೧೩) ನಮಸ್ಕಾರ ಮಾಡಲು ಎರಡು ಅಂಗೈಗಳನ್ನು ಜೋಡಿಸುವುದು:
ಹಿಂದೂ ಸಂಪ್ರದಾಯದಲ್ಲಿ ಅತಿಥಿಗಳನ್ನು ಅಥವಾ ಹಿರಿಯರನ್ನು ಕಂಡಾಗ ಅವರನ್ನು ಸ್ವಾಗತಿಸಲು "ನಮಸ್ಕಾರ" ಮುದ್ರೆ ಎಂದರೆ ಎರಡು ಅಂಗೈಗಳನ್ನು ಜೋಡಿಸುವ ಕ್ರಿಯೆಯನ್ನು ಮಾಡಲಾಗುತ್ತದೆ. ಇನ್ನು ಇದರ ಹಿಂದಿನ ವೈಜ್ಞಾನಿಕ ಸತ್ಯಾಂಶವನ್ನು ನೋಡುವುದಾದರೆ, ನಮಗೆ ತಿಳಿದು ಬರುವುದು ಇಷ್ಟು. ಎರಡು ಕೈಗಳ ಅಂಗೈಗಳನ್ನು ಪರಸ್ಪರ ಜೋಡಿಸುವುದರಿಂದ ಹತ್ತು ಬೆರಳುಗಳು ಪರಸ್ಪರ ಕೂಡುತ್ತವೆ. ಆಗ ಕಣ್ಣು, ಕಿವಿ ಮತ್ತು ಮನಸ್ಸಿನ ಒತ್ತಡ ಕೇಂದ್ರಗಳು ಒಂದನ್ನೊಂದು ತಾಕುತ್ತವೆ. ಇದರಿಂದ ನಮಗೆ ಪರಿಚಯವಾಗುವ ವ್ಯಕ್ತಿಯ ಹೆಸರನ್ನು ದೀರ್ಘಕಾಲ ನಾವು ನೆನಪಿನಲ್ಲಿ ಇಟ್ಟು ಕೊಳ್ಳಲು ಸಾಧ್ಯವಾಗುತ್ತದೆ. ಇದರ ಜೊತೆಗೆ ನಾವು ದೈಹಿಕವಾಗಿ ಆ ವ್ಯಕ್ತಿಯನ್ನು ಸ್ಪರ್ಶಿಸಲು ಹೋಗದ ಕಾರಣ, ಯಾವುದೇ ಕೀಟಾಣುಗಳು ಸಹ ನಮ್ಮ ಸಂಪರ್ಕಕ್ಕೆ ಬರುವುದಿಲ್ಲ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.