fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | H𝐲𝐩𝐞𝐫 T𝐞𝐱𝐭 M𝐚𝐫𝐤𝐮𝐩 L𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶುಕ್ರವಾರ, ಸೆಪ್ಟೆಂಬರ್ 09, 2022

ನಮ್ಮ ನಂಬಿಕೆಗಳು 21

೨೧) ಉತ್ತರಕ್ಕೆ ತಲೆ ಇಟ್ಟು ಏಕೆ ಮಲಗ ಬಾರದು? ಇದರ ಹಿಂದೆ ಒಂದು ಕಟ್ಟು ಕತೆಯಿದೆ, ಅದೇನೆಂದರೆ ಉತ್ತರಕ್ಕೆ ತಲೆ ಇಟ್ಟು
     ಮಲಗುವುದರಿಂದ ದೆವ್ವ ಅಥವಾ ಭೂತಗಳನ್ನು ಆಹ್ವಾನ ನೀಡಿದಂತೆ ಎಂಬುದು. ಆದರೆ ವಿಜ್ಞಾನವು ಹೇಳುವುದೇನೆಂದರೆ ಮಾನವ ದೇಹಕ್ಕೆ ತನ್ನದೇ ಆದ ಕಾಂತ ಕ್ಷೇತ್ರವು ಇರುತ್ತದೆ (ಇದನ್ನು ಹೃದಯದ ಕಾಂತ ಅಥವಾ ಮ್ಯಾಗ್ನೆಟಿಕ್ ಕ್ಷೇತ್ರ ಎಂದು ಸಹ ಕರೆಯುತ್ತಾರೆ. ಏಕೆಂದರೆ ರಕ್ತ ಪರಿಚಲನೆಯ ಕಾರಣವಾಗಿ) ಮತ್ತು ಭೂಮಿಯೇ ಒಂದು ದೊಡ್ಡ ಸೂಜಿಗಲ್ಲು ಅಥವಾ ಮ್ಯಾಗ್ನೆಟ್. ಯಾವಾಗ ನಾವು ಉತ್ತರಕ್ಕೆ ತಲೆ ಇಟ್ಟು ಮಲಗುತ್ತೇವೆಯೋ, ಆಗ ನಮ್ಮ ದೇಹದಲ್ಲಿನ ಕಾಂತ ಕ್ಷೇತ್ರವು ಸಮತೋಲನವನ್ನು ಕಳೆದು ಕೊಳ್ಳುತ್ತದೆ. ಇದರಿಂದ ಮುಂದೆ ರಕ್ತದೊತ್ತಡ ಮತ್ತು ಹೃದ್ರೋಗದಂತಹ ಸಮಸ್ಯೆಗಳು ಕಂಡು ಬರುತ್ತವೆ. ಆದ್ದರಿಂದ ಈ ಕಾಂತ ಕ್ಷೇತ್ರದ ಸಮತೋಲನವನ್ನು ಕಾಯ್ದು ಕೊಳ್ಳುವುದು ಅತ್ಯಗತ್ಯ. ಇದರ ಜೊತೆಗೆ ನಮ್ಮ ದೇಹದಲ್ಲಿ ಹರಿಯುವ ರಕ್ತದಲ್ಲಿ ಕಬ್ಬಿಣಾಂಶವಿರುತ್ತದೆ. ನಾವು ಉತ್ತರ ದಿಕ್ಕಿಗೆ ತಲೆಯಿಟ್ಟು ಮಲಗುವುದರಿಂದ ಆ ಕಾಂತ ಕ್ಷೇತ್ರದಿಂದ ಆಕರ್ಷಣೆಯಾಗುವ ನಮ್ಮ ದೇಹದ ಕಬ್ಬಿಣಾಂಶವು ತಲೆಯಲ್ಲಿ ಶೇಖರಗೊಳ್ಳುತ್ತದೆ. ಇದರಿಂದ ತಲೆನೋವು , ಅಲ್ಜೀಮರ್ ಕಾಯಿಲೆ, ಪ್ರಜ್ಞಾ ಶೂನ್ಯತೆ ( ಅರಿವಿನ ಕೊರತೆ), ಪಾರ್ಕಿನ್‍ಸನ್ ಕಾಯಿಲೆ ಮತ್ತು ಮೆದುಳಿನ ಕಾರ್ಯ ಕ್ಷೀಣಿಸುವ ಸಮಸ್ಯೆಗಳನ್ನು ಎದುರಿಸ ಬೇಕಾಗುತ್ತದೆ.

ಗುರುವಾರ, ಸೆಪ್ಟೆಂಬರ್ 01, 2022

ಸೆಪ್ಟಂಬರ್ ತಿಂಗಳ ಮಹತ್ವದ ದಿನಗಳು

ಸೆಪ್ಟೆಂಬರ್ ೫ : ಭಾರತದ ರಾಷ್ಟ್ರಪತಿಯಾಗಿದ್ದ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬದ ನೆನಪಿನಲ್ಲಿ ಶಿಕ್ಷಕರ ದಿನಾಚರಣೆ.
ಸೆಪ್ಟೆಂಬರ್ ೬ : ೧೫೨೨ರಲ್ಲಿ ಫೆರ್ಡಿನೆಂಡ್ ಮೆಗಲನ್ನೇತೃತ್ವದಲ್ಲಿ ಹೊರಟಿದ್ದ ವಿಕ್ಟೋರಿಯ ಹಡಗು ೨೬೫ ದಿನಗಳ ನಂತರ ಪ್ರಪಂಚವನ್ನು ಸುತ್ತಿ ಬಂದ ಮೊದಲ ಹಡಗಾಯಿತು.
ಸೆಪ್ಟೆಂಬರ್ ೮ : 1) ಯೇಸುಕ್ರಿಸ್ತನ ತಾಯಿ ಮರಿಯಾ ಮಾತೆಯ ಜನನೋತ್ಸವ.
                      2) ಪೂರ್ಣಚಂದ್ರ ತೇಜಸ್ವಿಯವರ ಹುಟ್ಟು ಹಬ್ಬ.
' ಪೂರ್ಣಚಂದ್ರ ತೇಜಸ್ವಿ'
ಸೆಪ್ಟೆಂಬರ್ ೧೧ :೨೦೦೧ರಲ್ಲಿಅಮೇರಿಕ ದೇಶದನ್ಯೂ ಯಾರ್ಕ್ ನಗರದವರ್ಲ್ಡ್ ಟ್ರೇಡ್ ಸೆಂಟರ್ ಕಟ್ಟಗಳ ಮೇಲೆ ಭಯೋತ್ಪಾದಕರಿಂದ ಅಪಹರಿಸಲ್ಪಟ್ಟ ವಿಮಾನಗಳಿಂದ ದಾಳಿ 
.
ಸೆಪ್ಟೆಂಬರ್ ೧೪ : ೧೯೫೯ರಲ್ಲಿ ಸೋವಿಯೆಟ್ ಒಕ್ಕೂಟ ಉಡಾವಣೆ ಮಾಡಿದ ಲೂನ ೨ ಗಗನನೌಕೆ ಚಂದ್ರನನ್ನು ತಲುಪಿದ ಮೊದಲ ಮಾನವ ನಿರ್ಮಿತ ವಸ್ತು ಆಯಿತು.
ಸೆಪ್ಟೆಂಬರ್ ೧೫ : ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮದಿನ. ಅವರ ಹುಟ್ಟುಹಬ್ಬದ ನೆನಪಿನಲ್ಲಿ ಎಂಜಿನಿಯರುಗಳ ದಿನಾಚರಣೆ
ಸೆಪ್ಟೆಂಬರ್ ೨೩ : ವಿಶ್ವಸಂಸ್ಥೆಯ ಮಧ್ಯಸ್ಥಿಕೆಯಿಂದ ೧೯೬೫ರ ಭಾರತ ಪಾಕಿಸ್ತಾನದ ಯುದ್ಧದಲ್ಲಿ ಕದನ ವಿರಾಮ.
ಸೆಪ್ಟೆಂಬರ್ ೨೮ : ಭಾರತದ ಸ್ವಾತಂತ್ರ್ಯ ಹೋರಾಟಗಾರಕ್ರಾಂತಿಕಾರಿ ಭಗತ್ ಸಿಂಗ್ ಅವರ ಜನ್ಮದಿನ.
ಸೆಪ್ಟೆಂಬರ್ ೩೦ : 1) ಯಹೂದಿ ಧರ್ಮದಲ್ಲಿ ರೋಷ್ ಹಶಾನ್ನ ಹಬ್ಬ. 
                        2)  ವಿಶ್ವ ಹೃದಯ ದಿನ
ಕೃಪೆ: ಕನ್ನಡದ ವಿಕಿಪೀಡಿಯ 
(ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ)

1.. ಜಾಹೀರಾತು

2.ಜಾಹೀರಾತು