೧೭) ನವರಾತ್ರಿಗಳು ಏಕೆ ಇವೆ?
ನೂರಾರು ಅಥವಾ ಸಾವಿರಾರು ವರ್ಷಗಳ ಹಿಂದಿನ ಜೀವನಕ್ಕೂ ಮತ್ತು ಇಂದಿನ ಜೀವನಕ್ಕೂ ಅಜಗಜಾಂತರ ವ್ಯತ್ಯಾಸಗಳಿವೆ. ಇಂದು ನಾವು ಆಚರಿಸುತ್ತಿರುವ ಎಷ್ಟೋ ಸಂಪ್ರದಾಯಗಳು ಇಂದು- ನಿನ್ನೆ ಜನ್ಮ ತಾಳಿದವಲ್ಲ. ಅವುಗಳೆಲ್ಲವು ಹಿಂದೆಂದೊ ಜನ್ಮ ತಳೆದಿವೆ. ನೀವು ಎಂದಾದರು ಆಲೋಚಿಸಿದ್ದೀರೇ? ನಾವೇಕೆ ವರ್ಷಕ್ಕೆ ಒಂದು ದೀಪಾವಳಿ, ಹೋಳಿಯನ್ನು ಆಚರಿಸುತ್ತೇವೆ ಆದರೆ ನವರಾತ್ರಿಯನ್ನು ಮಾತ್ರ ಎರಡು ಬಾರಿ ಆಚರಿಸುತ್ತೇವೆ. ಹೌದು ವಸಂತ ನವರಾತ್ರಿ ಮತ್ತು ಶರನ್ನಾವರಾತ್ರಿ ಎಂದು ನಾವು ಆಚರಿಸುತ್ತೇವೆ. ಈ ಎರಡು ಮಾಸಗಳು ಋತು ಬದಲಾವಣೆಯನ್ನು ಹೊಂದಿರುವ ಮಾಸಗಳಾಗಿದ್ದು, ನಮ್ಮ ಆಹಾರ ಸೇವನೆಯ ಕ್ರಮವು ಈ ಅವಧಿಯಲ್ಲಿ ಪರಸ್ಪರ ಬದಲಾವಣೆಯಿಂದ ಕೂಡಿರುತ್ತದೆ. ನವರಾತ್ರಿಗಳು ನಮ್ಮನ್ನು ನಾವು ಈ ಆಹಾರ ಪದ್ಧತಿಗೆ ಹೊಂದಿ ಕೊಳ್ಳುವಂತೆ ಮಾಡುವ ಗುಣಗಳನ್ನು ಹೊಂದಿದೆ. ಅದು ಹೇಗೆಂದರೆ ಆಸ್ತಿಕ ಭಕ್ತಸಮೂಹವು ಈ ನವರಾತ್ರಿಗಳ ಸಂದರ್ಭದಲ್ಲಿ ಉಪವಾಸವಿರುತ್ತಾರೆ. ಇದರಿಂದ ಅವರು ಹೊಸ ಆಹಾರ ಶೈಲಿಗೆ ಒಗ್ಗಿ ಕೊಳ್ಳುತ್ತಾರೆ. ಈ ಅವಧಿಯಲ್ಲಿ ಜನರು ಉಪ್ಪು ಮತ್ತು ಸಕ್ಕರೆಯನ್ನು ಮಿತ ಪ್ರಮಾಣದಲ್ಲಿ ಸೇವಿಸುತ್ತಾರೆ. ಇದರಿಂದಾಗಿ ಹೆಚ್ಚಿನ ಧನಾತ್ಮಕ ಶಕ್ತಿಯನ್ನು, ಆತ್ಮ ವಿಶ್ವಾಸವನ್ನು ಮತ್ತು ದೃಢ ನಿರ್ಧಾರದ ಶಕ್ತಿಯನ್ನು (ಉಪವಾಸ ಮಾಡುವುದರಿಂದ ದೃಢ ನಿರ್ಧಾರ ಕೈಗೊಳ್ಳುವ ಶಕ್ತಿಯು ಹೆಚ್ಚಾಗುತ್ತದೆ) ಹೆಚ್ಚಿಸುತ್ತದೆ ಮತ್ತು ಕೊನೆಗೆ ಆ ಋತುವಿನಲ್ಲಿ ಸಂಭವಿಸುವ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ದೇಹಕ್ಕೆ ನೀಡುತ್ತದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.