fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | H𝐲𝐩𝐞𝐫 T𝐞𝐱𝐭 M𝐚𝐫𝐤𝐮𝐩 L𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಭಾನುವಾರ, ಏಪ್ರಿಲ್ 26, 2020

ಕೂಡಲಸಂಗಮೇಶ್ವರ


ವಚನಕಾರ
ಕೂಡಲಸಂಗಮೇಶ್ವರ 
ಅಂಕಿತ ನಾಮ
ಕೂಡಲಾದಿ ಚೆನ್ನಸಂಗಮದೇವ
ಕಾಲ

ದೊರಕಿರುವ ವಚನಗಳು
198 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ

ಹುಟ್ಟಿದ ಸ್ಥಳ

ಪರಿಚಯ


ಅಯ್ಯಾ, ಜೀವಾತ್ಮ ಭೇದವಾದಮಂ ಪೇಳ್ವೆನಯ್ಯಾ :
ಜೀವ ಬೇರೆ, ಆತ್ಮ ಬೇರೆ ಎಂದು ಹೇಳುವ[ವು] ಹಲವು ಶಾಸ್ತ್ರ ;
ಜೀವಾತ್ಮ ಐಕ್ಯ ಹೇ[ಳುವವು] ಹಲವು ಶಾಸ್ತ್ರ.
ಅ[ದು] ಎಂತೆಂದಡೆ:
ಸರ್ವ ಚೇತನದಲ್ಲಿಯು ಉಂಟು ಎಂದು ಹೇಳುವವು ಜೀವವು,
ಶಿವಶಾಸ್ತ್ರ ಇದಕ್ಕೆ ಸಾಕ್ಷಿ :
ಅಣೋರಣೀಯಾ[ನ್] ಮಹತೋ ಮಹೀಯಾ[ನ್]
ಎಂದು ಶ್ರುತಿಯುಂಟಾಗಿ, ಇದಂ ತಿಳಿದು, ಭೇದವಾದಿಗಳು
ಸರ್ವಜೀವರಲ್ಲಿಯು ಆತ್ಮವುಂಟಾದಡೆಯು
ಪಶುಜೀವಜಂತುಗಳಿಗೆ ನಮಸ್ಕಾರವ ಮಾಡಬಾರದೆ ? ಎಂದು
ಹೇಳುವ ಮಾಯಾವಾದಿಗಳು ನೀವು ಕೇಳಿ ;
ಅದು ಎಂತೆಂದಡೆ :
ಎಲಾ ಎಲಾ, ಉಚ್ಫಿಷ್ಟದಲ್ಲಿಯು ಅರ್ಕನ ಪ್ರಭೆ ಬಿದ್ದು ರಸ ಬತ್ತುವದು.
ಅದರ ರಸಾಸ್ವಾದವು ಅರ್ಕಂಗೆ ಮುಟ್ಟುವುದೆ ?
ಎಲಾ ಎಲಾ, ಸಿಲಹದಲ್ಲಿಯು ಸೂರ್ಯಪ್ರಭೆಯುಂಟು.
ಅಲ್ಲಿ ವಹ್ನಿಯು ಪುಟ್ಟುವು]ದೆ?]
ಇದರಂತೆ, ಸರ್ವ ಜೀವಜಂತುಗಳಲ್ಲಿ
ಮಾಯಾವಾದಿಗಳಲ್ಲಿ
ಆತ್ಮಪರೀಕ್ಷೆಯಿಲ್ಲದವರಲ್ಲಿ
[ದು]ಷ್ಟ ದುರ್ಜನರಲ್ಲಿ
ಶಿವಭಕ್ತರಾಗಿ ಲಿಂಗವ ಧರಿಸಿ
ದೇವರಾದರು ಸರಿಯೆ,
[ಬ್ರಾ]ಹ್ಮರಾಗಿ ಯಜ್ಞೋಪವೀತವ
ಹಾಕಿಕೊಂಡಿದ್ದರು ಸರಿಯೆ,
ಯತಿಗಳಾಗಿ ಮಂಡೆ ಬೋಳಿಸಿಕೊಂಡಿದ್ದರು ಸರಿಯೆ,
ಮಾರ್ಗ ತಪ್ಪಿ ನಡೆವ ಜೀವಜಂತುಗಳಲ್ಲಿ
ಸಿಲಹ ಉಚ್ಫಿಷ್ಟದ ಮೇಲೆ ಸೂರ್ಯನ ಪ್ರಭೆ ಬಿದ್ದಂತೆ
ಆತ್ಮ ಇದ್ದ ಕಾರಣ ಇವರಿಗೆ ಕೈಮುಗಿಯಲಾಗದು ಕಾಣಿರಯ್ಯಾ !
ಇ[ವ]ರೊಳಗೆ ಶಿವಯೋಗಿಗಳು ದಾರೆಂದು ಕೇಳುವ
ಮಾಯಾವಾದಿ ಕೇಳಲಾ.
ಅದು ಎಂತೆಂದಡೆ:
ಸೂರ್ಯನ ಪ್ರಕಾಶಕ್ಕೆ ಬಿಲದ್ವಾರವ ಸಿಲಹಂ ಪಿಡಿಯೆ
ಅರ್ಕನ ಪ್ರಕಾಶಕ್ಕೆ ವಹ್ನಿ ಪುಟ್ಟೆ
ಸರ್ವಕಾಷ*ವನು ಸುಡುವದು ಕಾಣೆಲಾ.
ಶಿವಾತ್ಮ ಐಕ್ಯವ ಮಾಡಿದಾ ಶಿವಯೋಗಿಗಳಲ್ಲಿ
ಸರ್ವಕರ್ಮೇಂದ್ರಿಯ ಈ ತೆರದಲ್ಲಿ ಸುಟ್ಟ ಕಾರಣ
ನಿರ್ಮಳಕಾಯರಾದರು.
ಇಂತಪ್ಪ ಜೀವಾತ್ಮವ ಐಕ್ಯವ ಮಾಡಿದ ಶಿವಯೋಗಿಗಳಲ್ಲಿ
ನಮಸ್ಕರಿಸಬಹುದು.
ಇಂತಾ ಜೀವಾತ್ಮ ವೇದವ ತಿಳಿಯದೆ
'ನಾ ಬ್ರಾಹ್ಮಣ' 'ನಾ ಶಿವಭಕ್ತ'ನೆಂದು ಹೇಳಿಕೊಂಡು ತಿರುಗುವ
ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ
ಕೂಡಲಾದಿ ಚನ್ನಸಂಗಮದೇವಾ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು