fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | H𝐲𝐩𝐞𝐫 T𝐞𝐱𝐭 M𝐚𝐫𝐤𝐮𝐩 L𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಮಂಗಳವಾರ, ನವೆಂಬರ್ 03, 2020

ಕನ್ನಡ ಇತಿಹಾಸ (2/11)

ಕೃಪೆ: ಕನ್ನಡದ ವಿಕಿಪೀಡಿಯ
ಇತಿಹಾಸ 

· ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪುರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿ ಸಂಸ್ಕೃತ ಭಾಷೆಯಿಂದ ಪ್ರಭಾವಿತವಾಗಿದ್ದು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. 

· ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ. ಈ ಲಿಪಿ ಎಡದಿಂದ ಬಲಕ್ಕೆ ಬರೆಯಲ್ಪಟ್ಟಿದ್ದು ಅದರಲ್ಲಿಯ ಸರಳ ಸುಂದರ, ಅಕ್ಷರಗಳು ಸುಲಭವಾಗಿ ಗುರುತಿಸುವಂತಿವೆ. ಈ ಅಕ್ಷರಗಳಿಗೆ ತಲೆಕಟ್ಟು ಇರುವುದಿಲ್ಲ. ಥ, ಪ, ಮ, ವ. ಲ, ಹ ಮುಂತಾದ ಅಕ್ಷರಗಳ ಬುಡಕಟ್ಟು ದುಂಡಾಗಿರುತ್ತವೆ. 

· ಸಂಸ್ಕೃತ ಬಾಷೆಯ ಖುಕಾರ, ವಿಸರ್ಗ, ಜಿಹ್ವಾ ಮೂಲೀಯ ಮತ್ತು ಉಪಧ್ಮಾನೀಯಗಳನ್ನು ನಿರ್ದೇಶಿಸುವ ಸಂಜ್ಞೆಗಳಿರುವುದಿಲ್ಲ. ಅದರಂತೆ ಪದಾದಿಯ ದೀರ್ಘ ಈ ಕಾರವಿಲ್ಲ. ಕರ್ಣಾಟಕದಲ್ಲಿ ಅಶೋಕನ ಬಾಹ್ಮೀ ಲಿಪಿಯ ಶಾನಗಳು ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಸಿದ್ದಾಪುರ ಮತ್ತು ಜಟಿಂಗ ರಾಮೇಶ್ವರ ಎಂಬ ಸ್ಥಳಗಳಲ್ಲಿಯೂ ರಾಯಚೂರು ಜಿಲ್ಲೆಯ ಮಾಸ್ಕಿ, ಪಾಲ್ಕಗುಂಡು ಮತ್ತು ಗವಿಮಠ ಎಂಬ ಸ್ಥಳಗಳಲ್ಲಿಯೂ ದೊರೆತಿವೆ. 

· ಅಶೋಕನ ಬ್ರಾಹ್ಮೀ ಲಿಪಿ ಮುಂದೆ 3ನೆಯ ಶತಮಾನದ ವರೆಗೆ ಶುಂಗ, ಕುಶಾನ, ಕ್ಷತ್ರಪ, ಆಂಧ್ರ, ಶಾತವಾಹನ ಮುಂತಾದ ಅರಸರ ಶಾಸನಗಳಲ್ಲಿ ಭಾರತದ ಬೇರೆ ಬೇರೆ ಭಾಗಗಳಲ್ಲಿ ವಿಕಾಸ ಹೊಂದಿರುತ್ತದೆ. ಕುಶಾನ ಕಾಲದ ಲಿಪಿಯ ಅಕ್ಷರಗಳು ಕಡಿಮೆ ಎತ್ತರವಾಗಿಯೂ ಅಗಲವಾಗಿಯೂ ದಪ್ಪವಾಗಿಯೂ ಇರುತ್ತವೆ. ಕ್ಷತ್ರಪ ಹಾಗೂ ಶಾತವಾಹನರ ಕಾಲದ ಲಿಪಿಗಳೂ ಹೆಚ್ಚು ಕಡಿಮೆ ಇದೇ ವೈಶಿಷ್ಟ್ಯಗಳನ್ನೊಳಗೊಂಡಿವೆ. 

· ಕರ್ಣಾಟಕದಲ್ಲಿ ಅಶೋಕನ ಬ್ರಾಹ್ಮೀ ಲಿಪಿಯ ಮುಂದಿನ ಹಂತವನ್ನು 2-3ನೆಯ ಶತಮಾನದ ಮಳವಳ್ಳಿ ಮತ್ತು ಬನವಾಸಿಯ ಸಾತಕರ್ಣಿಯ ಶಾಸನಗಳಲ್ಲಿ ಕಾಣುತ್ತೇವೆ. ಇಲ್ಲಿಯೂ ಅಕ್ಷರಗಳ ಎತ್ತರ ಕಡಿಮೆಯಾಗಿದ್ದು ಕೆಲವು ಅಕ್ಷರಗಳಿಗೆ ತ್ರಿಕೋಣಾಕೃತಿಯುಳ್ಳ ತಲೆಕಟ್ಟು ಇರುತ್ತದೆ. ಅಗಲವಾದ ತುದಿಯುಳ್ಳ ಲೇಖನಿಯನ್ನು ಉಪಯೋಗಿಸಿದ್ದರಿಂದ ಇಂಥ ತಲೆಕಟ್ಟುಗಳು ತಲೆದೋರಿವೆಯೆಂದು ಕೆಲವು ವಿದ್ವಾಂಸರು ಹೇಳುತ್ತಾರೆ. 

· ಅ, ಕ, ರ ಮುಂತಾದ ಅಕ್ಷರಗಳ ಲಂಬರೇಖೆಯ ಕೆಳಭಾಗ ವೃತ್ತಾಕಾರವಾಗಿ ಎಡಗಡೆ ಹೊರಳಿದೆ. ಇತ್ತೀಚೆಗೆ ಗುಲ್ಬರ್ಗಾ ಜಿಲ್ಲೆಯ ಸನ್ನತಿ ಎಂಬ ಸ್ಥಳದಲ್ಲಿ ದೊರೆತ 3ನೆಯ ಶತಮಾನದ ಶಾನಗಳಲ್ಲಿಯ ಕೆಲವು ಅಕ್ಷರಗಳು ಆಂಧ್ರಪ್ರದೇಶದ ನಾಗಾರ್ಜುನ ಕೊಂಡದ ಇಕ್ಷ್ವಾಕು ಅರಸರ ಶಾಸನಗಳ ಅಕ್ಷರಗಳಂತೆ ಸುಂದರವಾಗಿಯೂ ಅಂಕಾರಯುತವಾಗಿಯೂ ಕೆತ್ತಲ್ಪಟ್ಟಿವೆ. 


ಅರಸರ ಶಾಸನಗಳೂ 

· 4-5ನೆಯ ಶತಮಾನದ ಕದಂಬ ಅರಸರ ಶಾಸನಗಳಲ್ಲಿ ಕಂಡುಬರುವ ಕನ್ನಡ ಲಿಪಿ ಮುಂದಿನ ಬೆಳೆವಣಿಗೆಗೆ ತಳಹದಿಯಾಗಿದೆಯೆಂದು ಹೇಳಬಹುದು. ಈ ಕಾಲದಿಂದ ಕರ್ನಾಟಕದಲ್ಲಿ ಬಾಳಿ ಬೆಳಗಿದ ಗಂಗ, ಬಾದಾಮಿ ಚಾಳುಕ್ಯ, ರಾಷ್ಟ್ರಕೂಟ, ಕಲ್ಯಾಣಿ ಚಾಳುಕ್ಯ, ಕಳಚುರಿ, ಯಾದವ, ಹೊಯ್ಸಳ ಮತ್ತು ವಿಜಯನಗರದ ಅರಸರ ಸಾವಿರಾರು ಶಾಸನಗಳು ದೊರೆತಿದ್ದರಿಂದ ಕನ್ನಡ ಲಿಪಿಯ ಅವಿಚ್ಛನ್ನವಾದ ಬೆಳೆವಣಿಗೆಯನ್ನು ತಿಳಿದುಕೊಳ್ಳಲಿಕ್ಕೆ ಸಾಧ್ಯವಾಗಿದೆ. 

· ಕದಂಬ ಕಾಲದ ಕನ್ನಡ ಲಿಪಿಯ ಮುಖ್ಯವಾದ ವೈಶಿಷ್ಟ್ಯವೆಂದರೆ ಕೆಲವು ಶಾಸನಗಳ ಅಕ್ಷರಗಳಲ್ಲಿ ಕಂಡುಬರುವ ಚೌಕಾಕೃತಿಯ ತಲೆಕಟ್ಟು. ಇಂತ ತಲೆಕಟ್ಟು ಇದೇ ಕಾಲದ ಗುಪ್ತ ಅರಸರ ಮಾಳವದಲ್ಲಿರುವ ಶಾಸನಗಳಲ್ಲೂ ವಾಕಾಟಕ ಅರಸರ ಮಧ್ಯ; ಪ್ರದೇಶದಲ್ಲಿರುವ ಶಾಸನಗಳಲ್ಲೂ ಕಂಡುಬರುತ್ತದೆ. ಈ ತಲೆಕಟ್ಟು ಪೆಟ್ಟಿಗೆಯ ಆಕಾರವಿರುವುದರಿಂದ ಇಂಥ ಅಕ್ಷರಗಳಿಗೆ ಪೆಟ್ಟಿಗೆಯ ತಲೆಕಟ್ಟುಳ್ಳ ಅಕ್ಷರಗಳೆಂದು ಹೇಳುವುದುಂಟು. 

· ಕದಂಬ ಲಿಪಿಯ ಅಕ್ಷರಗಳು ಎತ್ತರದಲ್ಲಿ ಕಡಿಮೆಯಿದ್ದು ಹೆಚ್ಚಿಗೆ ದುಂಡಾಗುವ ಪ್ರವೃತ್ತಿಯನ್ನು ಹೊಂದಿರುತ್ತವೆ. ಇದರಲ್ಲಿ ಸಂಸ್ಕೃತ ಭಾಷೆಯ ವಿಸರ್ಗ, ಜಿಹ್ವಾಮೂಲೀಯ, ಉಪಧ್ಮಾನೀಯ ಮುಂತಾದುವನ್ನು ಸೂಚಿಸುವ ಸಂಜ್ಞೆಗಳನ್ನೂ ಕನ್ನಡ ಭಾಷೆಯ ಶಕಟರೇಫ, ವಿ ವಿ, ಮುಂತಾದುವನ್ನು ಸೂಚಿಸುವ ಸಂಜ್ಞೆಗಳನ್ನೂ ಸೇರಿಸಲಾಗಿದೆ. 6-8ನೆಯ ಶತಮಾನದಲ್ಲಾಳಿದ ಬಾದಾಮಿ ಚಳುಕ್ಯರ ಶಾಸನಗಳಲ್ಲಿ ಕನ್ನಡ ಲಿಪಿಯ ಮುಂದಿನ ಬೆಳೆವಣಿಗೆಯನ್ನು ಕಾಣುತ್ತೇವೆ. 

· ಈ ಲಿಪಿಯಲ್ಲಿ ಅಕ್ಷರಗಳ ತಲೆಕಟ್ಟು ಬಹು ಚಿಕ್ಕದಾದ ಸರಳರೇಖೆಯಿಂದೊಡಗೂಡಿರುತ್ತದೆ. ಕೆಲವು ಶಾಸನಗಳಲ್ಲಿ ಕ ಮತ್ತು ರ ಅಕ್ಷರಗಳ ಲಂಬ ರೇಖೆಯ ಎಡಭಾಗ ಮೇಲಕ್ಕೆ ಹೋಗಿ ಮೇಲ್ಭಾಗದ ಅಡ್ಡಗೆರೆಗೆ ಹೊಂದಿಕೊಂಡಿರುತ್ತದೆ. 8-10ನೆಯ ಶತಮಾನದ ರಾಷ್ಟ್ರಕೂಟರ ಶಾಸನಗಳಲ್ಲಿ ಪದಾದಿಯ ಅ ಮತ್ತು ಇ ಅಕ್ಷರಗಳು ಹೆಚ್ಚಿನ ಬೆಳೆವಣಿಗೆಯನ್ನು ವ್ಯಕ್ತಪಡಿಸುತ್ತವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು