fly

🍩🥧🍬🧁🍭🥕🍅🥦🍆🥔🌽🥑ʕ·͡ᴥ·ʔ仝ಇತ್ತೀಚಿನ ಸುದ್ದಿ仝ʕ·͡ᴥ·ʔ🥑🌽🥔🍆🥦🍅🥕🍭🧁🍬🥧🍩

𝕤 𝕙𝕚𝕧𝕒𝕜𝕦𝕞𝕒𝕣 . 𝕡 . 𝕟 𝕖𝕘𝕚𝕞𝕒𝕟𝕚 => 𝕤𝕡𝕟𝟛𝟙𝟠𝟟 | ಕನ್ನಡದ ಟೆ ಲಿ ಗ್ರಾ ಮ ಲಿಂಕ್| ಮಕ್ಕಳ ಗೀತೆಗಳು| ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ, ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ ☺ ☻ (ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ,ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯಕ್ಕಿಂತ, ಕೂಲಿ ಮಾಡೋದ್ ಲೇಸು.) WELCOME TO 2022

ಲೇಬಲ್‌ಗಳು

ನಿಮಗೆ ಗೋತ್ತೆ ? (105) ಅಮ್ಮ (102) ಸಾಮಾನ್ಯ ಜ್ಞಾನ (72) ಸಂದೇಶ (66) ವಚನ (62) ಚಿತ್ರ - ವಿ-ಚಿತ್ರ (59) ಈ ಕ್ಷಣ (53) ಪದದ ಸುತ್ತ (53) ಕನ್ನಡ ಗೀತೆ (50) ನುಡಿಮುತ್ತು (47) ಮಕ್ಕಳ ಹಾಡು (47) ಪರಿಸರ ತಿಳಿ (42) ತಿಂಗಳ ಟಾಪ್ 3 (40) ವಿಚಿತ್ರವಾದರು ಸತ್ಯ (37) ರಂಗೋಲಿ (34) ಪ್ರವಾಸಿ ತಾಣ (30) ನದಿಗಳು (29) ಪ್ರಾಣಿ / ಪಕ್ಷಿ ಜಗತ್ತು (29) ಶಾಯರಿಗಳು (24) ಹಚ್ಚೆ ಮಾತು (24) ಕೈಯಲ್ಲಿ ಆರೋಗ್ಯ (23) ಬೆನ್-ಹ್ಯಾಮ್ (23) ಸರಳ ಕಲೆ (23) ಹಬ್ಬ (23) ಕಾಲ (22) ನಗೆ ಟಾನಿಕ್ (21) ಗೂಗಲ್(Google) (20) ಚರಿತ್ರೆ (19) ವಿಶೇಷ ದಿನಗಳು (17) ಅಡುಗೆ ಮನೆ (16) ಸಾಧಕರ ಸಾಲು (16) ಕ್ರೀಡೆ (13) ನಕಲು ಪೋಸ್ಟರ್-ಗಳೂ (13) ಸಂಸ್ಥೆ ಸ್ಥಾಪಕರು (12) ಹಾಸ್ಯ ಕಥೆ (11) ಯೋಗಾಸನ (10) ಸಂಶೋಧನೆ (10) ಕನ್ನಡ (9) ಡಾ || ವಿಷ್ಣುವರ್ಧನ (9) ನಗೆ ವ್ಯತ್ಯಾಸ (8) ಪದ ಬಂಧ (7) ಮತದಾನ (7) ಮೆಟ್ಟಿಲುಗಳು (7) ಶಬ್ದಾರ್ಥ (6) ಸಾಂಕ್ರಾಮಿಕ ರೋಗ (6) ಅ-ಅಃ (4) ಕನ್ನಡ ಚಿತ್ರಗಳ ಪಟ್ಟಿ-1934-.. (4) ಕವನ (4) A-Z (3) ಪ್ರಯೋಗ ಶಾಲೆ (3) ಹೊಸ ನೋಟು (3) ಅಳಿಸು(Delete) (2) ಗೌತಮ ಬುದ್ಧ (2) ಶರಣರು (2) ಇತರೆ (1) ಕಂಪ್ಯೂಟರ (1) ಕೊರೊನಾ ಸಾಲು (1) ತಿಂಗಳ ತತ್ವ (1) ಫಲಿತಾಂಶ (1) ಸಂಬಂಧ (1)

ಕನ್ನಡದ 100 ಶ್ರೇಷ್ಠ ಸಾಹಿತ್ಯ ಕೃತಿಗಳು


1.ಕಾನೂರು ಹೆಗ್ಗಡಿತಿ - ಕುವೆ೦ಪು
2.ಮಲೆಗಳಲ್ಲಿ ಮದುಮಗಳು - ಕುವೆ೦ಪು
3.ಚಿದಂಬರ ರಹಸ್ಯ - ಪೂರ್ಣಚಂದ್ರ ತೇಜಸ್ವಿ
4. ಜುಗಾರಿ ಕ್ರಾಸ್ - ಪೂರ್ಣಚಂದ್ರ ತೇಜಸ್ವಿ
3.ಮರಳಿ ಮಣ್ಣಿಗೆ - ಡಾ. ಕೆ. ಶಿವರಾಮ ಕಾರಂತ
4.ಚೋಮನ ದುಡಿ - ಡಾ. ಕೆ. ಶಿವರಾಮ ಕಾರಂತ
5.ಚಿಕವೀರ ರಾಜೇಂದ್ರ - ಮಾಸ್ತಿ ವೆಂಕಟೇಶ ಅಯ್ಯಂಗಾರ್
6.ಮೂಕಜ್ಜಿಯ ಕನಸುಗಳು - ಡಾ. ಕೆ. ಶಿವರಾಮ ಕಾರಂತ
7.ಬೆಟ್ಟದ ಜೀವ - ಡಾ. ಕೆ. ಶಿವರಾಮ ಕಾರಂತ
8.ಮಹಾಬ್ರಾಹ್ಮಣ - ದೇವುಡು ನರಸಿಂಹ ಶಾಸ್ತ್ರಿ
9.ಸಂಧ್ಯಾರಾಗ - ಅ.ನ. ಕೃಷ್ಣರಾಯ
10.ದುರ್ಗಾಸ್ತಮಾನ - ತ.ರಾ. ಸುಬ್ಬರಾವ್
11.ಗ್ರಾಮಾಯಣ - ರಾವ್ ಬಹದ್ದೂರ್
12.ಶಾಂತಲಾ - ಕೆ.ವಿ. ಅಯ್ಯರ್
13.ಸಂಸ್ಕಾರ - ಯು.ಆರ್. ಅನಂತಮೂರ್ತಿ
14.ಗಂಗವ್ವ ಮತ್ತು ಗಂಗಾಮಾಯಿ - ಶಂಕರ ಮೊಕಾಶಿ ಪುಣೇಕರ
15.ಗೃಹಭಂಗ - ಎಸ್.ಎಲ್. ಭೈರಪ್ಪ
16.ಮುಕ್ತಿ - ಶಾಂತಿನಾಥ ದೇಸಾಯಿ
17.ವೈಶಾಖ - ಚದುರಂಗ
18.ಮೃತ್ಯುಂಜಯ - ನಿರಂಜನ
19.ಚಿರಸ್ಮರಣೆ - ನಿರಂಜನ
20.ಶಿಕಾರಿ - ಯಶವಂತ ಚಿತ್ತಾಲ
21.ಮಾಡಿದ್ದುಣ್ಣೋ ಮಹಾರಾಯ - ಎಂ.ಎಸ್. ಪುಟ್ಟಣ್ಣಯ್ಯ
22.ಕಾಡು - ಶ್ರೀಕೃಷ್ಣ ಆಲನಹಳ್ಳಿ
23.ಕರ್ವಾಲೊ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ
24.ಬಂಡಾಯ - ವ್ಯಾಸರಾಯ ಬಲ್ಲಾಳ
25.ತೇರು - ರಾಘವೇಂದ್ರ ಪಾಟೀಲ
26.ದ್ಯಾವನೂರು - ದೇವನೂರು ಮಹಾದೇವ
27.ಚಂದ್ರಗಿರಿಯ ತೀರದಲ್ಲಿ - ಸಾರಾ ಅಬೂಬಕ್ಕರ್
28.ಇಜ್ಜೋಡು - ವಿ.ಕೃ. ಗೋಕಾಕ್
29.ಬದುಕು - ಗೀತಾ ನಾಗಭೂಷಣ
30.ಮಾಧವ ಕರುಣಾ ವಿಲಾಸ - ಗಳಗನಾಥ
31.ಬೆಕ್ಕಿನ ಕಣ್ಣು - ತ್ರಿವೇಣಿ
32.ಮುಸ್ಸಂಜೆಯ ಕಥಾ ಪ್ರಸಂಗ - ಪಿ. ಲಂಕೇಶ
33.ಮಾಡಿ ಮಡಿದವರು - ಬಸವರಾಜ ಕಟ್ಟೀಮನಿ
34.ಅನ್ನ - ರ೦.ಶ್ರೀ.ಮುಗಳಿ
35.ಮೋಹಿನಿ - ವಿ. ಎಂ. ಇನಾಂದಾರ್
36.ಚಿದಂಬರ ರಹಸ್ಯ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ (ಕಥಾ ಸ೦ಕಲನಗಳು)
37.ಮಾಸ್ತಿ ಅವರ ಸಮಗ್ರ ಕತೆಗಳು - ಮಾಸ್ತಿ ವೆಂಕಟೇಶ ಅಯ್ಯಂಗಾರ್
38.ನೇಮಿಚಂದ್ರರ ಕಥೆಗಳು - ನೇಮಿಚಂದ್ರ
39.ಕಲ್ಲು ಕರಗುವ ಸಮಯ - ಪಿ. ಲ೦ಕೇಶ
40.ಅಮೃತಬಳ್ಳಿ ಕಷಾಯ - ಜಯಂತ ಕಾಯ್ಕಿಣಿ
41.ಹುಲಿ ಸವಾರಿ - ವಿವೇಕ ಶಾನುಭಾಗ
42.ಬುಗುರಿ - ಮೊಗಳ್ಳಿ ಗಣೇಶ್
43.ತಮಂಧದ ಕೇಡು - ಅಮರೇಶ ನುಗುಡೋಣಿ
44.ಅನಂತಮೂರ್ತಿ: ಐದು ದಶಕದ ಕಥೆಗಳು - ಯು.ಆರ್. ಅನಂತಮೂರ್ತಿ
45.ಜಿ.ಎಸ್. ಸದಾಶಿವ: ಇದುವರೆಗಿನ ಕಥೆಗಳು
46.ಖಾಸನೀಸರ ಕಥೆಗಳು
47.ಕೆ. ಸದಾಶಿವ ಸಮಗ್ರ ಕತೆಗಳು
48.ಭಳಾರೆ ವಿಚಿತ್ರಂ - ಕುಂ.ವೀರಭದ್ರಪ್ಪ
49.ಪಾವೆಂ ಹೇಳಿದ ಕಥೆ - ರವಿ ಬೆಳಗೆರೆ
50.ಮಾಯಿಯ ಮುಖಗಳು - ರಾಘವೇಂದ್ರ ಪಾಟೀಲ
51.ಚಿತ್ತಾಲರ ಕತೆಗಳು - ಯಶವಂತ ಚಿತ್ತಾಲ
52.ದಜ್ಜಾಲ - ಫಕೀರ್ ಮುಹಮ್ಮದ್ ಕಟ್ಪಾಡಿ
53.ಕನ್ನಂಬಾಡಿ - ಡಾ. ಬೆಸಗರಹಳ್ಳಿ ರಾಮಣ್ಣ
54.ಅಮ್ಮಚ್ಚಿಯೆಂಬ ನೆನಪು - ವೈದೇಹಿ (ಕವನ ಸ೦ಕಲನಗಳು)
55.ಔದುಂಬರಗಾಥೆ - ದ.ರಾ.ಬೇ೦ದ್ರೆ
56.ಸಮಗ್ರ ಕಾವ್ಯ - ಗೋಪಾಲಕೃಷ್ಣ ಅಡಿಗ
57.ಹೊ೦ಬೆಳಕು - ಚನ್ನವೀರ ಕಣವಿ
58.ಹಾಡು-ಹಸೆ: ಕೆ.ಎಸ್.ನರಸಿಂಹಸ್ವಾಮಿ ಆಯ್ದ ಕವಿತೆಗಳು
59.ಜಿ.ಎಸ್. ಶಿವರುದ್ರಪ್ಪ ಸಮಗ್ರ ಕಾವ್ಯ
60.ಕೆ.ಎಸ್. ನಿಸಾರ್ ಅಹಮದ್ ಸಮಗ್ರ ಕವಿತೆಗಳು
61.ಮೂವತ್ತು ಮಳೆಗಾಲ - ಎಚ್.ಎಸ್. ವೆಂಕಟೇಶಮೂರ್ತಿ
62.ಮೆರವಣಿಗೆ - ಡಾ. ಸಿದ್ಧಲಿಂಗಯ್ಯ
63.ಬೆಳ್ಳಕ್ಕಿ ಹಿಂಡು - ಸುಬ್ಬಣ ರಂಗನಾಥ ಎಕ್ಕುಂಡಿ
64.ತಟ್ಟು ಚಪ್ಪಾಳೆ ಪುಟ್ಟ ಮಗು - ಬೊಳುವಾರು ಮಹಮದ್ ಕುಂಞಿ
65.ಕುವೆಂಪು ಸಮಗ್ರ ಕಾವ್ಯ - ಕುವೆ೦ಪು
66.ಕ್ಯಾಮೆರಾ ಕಣ್ಣು : ಬಿ.ಆರ್.ಲಕ್ಷ್ಮಣ ರಾವ್ ಸಮಗ್ರ ಕಾವ್ಯ
67.ರತ್ನನ ಪದಗಳು,ನಾಗನ ಪದಗಳು - ಜಿ.ಪಿ. ರಾಜರತ್ನಂ
68.ಪಾಂಚಾಲಿ: ಆಯ್ದ ಕವನಗಳು - ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
69.ಹೊಂಗನಸು - ಬಿಎಂಶ್ರೀ
70. ಪರ್ವ - ಎಸ್.ಎಲ್.ಭೈರಪ್ಪ
71.ಗಜಲ್ ಮತ್ತು ದ್ವಿಪದಿಗಳು: ಶಾಂತರಸ
72.ಗೌರೀಶ್ ಕಾಯ್ಕಿಣಿ ಸಮಗ್ರ ಸಾಹಿತ್ಯ
73.ಮ೦ಕುತಿಮ್ಮನ ಕಗ್ಗ - ಡಿ.ವಿ.ಗು೦ಡಪ್ಪ
74.ಈವರೆಗಿನ ಹೇಳತೇನ ಕೇಳ - ಡಾ.ಚಂದ್ರಶೇಖರ ಕಂಬಾರ, (ನಾಟಕಗಳು)
75.ಪುತಿನ ಸಮಗ್ರ ಗೇಯ ಕಾವ್ಯ ನಾಟಕಗಳು - ಪು.ತಿ. ನರಸಿಂಹಾಚಾರ್
76.ಕೈಲಾಸಂ ಕನ್ನಡ ನಾಟಕಗಳು - ಟಿ.ಪಿ.ಕೈಲಾಸ೦
77.ಶೋಕಚಕ್ರ - ಶ್ರೀರ೦ಗ
78.ಕಾಕನಕೋಟೆ - ಮಾಸ್ತಿ ವೆಂಕಟೇಶ ಅಯ್ಯಂಗಾರ್
79. ಆವರಣ - ಎಸ್.ಎಲ್.ಭೈರಪ್ಪ
80.ತುಘಲಕ್ - ಗಿರೀಶ ಕಾರ್ನಾಡ
81.ಸಂಸ ನಾಟಕಗಳು - ಸ೦ಸ
82.ಮಹಾಚೈತ್ರ - ಎಚ್. ಎಸ್. ಶಿವಪ್ರಕಾಶ
83.ಸಿರಿಸ೦ಪಿಗೆ - ಚ೦ದ್ರಶೇಖರ ಕ೦ಬಾರ
84.ಸಂಕ್ರಾಂತಿ - ಪಿ. ಲ೦ಕೇಶ
ಇತರೆ/ವ್ಯಕ್ತಿಚಿತ್ರಣ/ಆತ್ಮಚರಿತ್ರೆ/ವಿಜ್ಞಾನ/ಪ್ರವಾಸ ಕಥನ/ವಿಮರ್ಶೆ
85.ಜ್ಞಾಪಕ ಚಿತ್ರಶಾಲೆ - ಡಿ. ವಿ. ಗು೦ಡಪ್ಪ
86.ಮೂರು ತಲೆಮಾರು - ತ.ಸು. ಶಾಮರಾಯ
87.ಮರೆಯಲಾದೀತೆ? - ಬೆಳಗೆರೆ ಕೃಷ್ಣಶಾಸ್ತ್ರಿ
88.ದೇವರು - ಎ.ಎನ್. ಮೂರ್ತಿರಾವ್
89.ಇರುವುದೊಂದೇ ಭೂಮಿ - ನಾಗೇಶ ಹೆಗಡೆ
90.ಅಣ್ಣನ ನೆನಪು - ಕೆ.ಪಿ ಪೂರ್ಣಚ೦ದ್ರ ತೇಜಸ್ವಿ
91.ನಮ್ಮ ಊರಿನ ರಸಿಕರು - ಗೊರೂರು ರಾಮಸ್ವಾಮಿ ಅಯ್ಯಂಗಾರ್
92.ಹಸುರು ಹೊನ್ನು - ಬಿ.ಜಿ.ಎಲ್. ಸ್ವಾಮಿ
93.ಊರುಕೇರಿ - ಡಾ. ಸಿದ್ದಲಿಂಗಯ್ಯ
94.ಯಂತ್ರಗಳನ್ನು ಕಳಚೋಣ ಬನ್ನಿ - ಪ್ರಸನ್ನ
95.ಅಲೆಮಾರಿಯ ಅಂಡಮಾನ್ ಮತ್ತು ಮಹಾನದಿ ನೈಲ್ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ
96.ಅರೆ ಶತಮಾನದ ಅಲೆ ಬರಹಗಳು - ಕೆ.ವಿ. ಸುಬ್ಬಣ್ಣ
97.ಶಕ್ತಿಶಾರದೆಯ ಮೇಳ - ಡಾ.ಡಿ.ಆರ್. ನಾಗರಾಜ
98.ಹುಳಿಮಾವಿನ ಮರ - ಪಿ. ಲಂಕೇಶ
99.ವಚನ ಭಾರತ - ಎ.ಆರ್. ಕೃಷ್ಣಶಾಸ್ತ್ರೀ
100.ಹುಚ್ಚು ಮನಸ್ಸಿನ ಹತ್ತು ಮುಖಗಳು - ಶಿವರಾಮ ಕಾರಂತ.

ಕರಸ್ಥಲದ ಮಲ್ಲಿಕಾರ್ಜುನೊಡೆಯ

ವಚನಕಾರ
ಕರಸ್ಥಲದ ಮಲ್ಲಿಕಾರ್ಜುನೊಡೆಯ
ಅಂಕಿತ ನಾಮ
ಪರಮಗುರುಶಾಂತಮಲ್ಲಿಕಾರ್ಜುನ
ಕಾಲ

ದೊರಕಿರುವ ವಚನಗಳು
4 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ

ಹುಟ್ಟಿದ ಸ್ಥಳ

ಪರಿಚಯ


ಅಂತರಂಗದಲ್ಲಿ ಅರಿವಿಲ್ಲದವಂಗೆ
ಬಹಿರಂಗದಲ್ಲಿ ಕ್ರೀಯಿದ್ದು ಫಲವೇನು ? 
ಅದು ಕಣ್ಣಿಲ್ಲದವನ ಬಾಳುವೆಯಂತೆ. 
ಬಹಿರಂಗದಲ್ಲಿ ಕ್ರೀಯಿಲ್ಲದವಂಗೆ 
ಅಂತರಂಗದಲ್ಲಿ ಅರಿವಿದ್ದು ಫಲವೇನು ? 
ಅದು ಶೂನ್ಯಾಲಯದ ದೀಪದಂತೆ. 
ಅಂತರಂಗದ ಅರಿವು, ಬಹಿರಂಗದ ಕ್ರಿಯೆ- 
ಈ ಉಭಯಾಂಗವೊಂದಾಗಬೇಕು. 
ಅದೆಂತೆಂದಡೆ : 
ಅಂತಜ್ರ್ಞಾನ ಬಹಿಃಕ್ರಿಯಾ ಏಕೀಭಾವೋ ವಿಶೇಷತಃ 
ಎಂದುದಾಗಿ, 
ಅಂತರಂಗದಲ್ಲಿ ಅರಿವು, ಬಹಿರಂಗದಲ್ಲಿ ಕ್ರೀಯುಳ್ಳ ಮಹಾತ್ಮನೆ 
ಭಕ್ತನಪ್ಪ, ಮಹೇಶ್ವರನಪ್ಪ, ಪ್ರಸಾದಿಯಪ್ಪ 
ಪ್ರಾಣಲಿಂಗಿಯಪ್ಪ, ಶರಣನೈಕ್ಯನಪ್ಪ. 
ನಮ್ಮ ಪರಮಗುರು ಶಾಂತಮಲ್ಲಿಕಾರ್ಜುನ ತಾನೆಯಪ್ಪ. 

ಅಂಗೀಕಾರ


  • ಅರ್ಧಾಂಗಿ ಹೇಳಿದ ಮಾತುಗಳಿಗೆಲ್ಲ ಬೀಳುವ ಗಂಡನ ಮುದ್ರೆ

  •   ಒಪ್ಪಿಗೆಯ ಅಪ್ಪುಗೆಯನ್ನು ಬಣ್ಣಿಸುವ ಬಗೆ

  • ಮತ ಬೇರೆಯಾದರೂ ಮತಿ ಒಂದೇ ಆದರೆ ಸಿಗುವ ಸಹಮತಿ

  •  ಸುಮತಿ ಸುಮ್ಮನೇ ಬಂದು ಪತಿಯಲ್ಲಿ ಕೇಳುವ ಸಮ್ಮತಿ

  • ಅಡ್ಡಿಯಿಲ್ಲ ಎನ್ನುವ ಮೂಲಕ ಮಕ್ಕಳಿಗೆ ಅಂಗಿ-ಚೆಡ್ಡಿಗಳನ್ನು ಖರೀದಿಸಲು ಸೂಚಿಸುವ ಬೆಂಬಲ

ಕೃಪೆ: ವಿಶ್ವನಾಥ ಸು೦ಕಸಾಳ 


ಅಮ್ಮ ಎಂದು ಹೆಸರು...

ನಾವು ನಕ್ಕೆವು ಅವಳು ನಕ್ಕಳು
ನಾವು ಅತ್ತೆವು ಅವಳು ಅತ್ತಳು
ಹಸಿವಾದಾಗ ಹಾಲುಣಿಸುತ್ತಿದ್ದಳು 
ತನ್ನ ಕೈಯ ತುತ್ತ ತಿನಿಸುತ್ತಿದ್ದಳು..!

ಅವಳೇನು ಯಕ್ಷಿಣಿಯಲ್ಲ
ಅವಳೇನು ಸಂಗೀತ ಕಲಿತಿಲ್ಲ
ಸ್ವರ ಸಂಗತಿಗಳಂತೂ ಗೊತ್ತಿಲ್ಲ
ಆದರೂ ಹಾಡುತ್ತಿದ್ದಳು..!
ನಮಗಾಗಿ ಹಾಡುತ್ತಿದ್ದಳು, ಲಾಲಿಸಿ
ಚಂದಮಾಮನ ತೋರಿಸಿದಳು..!
ಹಾಗೇ ತಲೆಯ ನೆವರಿಸಿ ಹುಚ್ಚಿಯಂತೆ
ತಾರೆಗಳೊಂದಿಗೆ ಮಾತಾಡುತ್ತಿದ್ದಳು..!
ನಮಗಾಗಿ ಕೇವಲ ನಮಗಾಗಿ..!

ಅವಳು ಅಂಬಾನಿಯ ಮಗಳಲ್ಲ
ಟಾಟಾರ ಸಂಬಂಧಿಯೂ ಅಲ್ಲ
ಬಡತನದಲ್ಲೇ ಮಿಂದೆದ್ದವಳು
ಆದರೂ.. ನಾವು ಕೇಳಿದ್ದು 
ಎಂದಿಗೂ ಇಲ್ಲ ಎನ್ನುತ್ತಿದ್ದಿಲ್ಲ
ಕಾಸಿಗೆ ಕಾಸು ಕೂಡಿಡುತ್ತಿದ್ದಳು
ತನಗಾಗಿ ಅಲ್ಲ ನಮ್ಮೆಳಿಗೆಗಾಗಿ
ನಮಗಾಗಿ ಕೇವಲ ನಮಗಾಗಿ..!

ಅವಳು ಯಾವ ವಿದ್ಯಾಲಯದಲ್ಲೂ
ಓದಿಲ್ಲ ಹಾಗೇ ಪಧವಿಯೂ ಪಡೆದಿಲ್ಲ
ಆದರೆ ಅಕ್ಷರಭ್ಯಾಸ ಮಾಡಿಸುತ್ತಿದ್ದಳು
ನಮಗೆ ಬೇಕು ಬೇಡ ಹೇಳುತ್ತಿದ್ದಳು
ಪ್ರೀತಿಯ ಮೌಲ್ಯವನು ಹೇಳುತ್ತಿದ್ದಳು
ಮೊದಲ ಗುರುವಾಗಿ ನಿಂತಿದ್ದಳು
ನಮಗಾಗಿ ಕೇವಲ ನಮಗಾಗಿ..!

ಅವಳೇ ಇಡೀ ಜಗದ ಉಸಿರು
ಅವಳಿಗೆ ಅಮ್ಮ ಎಂದು ಹೆಸರು..!
                                                           ಕೃಪೆ: ಸಿದ್ದು ಗುಂಡ

ಅವಕಾಶಗಳು

ಕೆಲವರಿಗೆ ಅವಕಾಶಗಳು ತಾವೇ ಅರಸಿ ಬರುತ್ತವೆ


ಮತ್ತೆ ಕೆಲವರು ಅವಕಾಶಕ್ಕಾಗಿ ಅಲೆದಾಡುತ್ತಾರೆ

ಇನ್ನೂ ಕೆಲವರು ಅಹಂಕಾರದಿಂದ ವತಿ೯ಸಿ

ಸಿಕ್ಕ ಅವಕಾಶದಿಂದ ವಂಚಿತರಾಗುತ್ತಾರೆ.