಕೆ
ತೃಪ್ತರಾದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.