೨೧) ಉತ್ತರಕ್ಕೆ ತಲೆ ಇಟ್ಟು ಏಕೆ ಮಲಗ ಬಾರದು? ಇದರ ಹಿಂದೆ ಒಂದು ಕಟ್ಟು ಕತೆಯಿದೆ, ಅದೇನೆಂದರೆ ಉತ್ತರಕ್ಕೆ ತಲೆ ಇಟ್ಟು
ಮಲಗುವುದರಿಂದ ದೆವ್ವ ಅಥವಾ ಭೂತಗಳನ್ನು ಆಹ್ವಾನ ನೀಡಿದಂತೆ ಎಂಬುದು. ಆದರೆ ವಿಜ್ಞಾನವು ಹೇಳುವುದೇನೆಂದರೆ ಮಾನವ ದೇಹಕ್ಕೆ ತನ್ನದೇ ಆದ ಕಾಂತ ಕ್ಷೇತ್ರವು ಇರುತ್ತದೆ (ಇದನ್ನು ಹೃದಯದ ಕಾಂತ ಅಥವಾ ಮ್ಯಾಗ್ನೆಟಿಕ್ ಕ್ಷೇತ್ರ ಎಂದು ಸಹ ಕರೆಯುತ್ತಾರೆ. ಏಕೆಂದರೆ ರಕ್ತ ಪರಿಚಲನೆಯ ಕಾರಣವಾಗಿ) ಮತ್ತು ಭೂಮಿಯೇ ಒಂದು ದೊಡ್ಡ ಸೂಜಿಗಲ್ಲು ಅಥವಾ ಮ್ಯಾಗ್ನೆಟ್. ಯಾವಾಗ ನಾವು ಉತ್ತರಕ್ಕೆ ತಲೆ ಇಟ್ಟು ಮಲಗುತ್ತೇವೆಯೋ, ಆಗ ನಮ್ಮ ದೇಹದಲ್ಲಿನ ಕಾಂತ ಕ್ಷೇತ್ರವು ಸಮತೋಲನವನ್ನು ಕಳೆದು ಕೊಳ್ಳುತ್ತದೆ. ಇದರಿಂದ ಮುಂದೆ ರಕ್ತದೊತ್ತಡ ಮತ್ತು ಹೃದ್ರೋಗದಂತಹ ಸಮಸ್ಯೆಗಳು ಕಂಡು ಬರುತ್ತವೆ. ಆದ್ದರಿಂದ ಈ ಕಾಂತ ಕ್ಷೇತ್ರದ ಸಮತೋಲನವನ್ನು ಕಾಯ್ದು ಕೊಳ್ಳುವುದು ಅತ್ಯಗತ್ಯ. ಇದರ ಜೊತೆಗೆ ನಮ್ಮ ದೇಹದಲ್ಲಿ ಹರಿಯುವ ರಕ್ತದಲ್ಲಿ ಕಬ್ಬಿಣಾಂಶವಿರುತ್ತದೆ. ನಾವು ಉತ್ತರ ದಿಕ್ಕಿಗೆ ತಲೆಯಿಟ್ಟು ಮಲಗುವುದರಿಂದ ಆ ಕಾಂತ ಕ್ಷೇತ್ರದಿಂದ ಆಕರ್ಷಣೆಯಾಗುವ ನಮ್ಮ ದೇಹದ ಕಬ್ಬಿಣಾಂಶವು ತಲೆಯಲ್ಲಿ ಶೇಖರಗೊಳ್ಳುತ್ತದೆ. ಇದರಿಂದ ತಲೆನೋವು , ಅಲ್ಜೀಮರ್ ಕಾಯಿಲೆ, ಪ್ರಜ್ಞಾ ಶೂನ್ಯತೆ ( ಅರಿವಿನ ಕೊರತೆ), ಪಾರ್ಕಿನ್‍ಸನ್ ಕಾಯಿಲೆ ಮತ್ತು ಮೆದುಳಿನ ಕಾರ್ಯ ಕ್ಷೀಣಿಸುವ ಸಮಸ್ಯೆಗಳನ್ನು ಎದುರಿಸ ಬೇಕಾಗುತ್ತದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.