೧೪) ಸಾಮಾನ್ಯವಾಗಿ ನದಿ ನೀರಿನಲ್ಲಿ ನಾಣ್ಯಗಳನ್ನು ಎಸೆಯುವುದು:
ಸಾಮಾನ್ಯವಾಗಿ ನದಿ ನೀರಿನಲ್ಲಿ ನಾಣ್ಯಗಳನ್ನು ಎಸೆಯುವುದರಿಂದ ಅದೃಷ್ಟವು ನಮಗೆ ದೊರೆಯುತ್ತದೆ ಎಂದು ಹೇಳಲಾಗುತ್ತದೆ. ಆದರೆ ವೈಜ್ಞಾನಿಕವಾಗಿ ಹೇಳುವುದಾದರೆ ಹಿಂದಿನ ಕಾಲದಲ್ಲಿ ನಾಣ್ಯಗಳನ್ನು ಬಹುತೇಕ ತಾಮ್ರದಲ್ಲಿಯೇ ಮಾಡಲಾಗುತ್ತಿತ್ತು. ಆದರೆ ಇಂದು ಸ್ಟೇನ್‍ಲೆಸ್ ಸ್ಟೀಲ್‍ನಲ್ಲಿ ಮಾಡಲಾಗುತ್ತಿದೆ. ತಾಮ್ರವು ಒಂದು ಅದ್ಭುತವಾದ ಲೋಹವಾಗಿದ್ದು, ಮಾನವನ ದೇಹಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಇಂತಹ ಪ್ರಯೋಜನಕಾರಿಯಾದ ತಾಮ್ರದ ನಾಣ್ಯಗಳನ್ನು ನದಿಯಲ್ಲಿ ಎಸೆಯುವುದರಿಂದ ನದಿಯ ನೀರು ಶುದ್ಧವಾಗುವುದರ ಜೊತೆಗೆ ಆ ಮೂಲಕ ಸ್ವಲ್ಪ ತಾಮ್ರವು ನಮ್ಮ ದೇಹವನ್ನು ಸೇರುವ ವ್ಯವಸ್ಥೆಯನ್ನು ನಮ್ಮ ಪೂರ್ವಜರು ಮಾಡಿದ್ದರು. ಇದು ಒಂದು ಸಂಪ್ರದಾಯವಾಗಿ ಇಂದಿಗೂ ನಡೆದು ಕೊಂಡು ಬಂದಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.