fly

🍩🥧🍬🧁🍭🥕🍅🥦🍆🥔🌽🥑ʕ·͡ᴥ·ʔ仝ಇತ್ತೀಚಿನ ಸುದ್ದಿ仝ʕ·͡ᴥ·ʔ🥑🌽🥔🍆🥦🍅🥕🍭🧁🍬🥧🍩

𝕤 𝕙𝕚𝕧𝕒𝕜𝕦𝕞𝕒𝕣 . 𝕡 . 𝕟 𝕖𝕘𝕚𝕞𝕒𝕟𝕚 => 𝕤𝕡𝕟𝟛𝟙𝟠𝟟 | ಕನ್ನಡದ ಟೆ ಲಿ ಗ್ರಾ ಮ ಲಿಂಕ್| ಮಕ್ಕಳ ಗೀತೆಗಳು| ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ, ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ ☺ ☻ (ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ,ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯಕ್ಕಿಂತ, ಕೂಲಿ ಮಾಡೋದ್ ಲೇಸು.) WELCOME TO 2022

ಲೇಬಲ್‌ಗಳು

ನಿಮಗೆ ಗೋತ್ತೆ ? (105) ಅಮ್ಮ (102) ಸಾಮಾನ್ಯ ಜ್ಞಾನ (72) ಸಂದೇಶ (66) ವಚನ (62) ಚಿತ್ರ - ವಿ-ಚಿತ್ರ (59) ಈ ಕ್ಷಣ (53) ಪದದ ಸುತ್ತ (53) ಕನ್ನಡ ಗೀತೆ (50) ನುಡಿಮುತ್ತು (47) ಮಕ್ಕಳ ಹಾಡು (47) ಪರಿಸರ ತಿಳಿ (42) ತಿಂಗಳ ಟಾಪ್ 3 (40) ವಿಚಿತ್ರವಾದರು ಸತ್ಯ (37) ರಂಗೋಲಿ (34) ಪ್ರವಾಸಿ ತಾಣ (30) ನದಿಗಳು (29) ಪ್ರಾಣಿ / ಪಕ್ಷಿ ಜಗತ್ತು (29) ಶಾಯರಿಗಳು (24) ಹಚ್ಚೆ ಮಾತು (24) ಕೈಯಲ್ಲಿ ಆರೋಗ್ಯ (23) ಬೆನ್-ಹ್ಯಾಮ್ (23) ಸರಳ ಕಲೆ (23) ಹಬ್ಬ (23) ಕಾಲ (22) ನಗೆ ಟಾನಿಕ್ (21) ಗೂಗಲ್(Google) (20) ಚರಿತ್ರೆ (19) ವಿಶೇಷ ದಿನಗಳು (17) ಅಡುಗೆ ಮನೆ (16) ಸಾಧಕರ ಸಾಲು (16) ಕ್ರೀಡೆ (13) ನಕಲು ಪೋಸ್ಟರ್-ಗಳೂ (13) ಸಂಸ್ಥೆ ಸ್ಥಾಪಕರು (12) ಹಾಸ್ಯ ಕಥೆ (11) ಯೋಗಾಸನ (10) ಸಂಶೋಧನೆ (10) ಕನ್ನಡ (9) ಡಾ || ವಿಷ್ಣುವರ್ಧನ (9) ನಗೆ ವ್ಯತ್ಯಾಸ (8) ಪದ ಬಂಧ (7) ಮತದಾನ (7) ಮೆಟ್ಟಿಲುಗಳು (7) ಶಬ್ದಾರ್ಥ (6) ಸಾಂಕ್ರಾಮಿಕ ರೋಗ (6) ಅ-ಅಃ (4) ಕನ್ನಡ ಚಿತ್ರಗಳ ಪಟ್ಟಿ-1934-.. (4) ಕವನ (4) A-Z (3) ಪ್ರಯೋಗ ಶಾಲೆ (3) ಹೊಸ ನೋಟು (3) ಅಳಿಸು(Delete) (2) ಗೌತಮ ಬುದ್ಧ (2) ಶರಣರು (2) ಇತರೆ (1) ಕಂಪ್ಯೂಟರ (1) ಕೊರೊನಾ ಸಾಲು (1) ತಿಂಗಳ ತತ್ವ (1) ಫಲಿತಾಂಶ (1) ಸಂಬಂಧ (1)

ನನ್ನಜ್ಜಿ ಲೆಕ್ಕ (ನಮ್ಮ ಅಮ್ಮಮ್ಮ)

ನನ್ನಜ್ಜಿ ಕಾಲದ
ಬಾಯ್ ಲೆಕ್ಕ
ಗೋಡೆಗೆ ಗೀಟಾಕಿದರೆ ಒಂದು ಲೆಕ್ಕ
ಹುಂಡಾಕಿದರೆ ಇನ್ನೊಂದು ಲೆಕ್ಕ
ಸುಣ್ಣದುಂಡೇಲಿ
ಬರೀತಿದ್ದ ಲೆಕ್ಕ
ಇಲ್ಲಿ ಈಗ ಬರಿ
ಕಂಪ್ಯೂಟರ್ ಲೆಕ್ಕ.

ಹುಂಡಿಟ್ಟರೆ ಹಾಲ್ಲೆಕ್ಕ
ಗೀಟಾಕಿದರೆ ಬಾಳೆಕಾಯಿ ಲೆಕ್ಕ
ನಂಗೂ ಅಥ೯ ಆಗ್ತಿರಲಿಲ್ಲ
ಆ ಪಾಟಿ ಗಣಿತದ ಲೆಕ್ಕ
ಉಟ್ಟುಂಡು ಎಲೆ ಅಡಿಕೆ
ಮೆದ್ದ ಕೆಂಪನೆ ಬಾಯಲ್ಲಿ
ಬರಿ ಬಾಯಲೆಕ್ಕ ಹೇಳತಿದ್ರು
ಮಗ್ಗಿ ಗಿಗ್ಗಿ ಸೀದಾ ಉಲ್ಟಾ
ಹೇಗೆ ಬೇಕಾದರು ಉದುರುತ್ತಿತ್ತು
ಓದು ಬರಹ ಕಲಿತಿಲ್ಲ
ಪೆನ್ನು ಪುಸ್ತಕ ಕಂಡಿಲ್ಲ.

ನೆನಪಿಗೆ ಹಾಕುತ್ತಿದ್ದರು
ಸೆರಗಿಗೆ ಗಂಟು
ಒಂದಾಕಿದರೆ ಕೊಡೊ ಲೆಕ್ಕ
ಎರಡಾಕಿದರೆ ಇಸ್ಕೋಳ್ಳೊ ಲೆಕ್ಕ
ಬಡ್ಡಿ ಗಿಡ್ಡಿ ಏನಿಲ್ಲ ರೊಕ್ಕಕ್ಕೆ
ಕಷ್ಟಕ್ಕಾಗದ ರೊಕ್ಕ ಇಟ್ಕಂಡೇನು ಪ್ರಯೋಜನ
ಊಟಕ್ಕಿಲ್ಲದ ಉಪ್ಪಿನ ಕಾಯಿ..‌‌…ಸಮ
ಹೇಳಿ ಬಾಯಿ ಮುಚ್ಚಿಸುವ ತಾಕತ್ತಿತ್ತು
ಈಗೆಲ್ಲಿ ಕಾಣಲಿ ನನ್ನಜ್ಜಿ ನಿಯತ್ತು
ಬಹುಶಃ ಹಳ್ಳೀಲೂ
ಮಾಯವಾಗಿರಬೇಕು ಈ ಜಾಣೆಯ ಲೆಕ್ಕ.

ಕಾಲ ಕೆಟ್ಟಿಲ್ಲ ಕಾಲ ನಾವೇ ಕೆಡಿಸಿದ್ದು
ಲೋಕಾರೂಢಿ ಮಾತಾಡ್ತಿದ್ದ ನನ್ನಜ್ಜಿ
ಬೆಂಗಳೂರು ಗಲ್ಲಿ ಗಲ್ಲಿ ತಿರುಗಬೇಕು
ಅನ್ನೊ ಆಸೆ ಅವರಿಗೆ ಇರಲಿಲ್ಲ
ಕುದುರೆ ರೇಸು ನೋಡದೆ ಬಿಡಲಿಲ್ಲ
ಚಪ್ಪಲಿ ಮೆಟ್ಟದ ಕಾಲಲ್ಲಿ
ಊರಿಂದ ಊರಿಗೆ ಹೋಗತಿದ್ರು
ಯಕ್ಷಗಾನ, ಪ್ರಸಂಗದ ಗೀಳಿಟ್ಟಕಂಡು
ಅವರ ಉಮೇದಿಗೆ ಹೊಡಿಬೇಕ್ರಿ ಒಂದು ಸಲಾಮ್.

ಹದಿಮೂರಕ್ಕೆ ಮೂವತ್ತೆರಡವನ ವರಿಸಿ
ರಕ್ತ ಹೊಟ್ಬ್ಯಾನೆ ಬಂದು
ಹದಿನಾರಕ್ಕೆ ಗಂಡ ಸತ್ತು
ಬೋಳಿಸಿಬಿಟ್ಟರು ತಲೆ
ಬಳೆ ತೊಟ್ಟ ಕೈ
ರೂಪ ವಿಕಾರಗೊಳಿಸಿ
ಕೆಂಪು ಸೀರೆ ಸೆರಗು
ತಲೆ ಮೇಲಿಂದ ಮುಚ್ಕಂಡು
ಕಂಕಳಲ್ಲಿ ನನ್ನಪ್ಪನೆಂಬ ಕೂಸಿಟ್ಕಂಡು
ಯೌವನವನ್ನೇ ಮರೆತು.
ದಾಯಾದಿ ಅಡಿಯಾಳಾಗಿ
ಬಿಸಿಲಿಲ್ಲ ಬೆಂಕಿಯಿಲ್ಲ
ಜೀತಗೈದ ಅವರ ಬಾಳು
ಮಟ ಮಟ ಮಧ್ಯಾಹ್ನ
ಉರಿಬಿಸಿಲು ಲೆಕ್ಕಕ್ಕಿಲ್ಲ
ಕೊಟ್ಟಿಗೆ ಹಸು ಎಮ್ಮೆ ಮೇಯಿಸಿ
ಮೈ ತಡವಿ ಕಣ್ಣೀರಿಟ್ಟು
ತಮ್ಮ ನೋವ ಮರೀತಿದ್ರು .

ಕೊನೆವರೆಗೂ ನಮಗೆಲ್ಲ ಹರಸ್ತಿದ್ರು
ಹಂಗಿನರಮನೆಗಿಂತ ಇಂಗಡದ ಗುಡಿ ಲೇಸು
ಬದುಕುವುದಕ್ಕೂ ಹೇಳಿಕೊಟ್ಟರು
ತಮ್ಮನುಭವದ ಲೆಕ್ಕ.

ಗೂಗಲ ಪುಟದ ವಿಚಿತ್ರಗಳು (Google revolving Pages) 18

 ಸುತ್ತುವಿಕೆ @ಸಪನ3187

ಇಂದಿಗೂ ಪ್ರವೇಶಿಸಬಹುದಾದ ಮೋಜಿನ ಗೂಗಲ್ ಟ್ರಿಕ್, ಸುತ್ತುವುದು.
ಅರ್ಥ: ಗೂಗಲ್ ಪೇಜನ್ನು ಈಗಲೂ ಅದನ್ನು ಸುತ್ತವಂತೆ ಮಾಡುತ್ತದೆ. 

ನಮ್ಮ ನಂಬಿಕೆಗಳು 2


ನಾವೇಕೆ ತುಳಸಿ ಗಿಡಗಳನ್ನು ಪೂಜಿಸುತ್ತೇವೆ?
ಹಿಂದೂ ಧರ್ಮವು "ತುಳಸಿ" ಗಿಡಕ್ಕೆ ಮಾತೃ ಸ್ಥಾನವನ್ನು ನೀಡಿ ಗೌರವಿಸಿದೆ. "ಪವಿತ್ರ ತುಳಸಿ" ಎಂದು ಸಹ ಕರೆಯಲ್ಪಡುವ ತುಳಸಿಯು ಭಾರತದಲ್ಲಿಯಷ್ಟೇ ಅಲ್ಲದೆ ಪ್ರಪಂಚದ ಇತರ ಭಾಗಗಳಲ್ಲೂ ಸಹ ಪೂಜ್ಯನೀಯ ಸ್ಥಾನವನ್ನು ಪಡೆದು, ಧಾರ್ಮಿಕ, ಆಧ್ಯಾತ್ಮಿಕವಾಗಿ ಪರಿಗಣಿಸಲ್ಪಡುತ್ತಿದೆ. ವೇದ ಕಾಲದ ಋಷಿ ಮುನಿಗಳಿಗೆ ಇದರ ಪ್ರಯೋಜನಗಳು ಚೆನ್ನಾಗಿ ತಿಳಿದಿದ್ದವು. ಆದ್ದರಿಂದಲೇ ಅವರು ಇದಕ್ಕೆ ಮಾತೃ ಸ್ಥಾನವನ್ನು ನೀಡಿ, ಪ್ರತಿಯೊಬ್ಬರ ಮನೆಯಲ್ಲಿ ಇದನ್ನು ಬೆಳೆಯ ಬೇಕೆಂಬ ಸಂದೇಶವನ್ನು ರವಾನಿಸಿದರು. ಹೀಗಾಗಿ ಇಂದು ಅಕ್ಷರಸ್ಥರು ಮತ್ತು ಅನಕ್ಷರಸ್ಥರು ಎಂಬ ಬೇಧ ಭಾವವಿಲ್ಲದೆ ಎಲ್ಲರ ಮನೆಯಲ್ಲೂ ತುಳಸಿಯನ್ನು ನಾವು ಕಾಣ ಬಹುದು. ಇದನ್ನು ನಾವು ಮನೆಯಲ್ಲಿ ಬೆಳೆಸುವ ಮೂಲಕ ಸಸ್ಯವನ್ನು ನಾವು ರಕ್ಷಿಸುತ್ತಿದ್ದೇವೆ, ಏಕೆಂದರೆ ಇದು ಮನುಕುಲದ ಸಂಜೀವಿನಿ ಎಂಬ ಕಾರಣಕ್ಕಾಗಿ. ತುಳಸಿಯಲ್ಲಿ ಔಷಧೀಯ ಗುಣಗಳ ಆಗರವೇ ಅಡಗಿರುವುದು ಎಲ್ಲರಿಗೂ ತಿಳಿದ ವಿಚಾರವೇ. ಇದೊಂದು ಅದ್ಭುತವಾದ ಆ್ಯಂಟಿ ಬಯೋಟಿಕ್. ಪ್ರತಿದಿನ ಚಹಾ ಜೊತೆಗೆ ತುಳಸಿಯನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿಯು ಹೆಚ್ಚಾಗುತ್ತದೆ ಹಾಗು ಕುಡಿಯುವವರಿಗೆ ರೋಗಗಳು ಕಾಡುವ ಅಪಾಯವಿರುವುದಿಲ್ಲ. ಆತನ ಆರೋಗ್ಯ ಸ್ಥಿತಿ ಸಮತೋಲನದಲ್ಲಿರುವುದರ ಜೊತೆಗೆ, ಆತನ ಆಯುಸ್ಸು ಸಹ ಹೆಚ್ಚಾಗುತ್ತದೆ. ತುಳಸಿ ಸಸ್ಯಗಳನ್ನು ಮನೆಯಲ್ಲಿ ಇರಿಸಿ ಕೊಳ್ಳುವುದರಿಂದ ಮನೆಯೊಳಗೆ ಸೊಳ್ಳೆ ಮುಂತಾದ ಕೀಟಗಳು ಪ್ರವೇಶಿಸುವುದನ್ನು ತಡೆಗಟ್ಟ ಬಹುದು. ನಂಬಿಕೆಗಳ ಪ್ರಕಾರ ಹಾವುಗಳು ಸಹ ತುಳಸಿ ಗಿಡದ ಬಳಿಗೆ ಹೋಗುವ ಧೈರ್ಯವನ್ನು ಮಾಡುವುದಿಲ್ಲವಂತೆ. ಬಹುಶಃ ಅದಕ್ಕೆ ಇರಬೇಕು ಪ್ರಾಚೀನ ಕಾಲದ ಜನರು ತುಳಸಿಯನ್ನು ತಮ್ಮ ಮನೆಯ ಸಮೀಪದಲ್ಲಿ ಬೆಳೆಸುತ್ತಿದ್ದುದು.

ಗೂಗಲ್ (Google)


 • ಪ್ರಕಾರ ಸಾರ್ವಜನಿಕ
 • ಸ್ಥಾಪನೆ Menlo Park, California (ಸಪ್ಟೆಂಬರ್ 4, 1998)
 • ಸಂಸ್ಥಾಪಕ(ರು) ಸೆರ್ಗೆ ಬ್ರಿನ್, Larry Page
 • ಮುಖ್ಯ ಕಾರ್ಯಾಲಯ ಮೌಂಟನ್ ವ್ಯೂ, Mountain View, California, U.S.
 • ವ್ಯಾಪ್ತಿ ಪ್ರದೇಶ Worldwide
 • ಪ್ರಮುಖ ವ್ಯಕ್ತಿ(ಗಳು) ಎರಿಕ್ ಶ್ಮಿಟ್(Executive Chairman)
 • ಲ್ಯಾರಿ ಪೇಜ್ (Co-founder & CEO)
 • ಸೆರ್ಗೆ ಬ್ರಿನ್ (Co-founder)
 • ಉದ್ಯಮ Internet, Computer software, Telecoms equipment
 • ಉತ್ಪನ See list of Google products
 • ಆದಾಯ US$ 50.18 billion (2012)
 • ಕಾರ್ಯಕಾರಿ ಆದಾಯ US$ 12.76 billion (2012)
 • ಲಾಭ US$ 10.74 billion (2012)
 • ಒಟ್ಟು ಆಸ್ತಿ US$ 93.80 billion (2012)
 • ಒಟ್ಟು ಶೇರುಗಳು US$ 71.72 billion (2012)
 • ಉದ್ಯೋಗಿಗಳು 46,421 (Q3 2013)
 • ಉಪಾಂಗ ಸಂಸ್ಥೆಗಳು AdMob, DoubleClick, On2 Technologies, Picnik, ಯೂಟ್ಯೂಬ್‌, Zagat, Waze, Blogger, SlickLogin, Boston Dynamics, Bump, DeepMind, WIMM One, VirusTotal, X, Motorola Mobility, Google.org, Google Store, Keyhole, Inc, Google China, ITA Software, ImageAmerica, Kaltix, FeedBurner, Nest Labs, Neotonic Software, PeakStream, Postini, Google Affiliate Network, dMarc Broadcasting, G Suite, Google Cloud Platform, GV, Endoxon, Google Energy, BufferBox, Google (Switzerland), Google (Ireland), Google Canada, Google Voice, Waymo, Nest Labs, ಗೂಗಲ್ ಆಡ್ ವರ್ಡ್ಸ್(adwords), Urchin Software Corporation
 • ಅಂತರಜಾಲ ತಾಣ www.google.com

ಮಬ್ಬು ಮಬ್ಬು / ತಬ್ಬು ತಬ್ಬುಪಬ್ಬಿನ ಒಳಗೆ ಹೋದರೆ ಬೆಳಕು ಬರೇ ಮಬ್ಬು ಮಬ್ಬು

ಪಬ್ಬಿನ ಒಳಗೆ ಹೋದರೆ ಬೆಳಕು ಬರೇ ಮಬ್ಬು ಮಬ್ಬು
**
ಅಮಲೇರಿದ ನಂತರ ಹೇಳುತ್ತಾರೆ ಬಾ ನೀ ನನ್ನ ತಬ್ಬು ತಬ್ಬು