fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಮಂಗಳವಾರ, ಅಕ್ಟೋಬರ್ 04, 2022

ನವರಾತ್ರಿಗಳು ಯಾಕೆ ಇದ್ದಾವೆ?

       ನೂರಾರು ಅಥವಾ ಸಾವಿರಾರು ವರ್ಷಗಳ ಹಿಂದಿನ ಜೀವನಕ್ಕೂ ಮತ್ತು ಇಂದಿನ ಜೀವನಕ್ಕೂ ಅಜಗಜಾಂತರ ವ್ಯತ್ಯಾಸಗಳು ನಮಗೆ ಕಂಡುಬರುತ್ತವೆ. ಇಂದು ನಾವು ಆಚರಿಸುತ್ತಿರುವ ಎಷ್ಟೋ ಸಂಪ್ರದಾಯಗಳು ಇಂದು-ನಿನ್ನೆ ಜನ್ಮ ತಾಳಿದವಲ್ಲ. ಅವುಗಳೆಲ್ಲವು ಹಿಂದೆಂದೊ ಜನ್ಮ ತಳೆದಿವೆ. ನೀವು ಎಂದಾದರು ಆಲೋಚಿಸಿದ್ದೀರೇ? ನಾವೇಕೆ ವರ್ಷಕ್ಕೆ ಒಂದು ದೀಪಾವಳಿ, ಹೋಳಿಯನ್ನು ಆಚರಿಸುತ್ತೇವೆ ಆದರೆ ನವರಾತ್ರಿಯನ್ನು ಮಾತ್ರ ಎರಡು ಬಾರಿ ಆಚರಿಸುತ್ತೇವೆ. ಹೌದು ವಸಂತ ನವರಾತ್ರಿ ಮತ್ತು ಶರನ್ನಾವರಾತ್ರಿ ಎಂಬ ಎರಡು ನವರಾತ್ರಿಗಳನ್ನು ನಾವು ಆಚರಿಸುತ್ತೇವೆ.

        ಈ ಎರಡು ಮಾಸಗಳು ಋತು ಬದಲಾವಣೆಯನ್ನು ಹೊಂದಿರುವ ಮಾಸಗಳಾಗಿದ್ದು, ನಮ್ಮ ಆಹಾರ ಸೇವನೆಯ ಕ್ರಮವು ಈ ಅವಧಿಯಲ್ಲಿ ಪರಸ್ಪರ ಬದಲಾವಣೆಯಿಂದ ಕೂಡಿರುತ್ತದೆ. ನವರಾತ್ರಿಗಳು ನಮ್ಮನ್ನು ನಾವು ಈ ಆಹಾರ ಪದ್ಧತಿಗೆ ಹೊಂದಿಕೊಳ್ಳುವಂತೆ ಮಾಡುವ ಗುಣಗಳನ್ನು ಹೊಂದಿದೆ. ಅದು ಹೇಗೆಂದರೆ ಆಸ್ತಿಕ ಭಕ್ತ ಸಮೂಹವು ಈ ನವರಾತ್ರಿಗಳ ಸಂದರ್ಭದಲ್ಲಿ ಉಪವಾಸವಿರುತ್ತಾರೆ. ಇದರಿಂದ ಅವರು ಹೊಸ ಆಹಾರ ಶೈಲಿಗೆ ಒಗ್ಗಿಕೊಳ್ಳುತ್ತಾರೆ. ಈ ಅವಧಿಯಲ್ಲಿ ಜನರು ಉಪ್ಪು ಮತ್ತು ಸಕ್ಕರೆಯನ್ನು ಮಿತ ಪ್ರಮಾಣದಲ್ಲಿ ಸೇವಿಸುತ್ತಾರೆ. ಇದರಿಂದಾಗಿ ಹೆಚ್ಚಿನ ಧನಾತ್ಮಕ ಶಕ್ತಿಯನ್ನು, ಆತ್ಮ ವಿಶ್ವಾಸವನ್ನು ಮತ್ತು ದೃಢ ನಿರ್ಧಾರದ ಶಕ್ತಿಯನ್ನು (ಉಪವಾಸ ಮಾಡುವುದರಿಂದ ದೃಢ ನಿರ್ಧಾರ ಕೈಗೊಳ್ಳುವ ಶಕ್ತಿಯು) ಹೆಚ್ಚಿಸುತ್ತದೆ ಮತ್ತು ಕೊನೆಗೆ ಆ ಋತುವಿನಲ್ಲಿ ಸಂಭವಿಸುವ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ದೇಹಕ್ಕೆ ನೀಡುತ್ತದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು