ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ📶
ಬುಧವಾರ, ಡಿಸೆಂಬರ್ 31, 2014
ಶುಕ್ರವಾರ, ಡಿಸೆಂಬರ್ 26, 2014
ಅಗ್ಘವಣಿ ಹಂಪಯ್ಯ -1
ಅಂಕಿತ ನಾಮ:
ಹಂಪೆಯ ಏರುತಯ್ಯ
ಕಾಲ: 1300
ದೊರಕಿರುವ ವಚನಗಳು: 4 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ: ಕುಂತಳ ದೇಶದ ಮುಕುಂದಪುರ
ಪರಿಚಯ: ಕಾಲ. ಸು. 1300. ಕುಂತಳ ದೇಶದ ಮುಕುಂದಪುರದವನು. ಅಗ್ಘವಣಿ ಅಥವ ಶುದ್ಧ ನೀರನ್ನು ಭಕ್ತರಿಗೆ
ಕಾಲ: 1300
ದೊರಕಿರುವ ವಚನಗಳು: 4 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ: ಕುಂತಳ ದೇಶದ ಮುಕುಂದಪುರ
ಪರಿಚಯ: ಕಾಲ. ಸು. 1300. ಕುಂತಳ ದೇಶದ ಮುಕುಂದಪುರದವನು. ಅಗ್ಘವಣಿ ಅಥವ ಶುದ್ಧ ನೀರನ್ನು ಭಕ್ತರಿಗೆ
ಒದಗಿಸುವ ಕಾಯಕ ನಡೆಸುತ್ತಿದ್ದ. ಈತನ 14 ವಚನಗಳು ದೊರೆತಿವೆ.
ಪಂಚಾಕ್ಷರಿ ಮಂತ್ರದ ಮಹಿಮೆ,
ಭಕ್ತನ ಸ್ಥಿತಿಗಳ ವರ್ಣನೆ ಈತನ ವಚನಗಳ ಮುಖ್ಯ ಆಸಕ್ತಿ.
ಹುಸಿಯ ನುಡಿಯನು ಭಕ್ತ, ವ್ಯಸನಕ್ಕೆಳಸನು ಭಕ್ತ,
ವಿಷಯಂಗಳಾತಂಗೆ ತೃಣವು ನೋಡಾ, ಬಯಸುವವನಲ್ಲ ಭಕ್ತ.
ದಯೆಯೆಂಬುದು ತನ್ನ ಕೈಯಲ್ಲಿ, ಸ್ಮರಣೆಯೆಂಬುದು ತನಗೆ ತೊತ್ತಾಗಿಪ್ಪುದು.
ಕೋಪವೆಂಥದೆಂದರಿಯ,
ವಿಷಯಂಗಳಾತಂಗೆ ತೃಣವು ನೋಡಾ, ಬಯಸುವವನಲ್ಲ ಭಕ್ತ.
ದಯೆಯೆಂಬುದು ತನ್ನ ಕೈಯಲ್ಲಿ, ಸ್ಮರಣೆಯೆಂಬುದು ತನಗೆ ತೊತ್ತಾಗಿಪ್ಪುದು.
ಕೋಪವೆಂಥದೆಂದರಿಯ,
ತಾಪತ್ರಯಂಗಳು ಮುಟ್ಟಲಮ್ಮವು, ವ್ಯಾಪ್ತಿಗಳಡಗಿದವು.
ಲಿಂಗವನೊಳಕೊಂಡ ಪರಿಣಾಮಿ.
ಆತನ ಪಥ ಲೋಕಕ್ಕೆ ಹೊಸತು, ಲೋಕದ ಪಥವಾತನಿಗೆ ಹೊಸತು.
ತನಗೊಮ್ಮೆಯು ಲಿಂಗಧ್ಯಾನ, ಲಿಂಗಕೊಮ್ಮೆಯು ತನ್ನ ಧ್ಯಾನ.
ಘನಘನಮಹಿಮೆಯ ಹೊಗಳಲೆನ್ನಳವಲ್ಲ.
ಪನ್ನಗಧರ ಕೇಳಯ್ಯಾ, ಚೆನ್ನ ಹಂಪೆಯ ವಿರುಪಯ್ಯಾ,
ನಿಮ್ಮ ನಂಬಿದ ಸತ್ಯಶರಣ ಪರಿಣಾಮಿ.
ಲಿಂಗವನೊಳಕೊಂಡ ಪರಿಣಾಮಿ.
ಆತನ ಪಥ ಲೋಕಕ್ಕೆ ಹೊಸತು, ಲೋಕದ ಪಥವಾತನಿಗೆ ಹೊಸತು.
ತನಗೊಮ್ಮೆಯು ಲಿಂಗಧ್ಯಾನ, ಲಿಂಗಕೊಮ್ಮೆಯು ತನ್ನ ಧ್ಯಾನ.
ಘನಘನಮಹಿಮೆಯ ಹೊಗಳಲೆನ್ನಳವಲ್ಲ.
ಪನ್ನಗಧರ ಕೇಳಯ್ಯಾ, ಚೆನ್ನ ಹಂಪೆಯ ವಿರುಪಯ್ಯಾ,
ನಿಮ್ಮ ನಂಬಿದ ಸತ್ಯಶರಣ ಪರಿಣಾಮಿ.
-------------> ಅಗ್ಘವಣಿ ಹಂಪಯ್ಯ
ಅಗ್ಘವಣಿ ಹಂಪಯ್ಯ -2
ಹಂಸಪತಿ ಗರುಡಪತಿ ವೃಷಭಪತಿ
ಮೊದಲಾದ ಸರ್ವಜೀವಾಧಿಪತಿ
ದೇವರಾಯ ಮಹಾರಾಯನ ಅರಸುತನ ಹೊಸತು:
ಓಲಗಕ್ಕೆ ಬಾರ, ಸಿಂಹಾಸನದಲ್ಲಿ ಕುಳ್ಳಿರ,
ಸ್ತ್ರೀಲಂಪಟನಾಗಿ ಅಂತಃಪುರವ ಬಿಟ್ಟು ಹೊರವಂಡ.
ಕಪ್ಪಕಾಣಿಕೆಯನೊಪ್ಪಿಸಿಕೊಂಬವರಿಲ್ಲ,
ಗುರುವೆಂಬ ತಳವಾರನ ಆಜ್ಞೆ ಕೆಟ್ಟಿತ್ತು,
ತೆರೆದ ಬಾಗಿಲ ಮುಚ್ಚುವರಿಲ್ಲ,
ಮುಚ್ಚಿದ ಬಾಗಿಲ ತೆರೆವವರಿಲ್ಲ.
ಹಂಪೆಯ ವಿರುಪಯ್ಯನ ಅರಸುತನ ಕೆಟ್ಟಿತ್ತು,
ಭಕ್ತರೆಂಬವರಿನ್ನು ಬದುಕಲೇ ಬಾರದು.
ಮೊದಲಾದ ಸರ್ವಜೀವಾಧಿಪತಿ
ದೇವರಾಯ ಮಹಾರಾಯನ ಅರಸುತನ ಹೊಸತು:
ಓಲಗಕ್ಕೆ ಬಾರ, ಸಿಂಹಾಸನದಲ್ಲಿ ಕುಳ್ಳಿರ,
ಸ್ತ್ರೀಲಂಪಟನಾಗಿ ಅಂತಃಪುರವ ಬಿಟ್ಟು ಹೊರವಂಡ.
ಕಪ್ಪಕಾಣಿಕೆಯನೊಪ್ಪಿಸಿಕೊಂಬವರಿಲ್ಲ,
ಗುರುವೆಂಬ ತಳವಾರನ ಆಜ್ಞೆ ಕೆಟ್ಟಿತ್ತು,
ತೆರೆದ ಬಾಗಿಲ ಮುಚ್ಚುವರಿಲ್ಲ,
ಮುಚ್ಚಿದ ಬಾಗಿಲ ತೆರೆವವರಿಲ್ಲ.
ಹಂಪೆಯ ವಿರುಪಯ್ಯನ ಅರಸುತನ ಕೆಟ್ಟಿತ್ತು,
ಭಕ್ತರೆಂಬವರಿನ್ನು ಬದುಕಲೇ ಬಾರದು.
-----> ಅಗ್ಘವಣಿ ಹಂಪಯ್ಯ
ಗುರುವಾರ, ಡಿಸೆಂಬರ್ 25, 2014
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆವ ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
