ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಬುಧವಾರ, ಡಿಸೆಂಬರ್ 30, 2020

ಡಾ. ವಿಷ್ಣುವರ್ಧನ ರವರ ರಸ್ತೆ (ಬನಶಂಕರಿ - ಕೆಂಗೇರಿ 12.3 KM)


     ಕರ್ನಾಟಕದ ಕರ್ಣ, ಬಂಗಾರದ ಕಳಸ, ಸಿಂಹಾದ್ರಿಯ ಸಿಂಹ, ಸಾಹಸ ಸಿಂಹ, ಕರುನಾಡ ಜಮೀನ್ದಾರ್ರು, ಅಭಿನಯ ಭಾರ್ಗವ ಬಿರುದಾಂಕಿತ ಡಾ. ವಿಷ್ಣುವರ್ಧನ್ ಅವರ ಹೆಸರನ್ನು ಬೆಂಗಳೂರಿನ ಪ್ರಮುಖ ರಸ್ತೆಗೆ ಇಡುವ ಮೂಲಕ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಗೌರವ ಸೂಚಿಸುತ್ತಿದೆ.
     ಬೆಂಗಳೂರಿನ ಬನಶಂಕರಿಯಿಂದ ಕೆಂಗೇರಿ ತನಕ ಇರುವ ರಸ್ತೆಗೆ ದಿನಾಂಕ 2-2-2014ರಂದು 'ಡಾ. ವಿಷ್ಣುವರ್ಧನ ರಸ್ತೆ' ಎಂದು ನಾಮಕರಣ ಮಾಡಲಾಗಿದೆ. ಸುಮಾರು 12.3 ಕಿ.ಮೀ ಉದ್ದದ ರಸ್ತೆಗೆ ವಿಷ್ಣುವರ್ಧನ ಅವರ ಹೆಸರಿಡುತ್ತಿದ್ದಂತೆ ಹೊಸ ಇತಿಹಾಸ ನಿರ್ಮಾಣವಾಗಿದೆ. ದೇಶದಲ್ಲೇ ಅತಿ ಉದ್ದದ ರಸ್ತೆಗೆ ತನ್ನ ಹೆಸರನ್ನು ಹೊಂದಿದ ಏಕೈಕ ಕಲಾವಿದ ಎಂಬ ಕೀರ್ತಿ ವಿಷ್ಣು ಅವರಿಗೆ ಸಲ್ಲುತ್ತದೆ ಎಂದು ಡಾ. ವಿಷ್ಣುವರ್ಧನ ಸೇನಾ ಸಮಿತಿ ಹೇಳಿದೆ.
     ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಹೆಸರು ಚಿರಸ್ಥಾಯಿ 'ಡಿಟೆಕ್ಟೀವ್ ಸಾಹಸಸಿಂಹ' ಎಂಬ ಹೆಸರಿನಲ್ಲಿ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರು ಕಾಮಿಕ್ ಸ್ಟ್ರಿಪ್ ಸರಣಿಯನ್ನು ಹೊರತಂದಿದ್ದರು. ಆಪ್ತಮಿತ್ರ ಗೆಟೆಪ್ ನಲ್ಲಿ ಕಾಮಿಕ್ ಹೀರೋ ಆಗಿ ವಿಷ್ಣುವರ್ಧನ್ ಅವರನ್ನು ಪರಿಚಯಿಸಲಾಗಿದೆ. ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 7 ಅಡಿಗಳ ಕಂಚಿನ ಪುತ್ಥಳಿಯನ್ನು ಮಾರ್ಚ್ 1, 2012 ರಂದು ಬೆಂಗಳೂರಿನ ಗೌರಿಪಾಳ್ಯದಲ್ಲಿ ಅನಾವರಣ ಮಾಡಲಾಗಿದೆ.
     ಪಾರ್ಕ್: ಪಟ್ಟಾಭಿರಾಮನಗರ ವ್ಯಾಪ್ತಿಯ ಜಯನಗರ 4ನೇ "ಟಿ" ಬ್ಲಾಕ್ ಬಡಾವಣೆಯ 28ನೇ ಮುಖ್ಯರಸ್ತೆ ಹಾಗೂ 35ನೇ ಅಡ್ಡರಸ್ತೆ ನಡುವಿರುವ ವಿಶ್ರಾಂತಿ ವನಕ್ಕೆ 'ಡಾ. ವಿಷ್ಣುವರ್ಧನ್ ವಿಶ್ರಾಂತಿ ವನ' ಎಂದು ನಾಮಕರಣ ಮಾಡಲಾಗಿದೆ. ಇದಲ್ಲದೆ ಬಳ್ಳಾರಿಯಲ್ಲಿ ಕನ್ನಡ ಚಿತ್ರರಂಗದ ಮೇರುನಟ ಡಾ.ವಿಷ್ಣು ಹೆಸರಿನಲ್ಲಿ ಜಿಂದಾಲ್ ಅವರು ನಿರ್ಮಿಸಿರುವ ಪಾರ್ಕ್ ಅನ್ನು ಸಾರ್ವಜನಿಕರಿಗೆ ಮಕ್ತಗೊಂಡಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು